ಪಕ್ಷಕ್ಕೆ ದುಡಿದ ಅರ್ಹರ ಪಟ್ಟಿ ಹೈಕಮಾಂಡ್‌ಗೆ ಸಲ್ಲಿಕೆ; ಯುವಕರು, ಹಿರಿಯರಿಗೆ ಅವಕಾಶ: ಡಿ ಕೆ ಶಿವಕುಮಾರ್

Date:

“ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರವಾಗಿ ಪಕ್ಷಕ್ಕಾಗಿ ದುಡಿದ ಅರ್ಹರ ಪಟ್ಟಿಯನ್ನು ಹೈಕಮಾಂಡಿಗೆ ಸಲ್ಲಿಸಿದ್ದೇನೆ. ಒಂದು ಸುತ್ತಿನ ಸಭೆ ನಡೆದಿದೆ. ಎಐಸಿಸಿ ಅಧ್ಯಕ್ಷರು ಹಾಗೂ ಇತರರ ಜೊತೆ ಚರ್ಚೆ ನಡೆಸಿ, ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ನವದೆಹಲಿಯಲ್ಲಿ ಮಂಗಳವಾರ ಸಂಜೆ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಎಲ್ಲ ಸಮಾಜಗಳಿಗೂ ಅವಕಾಶ ಮಾಡಿಕೊಡಬೇಕು. 300ಕ್ಕೂ ಹೆಚ್ಚು ಜನ ಆಕಾಂಕ್ಷಿಗಳು ಇರುವ ಕಾರಣ ಒಂದಷ್ಟು ಜನರಿಗೆ ಅವಕಾಶ ಮಾಡಿಕೊಡಲಾಗಿದೆ. ಎಲ್ಲ ವರ್ಗದವರಿಗೂ ಈ ಬಾರಿ ಅವಕಾಶ ಮಾಡಿಕೊಡಲು ಆಗಿಲ್ಲ” ಎಂದರು.

“ಪ್ರಾಥಮಿಕವಾಗಿ ಒಂದಷ್ಟು ಹೆಸರುಗಳನ್ನು ನಾವು ಸೂಚಿಸಿದ್ದೇವೆ. ಜೊತೆಗೆ ಸಚಿವರು, ಎಐಸಿಸಿ ಕಾರ್ಯದರ್ಶಿಗಳು ತಮ್ಮ ಆಯ್ಕೆಗಳನ್ನು ಶಿಫಾರಸ್ಸು ಮಾಡಿದ್ದಾರೆ. ಮುಂದಿನ ಎರಡು ವರ್ಷಗಳ ನಂತರ ಮತ್ತೊಮ್ಮೆ ಇದೇ ರೀತಿ ಅವಕಾಶ ಬರುವ ಕಾರಣ, ಅವರಿಗೆಲ್ಲ ಮುಂದಿನ ಬಾರಿ ಸ್ಥಾನ ನೀಡಲಾಗುವುದು. ಈಗ ಏಳರಿಂದ- ಎಂಟು ಮಂದಿಗೆ ಅವಕಾಶ ಮಾಡಿಕೊಡಲಾಗುವುದು. ಪಕ್ಷ ಸಂಘಟನೆಗೆ ದುಡಿದವರಿಗೆ ಮೊದಲ ಆದ್ಯತೆ ನೀಡಲಾಗುವುದು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಪಕ್ಷ ಏನು ಹೇಳುತ್ತದೆ ಅದರಂತೆ ಕೇಳಬೇಕು. ನಮ್ಮ ಪಟ್ಟಿಯನ್ನು ನಾವು ಸಲ್ಲಿಸಿದ್ದೇವೆ. ಹೈಕಮಾಂಡ್ ಎಐಸಿಸಿ ಕಾರ್ಯದರ್ಶಿಗಳ ಬಳಿಯು ಪಟ್ಟಿ ತೆಗೆದುಕೊಳ್ಳುತ್ತದೆ. ಚುನಾವಣಾ ಸಮಯದಲ್ಲಿ ಕೆಲಸ ಮಾಡಿದವರು ಯಾರು, ಅವರ ಹಿನ್ನೆಲೆ, ತ್ಯಾಗ, ಶ್ರಮ ಪಟ್ಟಿರುವರ ಹೆಸರು ಹೈಕಮಾಂಡ್‌ಗೆ ಸಲ್ಲಿಕೆಯಾಗುತ್ತದೆ. ಹಿರಿಯರು, ಯುವಕರು ಸೇರಿದ ಸಮತೋಲನದ ಪಟ್ಟಿಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಕುಟುಂಬದವರಿಗೆ ಬೇಡ ಕಾರ್ಯಕರ್ತರಿಗೆ ನೀಡಿ ಎನ್ನುವ ಮಾತು ಕೇಳಿಬರುತ್ತಿದೆ ಎಂದಾಗ, “ಯಾವ ಕುಟುಂಬದವರಿಗೂ ಇಲ್ಲ. ಶಾಸಕ ಸ್ಥಾನ ಬಿಟ್ಟು ಕೊಟ್ಟ ಕಾರಣಕ್ಕೆ, ಒಂದು ಸ್ಥಾನಕ್ಕೆ ಮಾತ್ರ ಈ ಮೊದಲು ಮಾತು ಕೊಟ್ಟಂತೆ ನೀಡಲಾಗುವುದು. ನಾವು ಕೆಲವರಿಗೆ ಮಾತು ಕೊಟ್ಟಿದ್ದೇವೆ. ಆ ಮಾತಿನಂತೆ ಕೆಲವೊಂದು ಸಂದರ್ಭದಲ್ಲಿ ನಡೆದುಕೊಳ್ಳಬೇಕಾಗುತ್ತದೆ” ಎಂದು ಸ್ಪಷ್ಟಪಡಿಸಿದರು.

ವಾಲ್ಮೀಕಿ ನಿಗಮದ ಅಧಿಕಾರಿಯ ಆತ್ಮಹತ್ಯೆ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ತನಿಖೆ ನಡೆಸಲು ಈಗಾಗಲೇ ಸಿಎಂ ಮತ್ತು ಗೃಹ ಸಚಿವರು ಸೂಚನೆ ನೀಡಿದ್ದಾರೆ. ಅತ್ಯಂತ ಕೂಲಂಕಷವಾಗಿ ತನಿಖೆ ನಡೆಸಲಾಗುವುದು. ಈ ವಿಚಾರದಲ್ಲಿ ತಪ್ಪು ಮಾಡಿದವರಿಗೆ ಶಿಕ್ಷೆಯಾಗುತ್ತದೆ” ಎಂದು ಹೇಳಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕುಡಿಯುವ ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಸದ್ಯ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ....

ವಿನೀತ ಮೋದಿಗೆ ಜಾಗತಿಕ ಒತ್ತಡ; ದುರ್ಬಲಗೊಳ್ಳುತ್ತಿದೆ ವಿದೇಶಾಂಗ ಸಂಬಂಧ

ಭಾರತದಲ್ಲಿ ದುರ್ಬಲರಾಗಿ, ವಿನೀತರಾಗಬೇಕಾದ ಒತ್ತಡ ಹೊಂದಿರುವ ಮೋದಿ, ತಮ್ಮ ಮೂರನೇ ಅವಧಿಯಲ್ಲಿ...

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ; ಸಿ.ಟಿ ರವಿ ವಿರುದ್ಧ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ ನೀಡಿದ್ದ ಮಾಜಿ ಸಚಿವ, ವಿಧಾನ...

ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತದೆ: ಎಎಪಿ

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ...