- ಆಸ್ಪತ್ರೆಯ ಸಮಸ್ಯೆಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ
- ಕೆ.ಸಿ ಜನರಲ್ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರದ ಸಮಸ್ಯೆ ಇದೆ
ರಾಜ್ಯ ರಾಜಧಾನಿ ಬೆಂಗಳೂರಿನ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಕೆ.ಸಿ ಜನರಲ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಶೀಘ್ರದಲ್ಲಿಯೇ ಟ್ರಾಮಾ ಕೇರ್ ಸೆಂಟರ್ ನಿರ್ಮಾಣವಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿದರು.
ಬೆಂಗಳೂರಿನ ಕೆ.ಸಿ ಜನರಲ್ ಸಾರ್ವಜನಿಕ ಆಸ್ಪತ್ರೆಗೆ ಸಚಿವ ದಿನೇಶ್ ಗುಂಡುರಾವ್ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬೆಂಗಳೂರಿನ ಪ್ರಮುಖ ಆಸ್ಪತ್ರೆಗಳಲ್ಲಿ ಕೆ.ಸಿ ಜನರಲ್ ಆಸ್ಪತ್ರೆ ಕೂಡ ಒಂದಾಗಿದೆ. ಈ ಆಸ್ಪತ್ರೆಯಲ್ಲಿರುವ ಹಲವು ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಭೇಟಿ ನೀಡಿದ್ದೇನೆ. ಈ ಆಸ್ಪತ್ರೆಯಲ್ಲಿ ಶೀಘ್ರದಲ್ಲಿಯೇ ಟ್ರಾಮಾ ಕೇರ್ ಸೆಂಟರ್ ನಿರ್ಮಾಣವಾಗಲಿದೆ” ಎಂದು ಹೇಳಿದರು.
“ಶವಾಗಾರ ತೆರೆಯುವ ಬಗ್ಗೆ ಚರ್ಚೆ ಮಾಡಲಾಗುತ್ತಿದೆ. ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರದ ಸಮಸ್ಯೆ ಇದೆ. ರಾಜ್ಯದಾದ್ಯಂತ ಸಿಂಗಲ್ ಯುಸ್ ಡಯಾಲಿಸ್ ಕೇಂದ್ರಗಳನ್ನು ಮಾಡುವ ನಿರ್ಧಾರ ತೆಗೆದುಕೊಂಡಿದ್ದೇವೆ. ಐಸಿಯು ಯುನಿಟ್ಸ್ ಪರಿಶೀಲಿಸಲಾಗಿದ್ದು, ಕೆಲವು ಭಾಗದಲ್ಲಿ ಲೀಕೇಜ್ ಆಗುತ್ತಿದೆ. ಅವುಗಳನ್ನು ಸರಿಪಡಿಸುವ ಕೆಲಸ ಮಾಡಲಾಗುತ್ತದೆ” ಎಂದು ತಿಳಿಸಿದರು.
ಈ ಸುದ್ದಿ ಓದಿದ್ದೀರಾ? ಗ್ರಾಹಕರೇ ನಕಲಿ ಬಿಲ್ ಬಗ್ಗೆ ಎಚ್ಚರವಿರಲಿ ಎಂದ ಬೆಸ್ಕಾಂ
“ಕೆ.ಸಿ ಜನರಲ್ ಆಸ್ಪತ್ರೆಗೆ ಸಾಕಷ್ಟು ಜನ ಭೇಟಿ ನೀಡುತ್ತಾರೆ. ಹೀಗಾಗಿ, ಆಸ್ಪತ್ರೆಯ ಸಮಸ್ಯೆಗಳನ್ನ ಕಡಿಮೆ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಇನ್ನೂ ಆಸ್ಪತ್ರೆಯಲ್ಲಿ ಎಲ್ಲ ಔಷಧಗಳನ್ನು ನೀಡಬೇಕು. ಯಾವುದೇ ಔಷಧವನ್ನು ಹೊರಗಡೆ ಬರೆಯಬಾರದು” ಎಂದು ಸಚಿವರು ಸೂಚನೆ ನೀಡಿದರು.