ಬಜೆಟ್‌ 23-24 | ಶಿಡ್ಲಘಟ್ಟದಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ

Date:

Advertisements

ಕೋಲಾರ, ಚಿಕ್ಕಬಳ್ಳಾಪುರ ಮತ್ತು ಸುತ್ತಮುತ್ತಲಿನ ರೈತರಿಗೆ ಅನುಕೂಲವಾಗುವಂತೆ ಶಿಡ್ಲಘಟ್ಟದಲ್ಲಿನ ಮಾರುಕಟ್ಟೆಯನ್ನು 75 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ರೇಷ್ಮೆಗೂಡು ಮಾರುಕಟ್ಟೆಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಬಜೆಟ್‌ ಭಾಷಣದಲ್ಲಿ ರೇಷ್ಮೆ ವಿಚಾರವಾಗಿ ವಿಷಯ ಪ್ರಸ್ತಾಪಿಸಿ, “ರಾಮನಗರ ಮತ್ತು ಶಿಡ್ಲಘಟ್ಟದ ರೇಷ್ಮೆಗೂಡಿನ ಮಾರುಕಟ್ಟೆಗಳಲ್ಲಿ ಏಶಿಯಾದಲ್ಲಿಯೇ ಅತಿ ಹೆಚ್ಚಿನ ವಹಿವಾಟು ನಡೆಯುತ್ತದೆ. ರಾಮನಗರ ಜಿಲ್ಲೆಯಲ್ಲಿ 75 ಕೋಟಿ ರೂ. ವೆಚ್ಚದಲ್ಲಿ ಅತಿದೊಡ್ಡ ಹೈಟೆಕ್‌ ಮಾರುಕಟ್ಟೆಯನ್ನು ನಿರ್ಮಿಸಲಾಗುತ್ತಿದೆ” ಎಂದರು.

“ಮೈಸೂರು ಬಿತ್ತನೆ ಪ್ರದೇಶದಲ್ಲಿ ಮೂಲಭೂತ ಸೌಕರ್ಯವನ್ನು ಬಲಪಡಿಸಲಾಗುವುದು. ಇದರಿಂದ ಉತ್ತಮ ಗುಣಮಟ್ಟದ ರೋಗರಹಿತವಾದ ಮೈಸೂರು ಬಿತ್ತನೆ ಗೂಡುಗಳನ್ನು ಉತ್ಪಾದಿಸಿ, ವಾಣಿಜ್ಯ ರೇಷ್ಮೆ ಬೆಳೆಗಾರರಿಗೆ ವಿತರಿಸಲು ಮತ್ತು ಉತ್ತಮ ಗುಣಮಟ್ಟದ ಮಿಶ್ರತಳಿ ಕಚ್ಚಾ ರೇಷ್ಮೆಯನ್ನು ಉತ್ಪಾದಿಸಲು ಅನುಕೂಲವಾಗಲಿದೆ” ಎಂದು ಹೇಳಿದರು.

Advertisements

“ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಸುಲಭವಾಗಿ ದುಡಿಯುವ ಬಂಡವಾಳವನ್ನು ಒದಗಿಸಲು ಮತ್ತು ರೇಷ್ಮೆಗೂಡಿನ ಖರೀದಿಯಲ್ಲಿ ಸಕ್ರಿಯವಾಗಿ ಭಾಗವಹಿಸಲು ಐದು ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

Download Eedina App Android / iOS

X