ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಕ್ರಿಶ್ಚಿಯನ್ ಸಮುದಾಯದ ಕೊಡುಗೆ ಅಪಾರ: ಸಿದ್ದರಾಮಯ್ಯ

Date:

Advertisements

ಸಾಮಾಜಿಕ ಅಸಮಾನತೆಯಿರುವ ಕಾಲಮಾನದಲ್ಲಿ ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸೋಮವಾರ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಲೀನಿಯರ್ ಆಕ್ಸರಲೇಟರ್ ರೆಡಿಯೇಷನ್ ಥೆರಪಿ ಸೇವೆ ಉದ್ಘಾಟಿಸಿ ಮಾತನಾಡಿದರು.

“ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಕ್ರಿಶ್ಚಿಯನ್ ಸಮುದಾಯ ಅತ್ಯುತ್ತಮ ಕೆಲಸವನ್ನು ಮಾಡಿದೆ. ಉಡುಪಿ ಹಾಗೂ ಮಂಗಳೂರಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಈ ಸಮುದಾಯ ಒಳ್ಳೆಯ ಬುನಾದಿಯನ್ನು ಹಾಕಿದೆ. ಭಾರತೀಯ ಸಮಾಜದಲ್ಲಿ ಬಹುಸಂಖ್ಯಾತ ಜನ ಅಕ್ಷರಸಂಸ್ಕೃತಿಯಿಂದ ವಂಚಿತರಾಗಿದ್ದರು” ಎಂದರು.

Advertisements

ಆಸ್ಪತ್ರೆಯಲ್ಲಿ ಆಧುನಿಕ ಚಿಕಿತ್ಸಾ ಸೌಲಭ್ಯ

“ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಕ್ಯಾನ್ಸರ್ ಕಾಯಿಲೆ ಗುಣಪಡಿಸುವ ಆಧುನಿಕ ಚಿಕಿತ್ಸಾ ವಿಧಾನವಾದ ಲೀನಿಯರ್ ಆಕ್ಸರಲೇಟರ್ ರೆಡಿಯೇಷನ್ ಥೆರಪಿ ಸೇವೆಯನ್ನು ಇಂದು ಉದ್ಘಾಟಿಸಲಾಗಿದೆ. ಪ್ರಥಮ ಹಂತದಲ್ಲಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿದರೆ, ರೋಗವನ್ನು ಗುಣಪಡಿಸಬಹುದು. ಕಡೆಯ ಹಂತದಲ್ಲಿ ಕ್ಯಾನ್ಸರ್ ಪತ್ತೆಯಾದಾಗ, ಕಾಯಿಲೆ ಉಲ್ಬಣಗೊಳ್ಳದಿರಲು ಈ ಅತ್ಯಾಧುನಿಕ ಚಿಕಿತ್ಸೆ ಸಹಕಾರಿಯಾಗಿದೆ. ಈ ಆಸ್ಪತ್ರೆಗೆ ಹಳ್ಳಿಗಾಡಿನ ಜನರು ಹೆಚ್ಚು ಬರುವುದರಿಂದ ಇಲ್ಲಿನ ವೈದ್ಯರು ಕನ್ನಡದಲ್ಲಿ ಮಾತನಾಡುವುದರಿಂದ ರೋಗಿಗಳಿಗೆ ಹೆಚ್ಚು ಅನುಕೂಲವಾಗುತ್ತದೆ” ಎಂದು ತಿಳಿಸಿದರು.

ಕೈಗೆಟಕುವ ದರದಲ್ಲಿ ಆರೋಗ್ಯ ಸೇವೆ

“ಶ್ರೀಮಂತರು ಉತ್ತಮ ಹಾಗೂ ದುಬಾರಿ ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ. ಆದರೆ ದಿನನಿತ್ಯಜೀವನಕ್ಕಾಗಿ ಹೋರಾಡುವ ಬಡಜನರಿಗೆ ಕಡಿಮೆ ದರದಲ್ಲಿ ಆರೋಗ್ಯ ಸೇವೆ ನೀಡುವ ಬ್ಯಾಪ್ಟಿಸ್ಟ್ ಆಸ್ಪತ್ರೆ ಜನಸೇವೆಯಲ್ಲಿ ನಂಬಿಕೆ ಇರಿಸಿದೆ. ಬ್ಯಾಪ್ಟಿಸ್ಟ್ ಆಸ್ಪತ್ರೆಯು ಬಡವರಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ನೀಡುತ್ತಾ ಬಂದಿದೆ. ಸರ್ಕಾರಿ ಆಸ್ಪತ್ರೆಯಂತೆ ಬ್ಯಾಪ್ಟಿಸ್ಟ್ ಆಸ್ಪತ್ರೆ ಬಡರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದು, ಸರ್ಕಾರ ಈ ಆಸ್ಪತ್ರೆಗೆ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X