‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಹೇಳಿಕೆ : ನಟ ಉಪೇಂದ್ರ ವಿರುದ್ಧ ಅಟ್ರಾಸಿಟಿ ಪ್ರಕರಣ

Date:

  • ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್
  • ವಿಡಿಯೋದಲ್ಲಿ ಗಾದೆ ಮಾತು ಉಲ್ಲೇಖಿಸಿ ದಲಿತ ಸಮುದಾಯಕ್ಕೆ ಅವಮಾನ ಹಿನ್ನೆಲೆ

‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂದು ಹೇಳಿಕೆ ನೀಡಿದ್ದ ನಟ ಉಪೇಂದ್ರ ವಿರುದ್ಧ ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

- Advertisement -

ಈ ಬಗ್ಗೆ ಈ ದಿನ.ಕಾಮ್ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಗೆ ಕರೆ ಮಾಡಿ ವಿಚಾರಿಸಿದಾಗ, “ಉಪೇಂದ್ರ ಅವರು ತಮ್ಮ ಹೇಳಿಕೆಯ ಮೂಲಕ ದಲಿತರ ನಿಂದನೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ದೂರು ಬಂದಿತ್ತು. ಈ ಸಂಬಂಧ ಅಟ್ರಾಸಿಟಿ ಪ್ರಕರಣದನ್ವಯ ಎಫ್‌ಐಆರ್ ದಾಖಲಾಗಿದೆ” ಎಂದು ಖಚಿತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...
C K ACCHUKATTU

ವಿಡಿಯೋ ಸಂದೇಶದಲ್ಲಿ ಮಾತನಾಡುತ್ತಿದ್ದ ವೇಳೆ ಉಪೇಂದ್ರ ಅವರು, ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಎಂದು ಗಾದೆ ಮಾತನ್ನು ಬಳಸಿದ್ದರು. ಆ ಮೂಲಕ ದಲಿತ ಸಮುದಾಯದ ಜನರಿಗೆ ಅವಮಾನ ಮಾಡಿದ್ದಾರೆ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

UPENDRA FIR

ತನ್ನ ಹೇಳಿಕೆ ವಿವಾದವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಯಾಚನೆ ಮಾಡಿದ್ದ ನಟ ಉಪೇಂದ್ರ, ‘ಬಾಯಿ ತಪ್ಪಿನಿಂದ ಗಾದೆ ಮಾತು ಬಂದಿದೆ. ಇದರಿಂದ ಹಲವರ ಭಾವನೆಗೆ ಧಕ್ಕೆಯಾಗಿರುವುದನ್ನು ಗಮನಿಸಿ ತಕ್ಷಣ ಲೈವ್ ವಿಡಿಯೋವನ್ನು ಡಿಲೀಟ್ ಮಾಡಿದ್ದೇನೆ. ಮಾತಿಗೆ ಕ್ಷಮೆ ಇರಲಿ’ ಎಂದು ಹೇಳಿದ್ದರು.

ಇದನ್ನು ಓದಿದ್ದೀರಾ? ‘ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ’ ಹೇಳಿಕೆಗೆ ವ್ಯಾಪಕ ಆಕ್ರೋಶ: ಕ್ಷಮೆ ಕೇಳಿದ ನಟ ಉಪೇಂದ್ರ

ಈ ಎಲ್ಲ ಬೆಳವಣಿಗೆಗಳ ನಡುವೆ ಎಫ್‌ಐಆರ್ ದಾಖಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾಗಿರುವ ಮಧುಸೂಧನ್ ಎಂಬವರು ಈ ಸಂಬಂಧ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸ್ ಅಧಿಕಾರಿಗಳು, ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...