ದೆಹಲಿ ವಿದ್ಯುತ್ ನಿಯಂತ್ರಕ ಮುಖ್ಯಸ್ಥರ ನೇಮಕ ವಿವಾದ: ಕೇಂದ್ರ, ಎಲ್‌ಜಿಗೆ ಸುಪ್ರೀಂ ನೋಟಿಸ್

Date:

ದೆಹಲಿ ನಗರದ ವಿದ್ಯುತ್ ನಿಯಂತ್ರಕ ಆಯೋಗದ ಅಧ್ಯಕ್ಷರ (ಡಿಇಆರ್‌ಸಿ) ನೇಮಕಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಸರ್ಕಾರದ ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರಿಗೆ ನೋಟಿಸ್‌ ಜಾರಿ ಮಾಡಿದೆ.

ಅಲಹಾಬಾದ್‌ ಹೈಕೋರ್ಟ್ ಮಾಜಿ ನ್ಯಾಯಾಧೀಶರನ್ನು ಡಿಇಆರ್‌ಸಿ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಜುಲೈ 11ರ ಮುಂದಿನ ಆದೇಶದವರೆಗೂ ಪ್ರಮಾಣ ವಚನವನ್ನು ಬೋಧಿಸಬಾರದು ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರನ್ನೊಳಗೊಂಡ ಪೀಠ ಹೇಳಿದೆ. ನೋಟಿಸ್‌ ಜಾರಿ ಹಿನ್ನೆಲೆಯಲ್ಲಿ ಪ್ರಮಾಣ ವಚನ ಸಮಾರಂಭ ಮುಂದೂಡಿಕೆಯಾಗಿದೆ.

ರಾಜಧಾನಿಯ ಅಧಿಕಾರಶಾಹಿಗಳನ್ನು ಯಾರು ನಿಯಂತ್ರಿಸುತ್ತಾರೆ ಎಂಬುದರ ಕುರಿತು ಕೇಂದ್ರ ಮತ್ತು ದೆಹಲಿ ಸರ್ಕಾರದ ಹಗ್ಗ-ಜಗ್ಗಾಟದ ನಡುವೆ ಇಂದಿನ ತೀರ್ಪು ಕೂಡ ಮಹತ್ವ ಪಡೆದುಕೊಂಡಿದೆ. ಚುನಾಯಿತ ಸರ್ಕಾರವೇ ದೆಹಲಿಯ ಅಧಿಕಾರಿಗಳ ಮೇಲೆ ನಿಯಂತ್ರಣ ಸಾಧಿಸಬೇಕು ಮತ್ತು ಲೆಫ್ಟಿನೆಂಟ್ ಗವರ್ನರ್ ಅವರ ಅಧಿಕಾರ ಸಾರ್ವಜನಿಕ ಸುವ್ಯವಸ್ಥೆ, ಕಾನೂನು ಮತ್ತು ಭೂಮಿ ವಿಷಯಗಳಿಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಮೇ ತಿಂಗಳಿನಲ್ಲಿ ತೀರ್ಪು ನೀಡಿತ್ತು. 

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಸರ್ಕಾರಗಳನ್ನು ಬುಡಮೇಲು ಮಾಡುತ್ತಿರುವ ಬಿಜೆಪಿ ಬಗ್ಗೆ ಸುಪ್ರೀಂ ಕೋರ್ಟ್ ಗಮನ ಹರಿಸಲಿ: ಕಪಿಲ್ ಸಿಬಲ್

