- ಸಿಎಂ ಸಿದ್ದರಾಮಯ್ಯ ಜೊತೆ ಕೂತು ನಿಗಮ ಮಂಡಳಿ ನೇಮಕ ಬಗ್ಗೆ ಚರ್ಚೆ ಮಾಡುವೆ
- ‘ಭಾರತೀಯ ಜನತಾ ಪಾರ್ಟಿಯಲ್ಲಿ ಯಾರೇ ಪ್ರತಿಪಕ್ಷದ ನಾಯಕರಾದರೂ ಸಂತಸ’
ನಿಗಮ ಮಂಡಳಿ ಮತ್ತು ನೂತನ ಕಾರ್ಯಾಧ್ಯಕ್ಷರ ನೇಮಕ ವಿಚಾರವಾಗಿ ದಸರಾ ಹಬ್ಬದ ಬಳಿಕ ಚರ್ಚಿಸುತ್ತೇವೆ. ನಾನು, ಸಿಎಂ ಸಿದ್ದರಾಮಯ್ಯ ಕೂತು ನಿಗಮ ಮಂಡಳಿ ನೇಮಕ ಬಗ್ಗೆ ಮೊದಲು ಮಾತನಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಬೆಂಗಳುರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಸಿಎಂ, ನಾನು ಚರ್ಚೆ ನಡೆಸಿದ ಬಳಿಕ ದೆಹಲಿಯವರು ಆಗಮಿಸುತ್ತಾರೆ. ರಾಜ್ಯ ಕಾಂಗ್ರೆಸ್ ಘಟಕದ ಉಸ್ತುವಾರಿ ಸುರ್ಜೇವಾಲ ಸದ್ಯ ಬ್ಯುಸಿ ಇದ್ದಾರೆ. ಅವರು ಬಂದ ಮೇಲೆ ಫೈನಲ್ ಮಾಡುತ್ತೇವೆ. ಶಾಸಕರು, ಕಾರ್ಯಕರ್ತರಿಗೆ ಆದಷ್ಟು ಬೇಗ ಅಧಿಕಾರ ಕೊಡುತ್ತೇವೆ” ಎಂದು ಹೇಳಿದರು.
ಕುಮಾರಸ್ವಾಮಿಗೆ ತಿರುಗೇಟು
“ಬರಗಾಲದಲ್ಲಿ ವಿದ್ಯುತ್ ಅಭಾವವನ್ನ ಸೃಷ್ಟಿ ಮಾಡಿದ್ದೇವೆ ಎಂದು ಕೆಲವರು ಹೇಳುತ್ತಿದ್ದಾರೆ. ಯಾರು ಅಂತಹ ಜ್ಞಾನ ಭಂಡಾರದಿಂದ, ಅನುಭವದ ಮಾತುಗಳನ್ನು ಆಡಿಸಿದರೊ ಗೊತ್ತಿಲ್ಲ. ನಮಗೆ ಚಿಂತೆಯಿಲ್ಲ ನಮ್ಮಜನರನ್ನು ಕಾಪಾಡುತ್ತೇವೆ, ಕೈಗಾರಿಕಾ ಪ್ರದೇಶದಲ್ಲಿ ಯಾವುದೇ ಕಾರಣಕ್ಕೂ ಉತ್ಪಾದನೆ ನಿಲ್ಲಬಾರದು ಎಂದು ಸೂಚನೆ ನೀಡಿದ್ದು ಮಾತು ಕೊಟ್ಟಂತೆ ವಿದ್ಯುತ್ ನೀಡುತ್ತಿದ್ದೇವೆ” ಎಂದು ಪರೋಕ್ಷವಾಗಿ ಕುಮಾರಸ್ವಾಮಿಗೆ ತಿರುಗೇಟು ನೀಡಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೆದ್ದ ಗ್ಯಾರಂಟಿಯನ್ನು ಗೆಲುವನ್ನಾಗಿ ಮಾಡಿಕೊಳ್ಳದ ಮೂರ್ಖರು
ಐದು ತಿಂಗಳಾದರೂ ವಿರೋಧ ಪಕ್ಷದ ನಾಯಕರ ಆಯ್ಕೆಯಾಗಿಲ್ಲ. ಹಾಗಾಗಿ ಭಾರತೀಯ ಜನತಾ ಪಾರ್ಟಿಯಲ್ಲಿ ಯಾರೇ ಆದರೂ ಸಂತಸ. ಚುನಾವಣೆ ವೇಳೆ ಬಿಜೆಪಿಯಲ್ಲಿ ಟಿಕೆಟ್ ವ್ಯಾಪಾರ ನಡೆದಿದೆ. ಈಗಾಗಲೇ ಒಂದು ದೂರು ದಾಖಲಾಗಿದೆ” ಎಂದರು.