ಕೋವಿಡ್ | ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುತ್ತೇವೆ: ಸಚಿವ ಮಧು ಬಂಗಾರಪ್ಪ

Date:

ಕೊರೋನಾ ಒಮಿಕ್ರಾನ್ ರೂಪಾಂತರಿ ತಳಿ JN.1 ಭೀತಿ ಶುರುವಾದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಲಹೆ ಮೇರೆಗೆ ಶಾಲಾ ಮಕ್ಕಳಿಗೆ ಪ್ರತ್ಯೇಕ ಮಾರ್ಗಸೂಚಿ ಹೊರಡಿಸುತ್ತೇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, “ಕೋವಿಡ್ ಕುರಿತು ಸಿಎಂ ಸಿದ್ದರಾಮಯ್ಯ ಜೊತೆ ಕೂಡ ಈ ಬಗ್ಗೆ ಚರ್ಚೆಯಾಗಿದೆ. ಹೀಗಾಗಿ ಮಾಸ್ಕ್ ಟೆಸ್ಟಿಂಗ್ ಎಲ್ಲದರ ಬಗ್ಗೆ ನಿರ್ಧಾರ ಮಾಡುತ್ತಿದ್ದಾರೆ. ನಾವು ಆರೋಗ್ಯ ಇಲಾಖೆಯ ಮಾರ್ಗಸೂಚಿ ಪರಿಗಣಿಸುತ್ತೇವೆ. ಏನೆಲ್ಲಾ ಕ್ರಮ ವಹಿಸಬೇಕು ಅಂತ ನಿರ್ಧಾರ ಮಾಡುತ್ತಿದ್ದೇವೆ” ಎಂದರು.

ಶಾಲಾ ಪಠ್ಯ ಪರಿಸ್ಕರಣೆ ವಿಚಾರವಾಗಿ ಮಾತನಾಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, “ಶಾಲಾ ಬ್ಯಾಗ್ ಹೊರೆಯಾಗುತ್ತಿದೆ. ಇದನ್ನು ಪರಿಗಣಿಸಿ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡುತ್ತೇವೆ. ಮುಂದಿನ ವರ್ಷದಿಂದ ಶಾಲಾ ಬ್ಯಾಗ್ ಹೊರೆ ಮತಷ್ಟು ಕಡಿಮೆ ಮಾಡಲಾಗುತ್ತದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕೋವಿಡ್‌ | ಟಿವಿಗಳು ಅನಗತ್ಯ ಭಯ ಸೃಷ್ಟಿಸುವುದು ಬೇಡ; ಆತಂಕ ಪಡುವ ಸಂದರ್ಭ ಬಂದಿಲ್ಲ: ಸಿದ್ದರಾಮಯ್ಯ

ಟಿಪ್ಪು ಪಠ್ಯ ಕಡಿತ ವಿಚಾರವಾಗಿ ಪ್ರತಿಕ್ರಿಯಿಸಿ, “ತಜ್ಞರು ಏನು ಕೊಡುತ್ತಾರೆ ನಾವು ಅದನ್ನೇ ನೀಡುತ್ತೇವೆ. ಪಠ್ಯ ತಿರುಚುವ ಪ್ರಯತ್ನ ಮಾಡುವುದಿಲ್ಲ. ಬಿಬಿಎಂಪಿ ಶಾಲೆಗಳನ್ನು ಶಿಕ್ಷಣ ಇಲಾಖೆ ವ್ಯಾಪ್ತಿಗೆ ಪಡೆಯುವುದರ ಕುರಿತು ನಾಳೆ ಡಿಸಿಎಂ ಜೊತೆ ಸಭೆ ಇದೆ. ಚರ್ಚೆ ಮಾಡಿ ನಿರ್ಧಾರ ಮಾಡುತ್ತೇವೆ” ಎಂದು ತಿಳಿಸಿದರು.

ಮಕ್ಕಳು ಮಾಸ್ಕ್ ಹಾಕಿಕೊಂಡರೆ ಒಳ್ಳೆಯದು: ಸಿದ್ದರಾಮಯ್ಯ

ಶಾಲಾ ಮಕ್ಕಳಿಗೆ ಮಾಸ್ಕ್ ಕಡ್ಡಾಯಗೊಳಿಸುವ ವಿಚಾರವಾಗಿ ಗೃಹಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಕ್ಯಾಬಿನೆಟ್ ಸಬ್ ಕಮಿಟಿ ರಚಿಸಿ ಅಲ್ಲಿ ತೀರ್ಮಾನ ಮಾಡಲಾಗುತ್ತೆ. ಮಕ್ಕಳು ಮಾಸ್ಕ್ ಹಾಕಿಕೊಂಡರೆ ಒಳ್ಳೆಯದು” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೈಲು ಸೇರಿದ ಬಜರಂಗದಳ ಕಾರ್ಯಕರ್ತರನ್ನು ಭೇಟಿಯಾದ ಶೋಭಾ ಕರಂದ್ಲಾಜೆ

ಲವ್ ಜಿಹಾದ್​ ಪ್ರಕರಣದಲ್ಲಿ ​ಹಲ್ಲೆ ಆರೋಪದಡಿ ಚಿಕ್ಕಮಗಳೂರು ಜಿಲ್ಲಾ ಕಾರಾಗೃಹ ಸೇರಿರುವ...

ಕರಂದ್ಲಾಜೆ ವಿರುದ್ದ ಷಡ್ಯಂತ್ರ ನಡೀತಿದೆ ಎಂದ ಬಿಎಸ್‌ವೈ; ಬಾಸ್ ಈಸ್ ಆಲ್ವೇಸ್ ರೈಟ್ ಎಂದ ಸಿ ಟಿ ರವಿ

ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್ ಕೇಳಿಲ್ಲ. ಈ ಬಗ್ಗೆ ಈಗಾಗಲೇ...

ಪರಿಹಾರಕ್ಕೆ ಹಣವಿಲ್ಲ, ಜಾಹೀರಾತಿಗೆ ಹಣವಿದೆ ಎಂದು ಸರ್ಕಾರ ಕುಟುಕಿದ ಕುಮಾರಸ್ವಾಮಿ

"ರಾಜ್ಯದ ರೈತರು ನಷ್ಟದಲ್ಲಿದ್ದಾರೆ, ಪರಿಹಾರ ಕೊಡೋಕೆ ಸರ್ಕಾರದ ಬಳಿ ಹಣವಿಲ್ಲ. ಆದ್ರೆ,...