ಇದಾದ ಕೆಲವೇ ದಿನಗಳಲ್ಲಿ, ದೆಹಲಿ ಅಧಿಕಾರಶಾಹಿಗಳ ಮೇಲೆ ನಿಯಂತ್ರಣವನ್ನು ಉಳಿಸಿಕೊಳ್ಳಲು ಕೇಂದ್ರವು ಸುಗ್ರೀವಾಜ್ಞೆ ಜಾರಿಗೊಳಿಸುವ ಮೂಲಕ ಸುಪ್ರೀಂ ಕೋರ್ಟ್ ದೆಹಲಿ ಸರ್ಕಾರಕ್ಕೆ ನೀಡಿದ್ದ ಅಧಿಕಾರವನ್ನು ಮೊಟಕುಗೊಳಿಸಿತ್ತು. ಕೇಂದ್ರದ ಸುಗ್ರಿವಾಜ್ಞೆಯ ವಿರುದ್ಧ ಅರವಿಂದ್ ಕೇಜ್ರಿವಾಲ್ ಸರ್ಕಾರವು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಲೆಫ್ಟಿನೆಂಟ್ ಗವರ್ನರ್ ಅವರು ದೆಹಲಿ ನಗರದ ವಿದ್ಯುತ್ ನಿಯಂತ್ರಕ ಆಯೋಗದ ಅಧ್ಯಕ್ಷರನ್ನು ನೇಮಿಸಿರುವ ಕ್ರಮವನ್ನು ಪ್ರಶ್ನಿಸಿ ದೆಹಲಿ ಸರ್ಕಾರ ಪ್ರತ್ಯೇಕ ಅರ್ಜಿ ಸಲ್ಲಿಸಿದೆ. ಎಎಪಿ ಸರ್ಕಾರವು ರಾಜಧಾನಿಯ ನಿವಾಸಿಗಳಿಗೆ ವಿಸ್ತರಿಸಿದ ವಿದ್ಯುತ್ ಸಬ್ಸಿಡಿಯನ್ನು ನಿಲ್ಲಿಸಲು ಬಿಜೆಪಿ ಆಡಳಿತದ ಕೇಂದ್ರ ಸರ್ಕಾರದ ಪ್ರಯತ್ನವಾಗಿದೆ ಎಂದು ಆರೋಪಿಸಲಾಗಿದೆ.

ಇದಕ್ಕೆ ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, “ಯಾರೂ ಉಚಿತ ವಿದ್ಯುತ್ ಅನ್ನು ನಿಲ್ಲಿಸುತ್ತಿಲ್ಲ ಹಾಗೂ ಹೊಸ ಡಿಇಆರ್‌ಸಿ ಮುಖ್ಯಸ್ಥರ ಪ್ರಮಾಣ ವಚನವನ್ನು ದೆಹಲಿ ಸರ್ಕಾರ ಉದ್ದೇಶಪೂರ್ವಕವಾಗಿ ವಿಳಂಬ ಮಾಡುತ್ತಿದೆ” ಎಂದು ಕೋರ್ಟ್‌ಗೆ ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಗಪುರ್ ಉದ್ಯಮಿಗಳು ಹೂಡಿಕೆಗೆ ಮುಂದೆ ಬಂದರೆ ಭೂಮಿ ಒದಗಿಸಲು ಸಿದ್ಧ: ಸಚಿವ ಎಂ ಬಿ ಪಾಟೀಲ್

‌ಸಿಂಗಾಪುರದ ಉದ್ಯಮಿಗಳು ರಾಜ್ಯದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಗೆ ಮುಂದೆ ಬಂದರೆ ಅವರಿಗೆ...

ಇಂದು ನಡೆಯಲಿದೆ ಹೈ ಪ್ರೊಫೈಲ್‌ ಕೇಸುಗಳ ವಿಚಾರಣೆ; ಸಂಪೂರ್ಣ ಮಾಹಿತಿ ಇಲ್ಲಿದೆ

ಇಂದು ನಾಲ್ಕು ಹೈಪ್ರೊಫೈಲ್‌ ಕೇಸುಗಳ ವಿಚಾರಣೆ ಹೈಕೋರ್ಟ್‌ ಸೇರಿದಂತೆ ವಿವಿಧ ಕೋರ್ಟ್‌ಗಳಲ್ಲಿ...

ಲೈಂಗಿಕ ದೌರ್ಜನ್ಯ | ಸಿ ಪಿ ಯೋಗೇಶ್ವರ್ ಆಪ್ತ ಟಿ ಎಸ್‌ ರಾಜು ವಿರುದ್ಧ ದೂರು ದಾಖಲು, ಆರೋಪಿ ಪರಾರಿ

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಚನ್ನಪಟ್ಟಣ ಬಿಜೆಪಿ ಗ್ರಾಮಾಂತರ ಮಂಡಳದ ಅಧ್ಯಕ್ಷ...