ಕಮಿಷನ್ ಹೆಚ್ಚಳ: ಖರ್ಗೆ, ರಾಹುಲ್‌ಗೆ ಪತ್ರ ಬರೆಯಲು ಮುಂದಾದ ಗುತ್ತಿಗೆದಾರರ ಸಂಘ

Date:

ಕಮಿಷನ್ ದುಪ್ಪಟ್ಟಾಗಿದೆ, ಭಷ್ಟಾಚಾರ ಹೆಚ್ಚಾಗಿದೆ. ಹಣ ಬಿಡುಗಡೆ ಮಾಡಲು ಕಮಿಷನ್ ನೀಡಬೇಕಾಗಿದೆ ಎಂದು ಆರೋಪಿಸುತ್ತಿರುವ ಗುತ್ತಿಗೆದಾರರ ಸಂಘವು ಈ ಸಂಬಂಧ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆಯಲು ಮುಂದಾಗಿದೆ. ಈ ಸಂಬಂಧ ಗುರುವಾರ ಸುದ್ದಿಗೋಷ್ಠಿ ನಡೆಸಿ ಸಂಘದ ಪ್ರಧಾನ ಕಾರ್ಯದರ್ಶಿ ಜಿ ಎಂ ನಂದಕುಮಾರ್ ತಿಳಿಸಿದ್ದಾರೆ.

- Advertisement -

ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಕಾಂಗ್ರೆಸ್ ಈ ಕಮಿಷನ್ ಹಾವಳಿ ವಿಚಾರದಲ್ಲಿ ಬಿಜೆಪಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಬಿಜೆಪಿ ಸರ್ಕಾರವನ್ನು ಶೇ.40ರಷ್ಟು ಕಮಿಷನ್ ಸರ್ಕಾರ ಎಂದು ಆರೋಪಿಸಿತ್ತು. ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಡೆಸಿದ್ದ ಅಭಿಯಾನವು ಹಲವು ಜನರ ಬಾಯಲ್ಲಿ ‘40% ಸರ್ಕಾರ’ ಎಂಬ ಮಾತು ಬರುವಂತೆ ಮಾಡಿತ್ತು. ಗುತ್ತಿಗೆದಾರರ ಸಂಘದ ಅಂದಿನ ಅಧ್ಯಕ್ಷರಾಗಿದ್ದ ಕೆಂಪಣ್ಣ ಅವರು ಮಾಡಿದ್ದ ಆರೋಪ ಕಾಂಗ್ರೆಸ್‌ಗೆ ಬಲ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನು ಓದಿದ್ದೀರಾ? ಕಾಂಗ್ರೆಸ್‌ ಸರ್ಕಾರದಲ್ಲಿ ಕಮಿಷನ್‌ ಹೆಚ್ಚಳ: ಗುತ್ತಿಗೆದಾರರ ಸಂಘ ಆರೋಪ

ಇದೀಗ ಸರ್ಕಾರ ಬದಲಾಗಿದೆ. ಆದರೂ ಈ ಕಮಿಷನ್ ಹಾವಳಿ ನಿಂತಿಲ್ಲ, ಬದಲಾಗಿ ದುಪ್ಪಟ್ಟಾಗಿದೆ ಎಂದು ಗುತ್ತಿಗೆದಾರರ ಸಂಘ ಆರೋಪಿಸಿದೆ. ಅದಕ್ಕೆ ಬಿಜೆಪಿಯು ಜತೆ ಸೇರಿದೆ. “ಸಿಎಂ ಸಭೆ ಕರೆದರೆ ನಾವು ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಎಲ್ಲಾ ಮಾಹಿತಿಯನ್ನು ನೀಡುತ್ತೇವೆ. ಮೂರು ವರ್ಷಗಳಿಂದ ಬಿಲ್ ಬಾಕಿ ಬಿಡುಗಡೆಯಾಗದೆ ನಾವು ಸಂಕಷ್ಟದಲ್ಲಿದ್ದೇವೆ. ಸಿಎಂ ಒಮ್ಮೆ ನಮ್ಮ ಸ್ಥಾನದಲ್ಲಿ ನಿಂತು ನೋಡಬೇಕು” ಎಂದು ಸಂಘದ ಅಧ್ಯಕ್ಷ ಆರ್ ಮಂಜುನಾಥ್ ಒತ್ತಾಯಿಸಿದ್ದಾರೆ.

“ಈ ಹಿಂದಿನ ಸರ್ಕಾರ ನಮ್ಮ ಬಾಕಿ ಹಣ ಪಾವತಿಸಿಲ್ಲ. ಆದರೆ ಈಗ ಇರುವ ಸರ್ಕಾರವೂ ಅದೇ ಮಾಡುತ್ತಿದೆ. ಸಿಎಂ ನಮ್ಮನ್ನು ಔಪಚಾರಿಕವಾಗಿ ಭೇಟಿ ಮಾಡಿದ್ದಾರೆ. ಆದರೆ ಅಧಿಕೃತ ಸಭೆ ಕರೆದಿಲ್ಲ. ನಾವು ಮಾಡಿರುವ ಕೆಲಸಕ್ಕೆ ಹಣ ಬಿಡುಗಡೆ ಮಾಡುವಂತೆ ಮನವಿ ಮಾಡುತ್ತೇವೆ. ಕೊನೆಯದಾಗಿ ನಮಗೆ ಹೋರಾಟದ ದಾರಿ ಮಾತ್ರ ಉಳಿದಿರುವುದು” ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಮಾರ್ಚ್ 5ರ ಒಳಗಾಗಿ ಬಾಕಿ ಇರುವ 37 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ನಾವು ಎಲ್ಲಾ ಕಾಮಗಾರಿಗಳನ್ನು ಸ್ಥಗಿತಗೊಳಿಸುತ್ತೇವೆ. ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತೇವೆ ಎಂದೂ ಸಂಘ ಎಚ್ಚರಿಕೆ ನೀಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇದು SIR ಅಲ್ಲ, ‘ವಿಶೇಷ ಡಿಲಿಟೇಷನ್’ ಕಾರ್ಯಾಚರಣೆ: ಇಸಿ ನೋಟಿಸ್‌ಗೆ ಕಪಿಲ್ ಸಿಬಲ್ ಆಕ್ರೋಶ

ಭಾರತೀಯ ಚುನಾವಣಾ ಆಯೋಗ (ಇಸಿಐ) ನಡೆಸುತ್ತಿರುವ ‘ಮತದಾರರ ಪಟ್ಟಿ ವಿಶೇಷ ತೀವ್ರ...

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್...

ಉತ್ತರ ಪ್ರದೇಶ | 30 ಲಕ್ಷ ರೂ. ಇನಾಮು ಹೊಂದಿದ್ದ ಮಾವೋವಾದಿ ಬ್ರಿಜೇಶ್ ಎನ್‌ಕೌಂಟರ್

ಜಾರ್ಖಂಡ್ ಮೂಲದ ನಿಷೇಧಿತ ಮಾವೋವಾದಿ ಸಂಘಟನೆ ‘ತೃತೀಯ ಪ್ರಸ್ತುತಿ ಕಮಿಟಿ’ (ಟಿಪಿಸಿ)...