ಚಿಕ್ಕಮಗಳೂರು ಏರ್-ಸ್ಟ್ರಿಪ್ ನಿರ್ಮಾಣ; ಸಂಪುಟ ಸಭೆಗೆ ಕಡತ ಮಂಡಿಸಲು ಸೂಚನೆ

Date:

Advertisements

ಪ್ರವಾಸೋದ್ಯಮ ಮತ್ತು ವಾಣಿಜ್ಯ ವ್ಯವಹಾರಗಳಿಗೆ ಉತ್ತೇಜನ ನೀಡಲು ಚಿಕ್ಕಮಗಳೂರಿನಲ್ಲಿ ಏರ್-ಸ್ಟ್ರಿಪ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಬಾಕಿ ಇರುವ ಭೂಸ್ವಾಧೀನ ಪ್ರಕ್ರಿಯೆಯ ಪರಿಹಾರದ ಬಾಬ್ತಿನ 17.06 ಕೋಟಿ ರೂ.ಗಳನ್ನು ತ್ವರಿತವಾಗಿ ಬಿಡುಗಡೆ ಮಾಡುವ ಉದ್ದೇಶದಿಂದ ಈ ಯೋಜನೆಯ ಪ್ರಸ್ತಾವನೆಯನ್ನು ಮುಂಬರುವ ಸಚಿವ ಸಂಪುಟ ಸಭೆಗೆ ಮಂಡಿಸಲು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.

2023-24ರ ಬಜೆಟ್ ನಲ್ಲಿ ಘೋಷಿಸಿದ್ದ ಚಿಕ್ಕಮಗಳೂರು ಮತ್ತು ಕೊಡಗು ಏರ್-ಸ್ಟ್ರಿಪ್ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಅವರು ಮತ್ತು ಇಂಧನ ಸಚಿವರೂ ಆದ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ ಜೆ ಜಾರ್ಜ್ ಅವರ ಜತೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಗುರುವಾರ ವಿಧಾನಸೌಧದಲ್ಲಿ ಸಭೆ ನಡೆಸಿ, ಸೂಕ್ತ ಆದೇಶ ನೀಡಿದರು.

“ಚಿಕ್ಕಮಗಳೂರು ಏರ್-ಸ್ಟ್ರಿಪ್ ಯೋಜನೆಗೆ ಅಲ್ಲಿನ ಜಿಲ್ಲಾಡಳಿತವು ಚಿಕ್ಕಮಗಳೂರು-ಹಿರೇಮಗಳೂರು ನಡುವೆ ಈಗಾಗಲೇ 137 ಎಕರೆ ಜಮೀನು ನೀಡಿದೆ. ಈ ಪೈಕಿ 120 ಎಕರೆ ಸರಕಾರಿ ಜಮೀನೇ ಆಗಿದೆ. ಉಳಿದ 17.1 ಎಕರೆ ಮಾತ್ರ ಖಾಸಗಿಯಾಗಿದ್ದು, ಇದರ ಸ್ವಾಧೀನ ಬಾಕಿ ಇದೆ. ಇದಕ್ಕೆ 24.6 ಕೋಟಿ ರೂ. ವೆಚ್ಚವಾಗಲಿದ್ದು, ಈಗಾಗಲೇ 7 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಉಳಿದಿರುವ 17.6 ಕೋಟಿ ರೂ.ಗಳ ಬಿಡುಗಡೆ ಬಾಕಿ ಇದೆ” ಎಂದು ವಿವರಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಇದು ‘ಬಲಿಷ್ಠರು’ ಬೆತ್ತಲಾಗುವ ಕಾಲ

“ಉದ್ದೇಶಿತ ಏರ್-ಸ್ಟ್ರಿಪ್ ನಲ್ಲೇ ಹೆಲಿಪೋರ್ಟ್ ಕೂಡ ಅಭಿವೃದ್ಧಿಪಡಿಸಲಾಗುವುದು. ಜತೆಗೆ ಮುಂಬರುವ ದಿನಗಳಲ್ಲಿ ಬೃಹತ್ ವಿಮಾನಗಳ ಪ್ರಯಾಣಕ್ಕೂ ಅನುಕೂಲವಾಗುವ ಹಾಗೆ ನಿಲ್ದಾಣ ಅಭಿವೃದ್ಧಿ ಪಡಿಸುವ ಉದ್ದೇಶ ಇಟ್ಟುಕೊಳ್ಳಬೇಕು. ಪೂರಕವಾಗಿ ಅಕ್ಕಪಕ್ಕದ ಜಮೀನು ಗುರುತಿಸುವುದು. ಮುಂದಿನ ದಿನಗಳಲ್ಲಿ ಇದನ್ನು ಸ್ವಾಧೀನ ಪಡಿಸಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಲಾಗುವುದು. ಇದಕ್ಕೆ ಕೆಎಸ್ಐಐಡಿಸಿ ವತಿಯಿಂದ ಪರಿಣತರ ತಂಡವನ್ನು ಕಳಿಸಲಾಗುವುದು” ಎಂದು ತಿಳಿಸಿದ್ದಾರೆ.

“ಇದೇ ರೀತಿಯಲ್ಲಿ ಕೊಡಗಿನಲ್ಲಿ ಏರ್-ಸ್ಟ್ರಿಪ್ ನಿರ್ಮಾಣಕ್ಕೆ ಅಗತ್ಯವಿರುವ ಭೂಮಿಯ ಸ್ವಾಧೀನಕ್ಕೆ ಸಂಬಂಧಿಸಿದಂತೆ ಸಮಸ್ಯೆ ತಲೆದೋರಿದೆ. ಇದನ್ನು ಆದಷ್ಟು ಬೇಗ ಬಗೆಹರಿಸಿ, ಜಾಗವನ್ನು ಗುರುತಿಸಬೇಕು ಎಂದು ನಿರ್ದೇಶನ ನೀಡಲಾಗಿದೆ” ಎಂದು ಪಾಟೀಲ್ ಮಾಹಿತಿ ನೀಡಿದ್ದಾರೆ.

ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಎನ್ ಮಂಜುಳಾ, ಕೆಎಸ್ಐಐಡಿಸಿ ವ್ಯವಸ್ಥಾಪಕ ನಿರ್ದೇಶಕಿ ಖುಷ್ಬೂ ಗೋಯಲ್, ಕೆಐಎಡಿಬಿ ಸಿಇಒ ಡಾ.ಮಹೇಶ ಅವರು ಸಭೆಯಲ್ಲಿ ಹಾಜರಿದ್ದರು. ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ವರ್ಚುಯಲ್ ರೂಪದಲ್ಲಿ ಸಭೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X