ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಹಲವಾರು ಜನಪ್ರತಿನಿಧಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ವ್ಯಕ್ತಿಯೊಬ್ಬನ ವಿರುದ್ಧ ಬೆಂಗಳೂರಿನ ವೈಟ್‌ಫೀಲ್ಡ್ ಸೈಬರ್ ಕ್ರೈಂ ರಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಟ್ವಿಟರ್‌ನಲ್ಲಿ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ, ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಟ್ವೀಟ್‌ಗಳನ್ನು ಈಶ್ವರಪ್ಪ ಮುನಿಯಪ್ಪ ಎಂಬ ಖಾತೆಯಿಂದ ರೀ-ಟ್ವೀಟ್ ಮಾಡಿ, ಅವಹೇಳನಕಾರಿ ಪದಗಳನ್ನು ಬಳಸಿ ನಿಂದಿಸಲಾಗಿದೆ.
ಆ ಪೋಸ್ಟ್‌ಗಳ ಆಧಾರದ ಮೇಲೆ ಈಶ್ವರಪ್ಪ ಮುನಿಯಪ್ಪ ಎಂಬ ಟ್ವಿಟರ್ ಖಾತೆಯನ್ನು ನಡೆಸುತ್ತಿರುವ ವ್ಯಕ್ತಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಯ ಪತ್ತೆಗಾಗಿ ಶೋಧ ನಡೆಸುತ್ತಿದ್ದಾರೆ.