ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ವಿರುದ್ಧ ವಿವಾದಾತ್ಮಕ ಹೇಳಿಕೆ; ವಿಚಾರಣೆಗೆ ತೆರಳುತ್ತಿದ್ದ MLC ನಾಪತ್ತೆ

Date:

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪ ಎದುರಿಸುತ್ತಿರುವ ವೈಎಸ್‌ಆರ್‌ಸಿಪಿ ಎಂಎಲ್‌ಸಿ ದುವ್ವಾಡ ಶ್ರೀನಿವಾಸ್ ಅವರು ನಾಪತ್ತೆಯಾಗಿದ್ದಾರೆ. ಅವರ ನಾಪತ್ತೆ ಘಟನೆಯು ಶ್ರೀಕಾಕುಳಂ ಜಿಲ್ಲೆಯಲ್ಲಿ ರಾಜಕೀಯ ಉದ್ವಿಗ್ನತೆ ಸೃಷ್ಟಿಸಿದೆ.

- Advertisement -

ಶ್ರೀನಿವಾಸ್ ಅವರು ವಿಚಾರಣೆಗೆ ಹಾಜರಾಗುವ ಉದ್ದೇಶದಿಂದ ಟೆಕ್ಕಲಿಯಿಂದ ಕೊತ್ತೂರು ಪೊಲೀಸ್ ಠಾಣೆಗೆ ಪ್ರಯಣಿಸುತ್ತಿದ್ದ ಸಂದರ್ಭದಲ್ಲಿ ಅವರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಪವನ್ ಕಲ್ಯಾಣ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಶ್ರೀನಿವಾಸ್ ಅವರಿಗೆ ಪೊಲೀಸರು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರು. ಅದರಂತೆ ಶ್ರೀನಿವಾಸ್ ಅವರು ತಮ್ಮ ನಿವಾಸದಿಂದ ಖಾಸಗಿ ವಾಹನದಲ್ಲಿ ಹೊರಟಿದ್ದರು. ಆದರೂ, ನಿಗದಿತ ಸಮಯಕ್ಕೆ ಪೊಲೀಸ್ ಠಾಣೆಯನ್ನು ತಲುಪಿಲ್ಲ.

ಇದೀಗ, ಅವರು ಸ್ವಇಚ್ಛೆಯಿಂದ ಬೇರೆ ವಾಹನ ಹತ್ತಿದರೇ, ಮಾರ್ಗ ಬದಲಾಯಿಸಿದರೇ ಅಥವಾ ಅವರನ್ನು ಬೇರೆಡೆಗೆ ಕರೆದೊಯ್ಯಲಾಗಿದೆಯೇ ಎಂಬ ಅನುಮಾನಗಳು ಹುಟ್ಟಿಕೊಂಡಿವೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿ ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಪರಿಶೀಲಿಸುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಕೊತ್ತೂರು ವೃತ್ತ ನಿರೀಕ್ಷಕ (CO) ಪ್ರಸಾದ್ ರಾವ್, “ಟೆಕ್ಕಲಿ ಬಿಟ್ಟ ನಂತರ ನಡೆದಿರುವ ಬೆಳವಣಿಗೆಗಳ ಸರಣಿಯನ್ನು ನಾವು ಪರಿಶೀಲಿಸುತ್ತಿದ್ದೇವೆ. ಸಾರ್ವಜನಿಕರು ಯಾವುದೇ ವದಂತಿಗಳನ್ನು ನಂಬಬಾರದು. ತನಿಖೆಯ ಆಧಾರದ ಮೇಲೆ ಮುಂದಿನ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು,” ಎಂದು ಹೇಳಿದ್ದಾರೆ.

ಯಾವುದೇ ಕಾನೂನು ಸುವ್ಯವಸ್ಥೆ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಟೆಕ್ಕಲಿಯಲ್ಲಿರುವ ಶ್ರೀನಿವಾಸ್ ಅವರ ನಿವಾಸದ ಸುತ್ತ ಬುಧವಾರ ಮುಂಜಾನೆಯಿಂದಲೇ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿ ಭದ್ರತೆಯನ್ನು ಬಲಪಡಿಸಲಾಗಿದೆ. ಪಕ್ಷದ ಕಾರ್ಯಕರ್ತರು ಜಮಾಯಿಸದಂತೆ ತಡೆಯಲು ಶ್ರೀನಿವಾಸ್ ಅವರ ಪತ್ನಿ ದಿವ್ವೇಲ ಮಾಧುರಿ ಅವರನ್ನು ಮನೆಯಲ್ಲೇ ನಿರ್ಬಂಧಿಸಲಾಗಿದೆ ಎಂದು ಶ್ರೀನಿವಾಸ್ ಬೆಂಬಲಿಗರು ಆರೋಪಿಸಿದ್ದಾರೆ.

ಪೊಲೀಸರ ಈ ಕ್ರಮ ಸಂಪೂರ್ಣ ರಾಜಕೀಯ ಪ್ರೇರಿತ ಎಂದು ಮಾಧುರಿ ಆರೋಪಿಸಿದ್ದಾರೆ. “ಶ್ರೀನಿವಾಸ್ ಎಲ್ಲಿದ್ದಾರೆ? ಒಂದು ವೇಳೆ ಪೊಲೀಸರೇ ಅವರನ್ನು ಕರೆದೊಯ್ದಿದ್ದರೆ ಆ ವಿಷಯವನ್ನು ಸಾರ್ವಜನಿಕರಿಗೆ ತಿಳಿಸಬೇಕು. ಅನೇಕ ಪ್ರಮುಖ ಸಮಸ್ಯೆಗಳನ್ನು ನಿರ್ಲಕ್ಷಿಸಿ ನಮ್ಮನ್ನೇ ಪದೇ ಪದೇ ಗುರಿ ಮಾಡಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

ಪೊಲೀಸರು ನೋಟಿಸ್‌ ನೀಡಿದ್ದ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ್ದ ಶ್ರೀನಿವಾಸ್, “ನಾನು ಪವನ್ ಕಲ್ಯಾಣ್ ವಿರುದ್ಧ ಯಾವುದೇ ನಿಂದನಾತ್ಮಕ ಹೇಳಿಕೆ ನೀಡಿಲ್ಲ. ನಮ್ಮ ಹೆಸರನ್ನು ಕೆಡಿಸಲು ತೇಜೋವಧೆ ಮಾಡುವ ಉದ್ದೇಶದಿಂದ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ನಕಲಿ ವಿಡಿಯೋಗಳನ್ನು ಸೃಷ್ಟಿಸಲಾಗಿದೆ” ಎಂದು ವಾದಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...