ದೇಶದ ಸಂವಿಧಾನ-ಸಾಮರಸ್ಯ ಸಂಸ್ಕೃತಿ ನಮ್ಮ ಶಕ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

  • ಇಲ್ಲಿಯವರೆಗೂ ಕಪ್ಪುಚುಕ್ಕೆ ಇಲ್ಲದಂತೆ ಎಸ್‌ಎಸ್‌ಎಫ್ ಕೆಲಸ ಮಾಡಿದೆ
  • ಸುನ್ನಿ ಸ್ಟೂಡೆಂಟ್ ಫೆಡರೇಷನ್‌ನಿಂದ ಬೆಂಗಳೂರಿನಲ್ಲಿ ‘ಗೋಲ್ಡನ್ 50’ ಸಮಾವೇಶ

ದೇಶದ ಐಕ್ಯತೆ, ಸಂವಿಧಾನ ಮತ್ತು ಸಮಗ್ರತೆಯನ್ನು ಕಾಪಾಡಿಕೊಳ್ಳಲು ಎಸ್‌ಎಸ್‌ಎಫ್ ಕೆಲಸ ಮಾಡಬೇಕು. ಇದಕ್ಕಾಗಿ ತಮ್ಮ ಶಕ್ತಿ, ಸಂಘಟನೆಯನ್ನು ಮುಡಿಪಾಗಿ ಇಟ್ಟು ಅಭಿವೃದ್ಧಿ ದಿಕ್ಕಿನಲ್ಲಿ ದೇಶವನ್ನು ವೇಗವಾಗಿ ಮುನ್ನಡೆಸುವ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

- Advertisement -

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಸುನ್ನಿ ಸ್ಟೂಡೆಂಟ್ಸ್‌ ಫೆಡರೇಷನ್ (SSF) ‘ಗೋಲ್ಡನ್ 50’ ಸಮಾವೇಶದಲ್ಲಿ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಸಾಮರಸ್ಯ ಭಾರತದ ಮಣ್ಣಿನ ಗುಣ. 50 ವರ್ಷಗಳಿಂದ ದೇಶದ ಸೌಹಾರ್ದ ಮತ್ತು ಸಾಮರಸ್ಯದ ಸಂಸ್ಕೃತಿ ರಕ್ಷಿಸಲು ಹೋರಾಡುತ್ತಿರುವ ಸಂಘಟನೆ ಎಂದು ಕೇಳಿದ್ದೇನೆ. ದೇಶದ ಸಂವಿಧಾನವನ್ನು ಪ್ರತಿಯೊಬ್ಬ ವಿದ್ಯಾರ್ಥಿಗೂ ತಲುಪಿಸಬೇಕು. ಸಂವಿಧಾನದ ಮೌಲ್ಯಗಳು ಉಳಿದರೆ ದೇಶ ಉಳಿಯುತ್ತದೆ ಎಂದರು.

cm 1 4

ಭಾರತ ಪ್ರತಿಯೊಬ್ಬ ಭಾರತೀಯರಿಗೂ ಸೇರಿದ್ದು. ನಮ್ಮ ನಾಡು ಬುದ್ದ, ಬಸವ, ಅಂಬೇಡ್ಕರ್, ಕುವೆಂಪು, ಸೂಫಿ-ಸಂತರ ತಪಸ್ಸು ಮತ್ತು ಮೌಲ್ಯಗಳಿಂದ ರೂಪುಗೊಂಡಿದೆ. ರಾಜ್ಯದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಸಂವಿಧಾನಬದ್ದವಾದ ರಕ್ಷಣೆ ಇದೆ. ಜಾತಿ, ಧರ್ಮದ ಹೆಸರಿನಲ್ಲಿ ತಾರತಮ್ಯಕ್ಕೆ, ಕಾನೂನು ಕೈಗೆ ತೆಗೆದುಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಭರವಸೆ ನೀಡಿದರು

ಗ್ರಾಂಡ್ ಮುಫ್ತಿ ಆಫ್ ಇಂಡಿಯಾ ಶೇಖ್ ಅಬೂಬಕರ್ ಅಹಮದ್ ಅವರು ಅಧ್ಯಕ್ಷತೆ ವಹಿಸಿದ್ದ ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸ್ಪೀಕರ್ ಯು.ಟಿ.ಖಾದರ್, ಸಚಿವರಾದ ಝಮೀರ್ ಅಹಮದ್, ಮುಖ್ಯಮಂತ್ರಿಗಳ ರಾಜಕೀಯ ಸಲಹೆಗಾರರಾದ ನಾಸಿರ್ ಅಹಮದ್ ಸೇರಿ ಎಸ್‌ಎಸ್‌ಎಫ್‌ನ ರಾಜ್ಯ ಮುಖಂಡರುಗಳು ಮತ್ತು ಹಲವು ಪ್ರಮುಖರು ವೇದಿಕೆಯಲ್ಲಿದ್ದರು.

cm 3
cm 2 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮಧ್ವಾಚಾರ್ಯರ ದ್ವೈತ ಸಿದ್ಧಾಂತ ಭಾರತೀಯ ತತ್ವಶಾಸ್ತ್ರಕ್ಕೆ ಮಹತ್ವದ ಕೊಡುಗೆ: ಪ್ರೊ. ಪಿ.ಜಿ. ತಡಸ

ಮಧ್ವಾಚಾರ್ಯರು ದ್ವೈತ ತತ್ವವನ್ನು ದೇಶಾದ್ಯಂತ ಪಸರಿಸುವ ಮೂಲಕ ಭಾರತೀಯ ತತ್ವಶಾಸ್ತ್ರ ಹಾಗೂ...

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...