ಮತ ಎಣಿಕೆ ಆರಂಭ: ಅಂಚೆ ಮತ ಎಣಿಕೆ; ಕಳೆಗಟ್ಟಿದ ಮತಕೇಂದ್ರ ಆವರಣ

Date:

  • ಸಮಯಕ್ಕೆ ಸರಿಯಾಗಿ ಕಾರ್ಯಾರಂಭ ಮಾಡಿದ ಕೌಂಟಿಂಗ್‌ ಬೂತ್‌
  • ರಾಜ್ಯಾದ್ಯಂತ ಅಂಚೆ ಮತಗಳಲ್ಲಿ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್‌

ರಾಜ್ಯ ರಾಜಕೀಯದ ಭವಿಷ್ಯ ಬದಲಿಸುವ ವಿಧಾನಸಭಾ ಚುನಾವಣೆ 2023ರ ಮತ ಎಣಿಕಾ ಕಾರ್ಯ ಆರಂಭಗೊಂಡಿದೆ.

ಮುಂಜಾನೆ ಎಂಟಕ್ಕೆ ಪೊಲೀಸ್‌ ಬಿಗಿ ಭದ್ರತೆ ಜೊತೆಗೆ ತೆರೆದುಕೊಂಡ ಮತ ಎಣಿಕಾ ಕೇಂದ್ರಗಳಲ್ಲಿ ಮೊದಲಿಗೆ ಅಂಚೆ ಮತಗಳ ಎಣಿಕೆ ಆರಂಭವಾಗಿದೆ. ಇದಾದ ಬಳಿಕ ಇವಿಎಂ ಮತ ಎಣಿಕೆ ಮಾಡಲಾಗುತ್ತದೆ.

ಮತ ಕೇಂದ್ರಗಳ ಸುತ್ತಲೂ ಬಿಗಿ ಪೊಲೀಸ್‌ ಬಂದೋಬಸ್ತ್‌ ನಿಯೋಜನೆ ಮಾಡಲಾಗಿದೆ. ಮತ್ತೊಂದೆಡೆ ಎಣಿಕಾ ಕೇಂದ್ರದ ಸುತ್ತಲೂ ವಿವಿಧ ಪಕ್ಷಗಳ ಕಾರ್ಯಕರ್ತರು ನೆರೆದಿದ್ದು, ತಮ್ಮ ನೆಚ್ಚಿನ ನಾಯಕರ ಭವಿಷ್ಯ ನಿರ್ಧಾರಕ್ಕೆ ಕಾದು ಕುಳಿತಿದ್ದಾರೆ.

ಕಣದಲ್ಲಿರುವ ವಿವಿಧ ಪಕ್ಷಗಳ 2615 ಅಭ್ಯರ್ಥಿಗಳಲ್ಲಿ ಎಷ್ಟು ಮಂದಿ ವಿಧಾನಸಭೆ ಪ್ರವೇಶಿಸಲಿದ್ದಾರೆ ಎನ್ನುವ ಕುತೂಹಲಕ್ಕೆ ಮಧ್ಯಾಹ್ನ ವೇಳೆಗೆ ಉತ್ತರ ಸಿಗುವ ನಿರೀಕ್ಷೆ ಇದೆ.

ಅಂಚೆ ಮತ ಎಣಿಕೆ ಕಾರ್ಯದಲ್ಲಿ ಬೆಂಗಳೂರನ್ನೂ ಒಳಗೊಂಡಂತೆ ಆರಂಭದಲ್ಲಿ ಕಾಂಗ್ರೆಸ್‌ ಮುನ್ನಡೆ ಸಾಧಿಸಿದೆ. ಬಿಜೆಪಿ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ನ ಮುನ್ನಡೆ ಕಾಯ್ದುಕೊಂಡಿರುವುದು ಕುತೂಹಲ ಹೆಚ್ಚಿಸಿದೆ.

ಕೌಂಟಿಂಗ್

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರಾಗಿ ಸಚಿವರ ನೇಮಕ; ಎಂ ಬಿ ಪಾಟೀಲ್‌, ಜಾರ್ಜ್‌ಗಿಲ್ಲ ಜವಾಬ್ದಾರಿ

ಸಚಿವರ ತವರು ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ನೇಮಕ ಸಂಭಾವ್ಯ ಅಭ್ಯರ್ಥಿಗಳ...

ವಿಪಕ್ಷಗಳಿಂದ ನೀರಿನ ರಾಜಕಾರಣ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಕಾವೇರಿ ನೀರಿನ ವಿಚಾರದಲ್ಲಿ ವಿಪಕ್ಷಗಳ ಮುಖಂಡರಾದ ಬಿಎಸ್​ವೈ, ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿಯವರು...

ತಮಿಳುನಾಡಿಗೆ ನೀರು ಬಿಟ್ಟಿದ್ದೇ ಆದರೆ ನಮ್ಮ ನಡೆ ಬೇರೆ ಇರಲಿದೆ: ಕುಮಾರಸ್ವಾಮಿ ಎಚ್ಚರಿಕೆ

ತಮಿಳುನಾಡು ಕೇಳುವ ಮೊದಲೇ ನೀರು ಬಿಟ್ಟ ಸರ್ಕಾರ ತಮಿಳುನಾಡಿನವರು ಎರಡು ಬೆಳೆ ಬೆಳೆಯುತ್ತಾರೆ:...

ಹೊಸ ಸಂಸತ್ ಕಟ್ಟಡವನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎನ್ನಬೇಕು: ಜೈರಾಮ್ ರಮೇಶ್

ಹೊಸ ಸಂಸತ್ ಭವನದ ರಚನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್...