ಭ್ರಷಾಚಾರ ಕುರ್ಚಿಯ ಪಕ್ಕ ಕೂರಲು ಇಷ್ಟ ಪಡಲ್ಲ, ರಾಜಕಾರಣದಿಂದ ದೂರ ಉಳಿಯುವೆ: ಎ.ನಾರಾಯಣಸ್ವಾಮಿ

Date:

Advertisements

ಭ್ರಷ್ಟ ವ್ಯವಸ್ಥೆಯಲ್ಲಿ ಮುಂದುವರಿಯುವ ರಾಜಕಾರಣಿ ನಾನಲ್ಲ. ರಾಜಕಾರಣದಿಂದ ದೂರ ಉಳಿಯುವ ಬಗ್ಗೆ ಆಲೋಚಿಸಿದ್ದೇನೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ಎ.ನಾರಾಯಣಸ್ವಾಮಿ ತಿಳಿಸಿದರು.

ಚಿತ್ರದುರ್ಗದಲ್ಲಿ ಮಾತನಾಡಿದ ಅವರು, “ಭ್ರಷಾಚಾರದ ಕುರ್ಚಿಯ ಪಕ್ಕದಲ್ಲಿಯೂ ಕುಳಿತುಕೊಳ್ಳಲು ಇಷ್ಟ ಪಡುವುದಿಲ್ಲ. ರಾಜಕಾರಣದಲ್ಲಿರುವ ಭ್ರಷ್ಟಾಚಾರ ಕಣ್ಣಿಗೆ ಬಿದ್ದಾಗಲೇ ಈ ನಿರ್ಧಾರ ಕೈಗೊಂಡಿದ್ದೇನೆ” ಎಂದರು.

“ಮುಂಬರುವ ಲೋಕಸಭಾ ಚುನಾವಣೆಗೆ ಮಾತ್ರ ಸೀಮಿತವಲ್ಲ. ಭವಿಷ್ಯದ ರಾಜಕಾರಣದಿಂದಲೇ ಹೊರಗುಳಿಯುವೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ನಾನು ಟಿಕೆಟ್‌ ಆಕಾಂಕ್ಷಿಯಲ್ಲ. ಪಕ್ಷದ ನಿಷ್ಠಾವಂತ ಸೇನಾನಿಯಾಗಿದ್ದು, ನಮ್ಮ ಪಕ್ಷ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬರಬೇಕು ಎಂಬುದು ನನ್ನ ಅಪೇಕ್ಷೆ” ಎಂದು ಹೇಳಿದರು.

Advertisements

ಈ ಸುದ್ದಿ ಓದಿದ್ದೀರಾ?ಈ ದಿನ ಸಂಪಾದಕೀಯ | ಸಾಕ್ಷಿ ಮಲಿಕ್‌ ʼಶೂʼಗಳು ಭಾರತದ ಆತ್ಮಸಾಕ್ಷಿಯನ್ನು ಅಣಕಿಸುವ ಸಂಕೇತವಾಗಿ ಉಳಿಯಲಿದೆ

“ನಾನೇ ಅಭ್ಯರ್ಥಿಯಾಗಬೇಕು, ನನ್ನ ಮಕ್ಕಳು ರಾಜಕಾರಣಕ್ಕೆ ಬರಬೇಕು ಎಂಬ ಬಯಕೆ ನನಗಿಲ್ಲ. ಪಕ್ಷದ ಸೂಚನೆಯ ಮೇರೆಗೆ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ. ಪಕ್ಷ ಗುರುತಿಸಿ ಮಂತ್ರಿ ಮಾಡಿದೆ, ಅಷ್ಟು ಸಾಕು. ದೂರದಿಂದ ಚಿತ್ರದುರ್ಗಕ್ಕೆ ಬಂದಿದ್ದ ನನ್ನನ್ನು ಮತದಾರರು ಲೋಕಸಭೆಗೆ ಆಯ್ಕೆ ಮಾಡಿದರು. ಜನರ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡಲು ಸಾಧ್ಯವಾಗಿಲ್ಲ ಎಂಬ ಕೊರಗು ಇದೆ” ಎಂದರು.

“ಮುಂಬರುವ ಚುನಾವಣೆಯಲ್ಲಿ ಸ್ಥಳೀಯರಿಗೆ ಅವಕಾಶ ಸಿಕ್ಕರೆ ನಾನು ಸ್ವಾಗತಿಸುತ್ತೇನೆ. ಆಂತರಿಕ ಸಮೀಕ್ಷೆ ಆಧರಿಸಿ ಪಕ್ಷ ನಿರ್ಧಾರ ಕೈಗೊಳ್ಳುತ್ತದೆ. ಅದಕ್ಕೆ ನಾನು ಬದ್ಧನಾಗಿರುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಗಸ್ಟ್ 26ರಿಂದ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಾದ್ಯಂತ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 26ರಿಂದ ಭಾರೀ ಮಳೆಯಾಗಲಿದೆ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಸರ್ಕಾರದಿಂದ ನಷ್ಟ ಸರಿದೂಗಿಸಲಾಗದು, ರೈತರೇ ಕಷ್ಟಕ್ಕೆ ಒಗ್ಗಿಕೊಳ್ಳಬೇಕು: ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಆಕ್ರೋಶ

ಇತ್ತೀಚಿಗೆ ಆದ ಅತಿವೃಷ್ಟಿಯಿಂದ ರೈತರಿಗೆ ಆಗಿರುವ ನಷ್ಟಕ್ಕೆ ಸರ್ಕಾರ ಪರಿಹಾರ ನೀಡಲು...

Download Eedina App Android / iOS

X