ಶಾಸಕ ತೇಜ್ ಪ್ರತಾಪ್ ಯಾದವ್ ಆಜ್ಞೆಯಂತೆ ಕುಣಿದ ಕಾನ್‌ಸ್ಟೆಬಲ್ ಅಮಾನತು

Date:

ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜ್ ಪ್ರತಾಪ್ ಯಾದವ್ ಅವರು ಹೋಳಿ ಆಚರಣೆ ವೇಳೆ ಪೊಲೀಸ್ ಒಬ್ಬರನ್ನು ಕುಣಿಸಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಇದಾದ ಬೆನ್ನಲ್ಲೇ ಆಜ್ಞೆಯಂತೆ ಕುಣಿದ ಬಿಹಾರ ಪೊಲೀಸ್ ಕಾನ್‌ಸ್ಟೆಬಲ್ ಅವರನ್ನು ತೇಜ್ ಪ್ರತಾಪ್ ಸೇವೆಯಿಂದ ಅಮಾನತುಗೊಳಿಸಲಾಗಿದೆ.

- Advertisement -

ಶುಕ್ರವಾರ ಪಾಟ್ನಾದಲ್ಲಿರುವ ತೇಜ್ ಪ್ರತಾಪ್ ಅವರ ನಿವಾಸದಲ್ಲಿ ಹೋಳಿ ಆಚರಣೆ ನಡೆದಿತ್ತು. ಈ ವೇಳೆ ಪೊಲೀಸ್ ಅಧಿಕಾರಿಗೆ ಕುಣಿಯುವಂತೆ ತಿಳಿಸಿರುವುದು ವಿಡಿಯೋದಲ್ಲಿ ಕಾಣಬಹುದು. ಸದ್ಯ ತೇಜ್ ಪ್ರತಾಪ್ ನಡೆಗೆ ಮಿಶ್ರ ಪ್ರತಿಕ್ರಿಯೆ ಬಂದಿದೆ. ಕೆಲವರು ಇದು ತಮಾಷೆ ಎಂದು ಹೇಳಿದರೆ, ಇನ್ನು ಕೆಲವರು ಇದು ದರ್ಪ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ನೃತ್ಯ ಮಾಡದಿದ್ದರೆ ಅಮಾನತು ಮಾಡಿಸುತ್ತೇನೆ: ಪೊಲೀಸ್ ಅಧಿಕಾರಿಯನ್ನು ಕುಣಿಸಿದ ತೇಜ್ ಪ್ರತಾಪ್ ಯಾದವ್

ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ತೇಜ್ ಪ್ರತಾಪ್ ಅವರ ಭದ್ರತಾ ಸಿಬ್ಬಂದಿಯನ್ನು ಅವರ ಸೇವೆಯಿಂದ ತೆಗೆದುಹಾಕಲಾಗಿದ್ದು, ಪೊಲೀಸ್ ಲೇನ್‌ಗೆ ವರ್ಗಾಯಿಸಲಾಗಿದೆ. ಬೇರೊಬ್ಬ ಕಾನ್‌ಸ್ಟೆಬಲ್‌ ಅನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಈ ಬಗ್ಗೆ ಎಸ್‌ಎಸ್‌ಪಿ ಆದೇಶ ನೀಡಿದ್ದಾರೆ. “ಶಾಸಕ ತೇಜ್ ಪ್ರತಾಪ್ ಅವರ ಭದ್ರತಾ ಸಿಬ್ಬಂದಿಯಾಗಿದ್ದ ಕಾನ್‌ಸ್ಟೆಬಲ್ ದೀಪಕ್ ಕುಮಾರ್ ಅವರನ್ನು ಈ ಕೂಡಲೇ ಜಾರಿಗೆ ಬರುವಂತೆ ಭದ್ರತಾ ಸಿಬ್ಬಂದಿ ಸೇವೆಯಿಂದ ಅಮಾನತುಗೊಳಿಸಲಾಗಿದೆ. ಸೇವಾ ವಸ್ತ್ರದಲ್ಲಿ ಕುಣಿದ ಕಾರಣಕ್ಕೆ ಈ ಕ್ರಮ ಕೈಗೊಳ್ಳಾಗಿದೆ. ಶಾಸಕರಿಗೆ ಬೇರೋರ್ವರನ್ನು ಭದ್ರತಾ ಸಿಬ್ಬಂದಿಯಾಗಿ ನಿಯೋಜಿಸಲಾಗುವುದು” ಎಂದು ತಿಳಿಸಲಾಗಿದೆ.

“ಸಿಪಾಯಿ ನಾವೊಂದು ಹಾಡು ಹಾಕುತ್ತೇವೆ. ಅದಕ್ಕೆ ನೀವು ಕುಣಿಯಬೇಕು. ತಪ್ಪು ತಿಳಿಯಬೇಡಿ, ಇದು ಹೋಳಿ ಆಚರಣೆ ಸಂದರ್ಭ ಕುಣಿಯಿರಿ. ನೀವು ಕುಣಿಯದಿದ್ದರೆ ಅಮಾನತು ಮಾಡಿಸುತ್ತೇನೆ” ಎಂದು ಹೇಳಿದ್ದಾರೆ. ಹಾಗೆಯೇ ತಪ್ಪು ತಿಳಿಯಬೇಡಿ ಇದು ಹೋಳಿ ಎಂದು ಮತ್ತೆ ಪುನರುಚ್ಚರಿಸಿದ್ದಾರೆ. ತೇಜ್ ನಡೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...