ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದನಿದ್ದೇನೆ. ಪಕ್ಷದ ವರಿಷ್ಠರು ಸೂಚನೆ ನೀಡಿದರೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, “ಹೈಕಮಾಂಡ್ನಿಂದ ಇನ್ನೂ ಯಾವ ರೀತಿಯ ಸೂಚನೆ ಬಂದಿಲ್ಲ. 34 ಸಚಿವರಿಗೂ ಪ್ರತಿ ಲೋಕಸಭೆ ಕ್ಷೇತ್ರದ ಉಸ್ತುವಾರಿ ಕೊಡುತ್ತಾರೆ. ಹಾಸನದಲ್ಲಿ ನನ್ನ ನೇತೃತ್ವದಲ್ಲಿ ಚುನಾವಣೆ ನಡೆಯುತ್ತದೆ ಎಂಬ ವಿಶ್ವಾಸವಿದೆ” ಎಂದು ಹೇಳಿದ್ದಾರೆ.
ಹಾಲಿನಲ್ಲಿ ಕಲಬೆರಕೆಯಾಗುತ್ತಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, “ಹಾಲು ಕಲಬೆರಕೆ ಮಾಡಿದ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಕಲಬೆರಕೆ ಕುರಿತು ತನಿಖೆ ನಡೆಸಿ, ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.
“ಹಾಲು ಉತ್ಪಾದಕ ರೈತರಿಗೆ 3 ರೂಪಾಯಿ ಹೆಚ್ಚಳ ಮಾಡಲಾಗಿದೆ. ಇದರಿಂದ ಹಾಲಿನ ಉತ್ಪಾದನೆ ಮತ್ತಷ್ಟು ಹೆಚ್ಚಾಗಲಿದೆ” ಎಂದು ಹೇಳಿದ್ದಾರೆ.