ಸಚಿವ ಕೆ ಜೆ ಜಾರ್ಜ್ ವಿರುದ್ಧ ಪಿಸಿಆರ್ ದಾಖಲಿಸಲು ಜನಪ್ರತಿನಿಧಿಗಳ ಕೋರ್ಟ್ ಆದೇಶ

Date:

‘ರಾಜ್ಯದಲ್ಲಿ ಸ್ಮಾರ್ಟ್‌ ಮೀಟರ್‌ ಅಳವಡಿಕೆಗೆ ಸಂಬಂಧಿಸಿದ ಟೆಂಡರ್‌ ಸಂಪೂರ್ಣ ಕಾನೂನು ಬಾಹಿರವಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ಅಧ್ಯಕ್ಷರೂ ಆದ ಇಂಧನ ಸಚಿವ ಕೆ ಜೆ ಜಾರ್ಜ್‌ ವಿರುದ್ಧ ಪಿಸಿಆರ್ ದಾಖಲಿಸಿಕೊಳ್ಳಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

- Advertisement -

ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರಿನ ವಿಚಾರಣೆ ನಡೆಸುತ್ತಿರುವ ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್‌ ಈ ಕುರಿತಂತೆ ಬುಧವಾರ ಆದೇಶಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ಅಶೋಕ್ ಸಿಂಘಾಲ್ ಜನ್ಮಶತಮಾನೋತ್ಸವ: ಕೋಮುವಾದದ ರೂವಾರಿಯ ವೈಭವೀಕರಣ –...

ಬೆಂಗಳೂರಿನಿಂದ ದೆಹಲಿಯವರೆಗೆ ನಡೆಯುತ್ತಿರುವ ಅಶೋಕ್ ಸಿಂಘಾಲ್ ಅವರ ಜನ್ಮಶತಮಾನೋತ್ಸವದ ಆಚರಣೆಗಳು ಭಾರತದ ಪ್ರಜಾಸತ್ತಾತ್ಮಕ ಭವಿಷ್ಯಕ್ಕೆ ಒಡ್ಡಿರುವ ಅಪಾಯದ ಮುನ್ಸೂಚನೆಯಾಗಿವೆ. ಕೋಮು ಸೌಹಾರ್ದತೆಗೆ ಕೊಳ್ಳಿ ಇಟ್ಟ, ಹಿಂಸಾಚಾರಗಳನ್ನು ಪ್ರೇರೇಪಿಸಿದ ಮತ್ತು ದೇಶದ ಬಹುತ್ವವನ್ನು ಸದಾ...

‘ಆರೋಪಿಗಳ ವಿರುದ್ಧದ ದೂರಿನ ಕುರಿತಾದ ವಸ್ತುಸ್ಥಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ’ ಎಂದು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿರುವ ನ್ಯಾಯಾಧೀಶರು ವಿಚಾರಣೆ ಮುಂದೂಡಿದ್ದಾರೆ.

ದೂರಿನಲ್ಲಿ ಸಚಿವ ಕೆ ಜೆ ಜಾರ್ಜ್‌, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಬೆಸ್ಕಾಂ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಎಚ್‌ ಜೆ ರಮೇಶ್‌ ಅವರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ.

ಇದನ್ನು ಓದಿದ್ದೀರಾ?: ನಾಸೀರುದ್ದೀನ್ ಷಾ @ 75 | ಅನಿಸಿದ್ದನ್ನು ಆಡುವ ಘಾಟಿ ಮುದುಕ

ಬಿಜೆಪಿಯ ಶಾಸಕ ಡಾ. ಸಿ ಎನ್‌ ಅಶ್ವತ್ಥ ನಾರಾಯಣ, ಶಾಸಕರಾದ ಎಸ್ ಆರ್ ವಿಶ್ವನಾಥ್ ಹಾಗೂ ಧೀರಜ್ ಮುನಿರಾಜು ಈ ಖಾಸಗಿ ದೂರು ಸಲ್ಲಿಸಿದ್ದಾರೆ. ದೂರುದಾರರ ಪರ ಪದಾಂಕಿತ ಹಿರಿಯ ವಕೀಲೆ ಲಕ್ಷ್ಮಿ ಅಯ್ಯಂಗಾರ್ ವಾದ ಮಂಡಿಸಿದ್ದಾರೆ.

ದೂರಿನಲ್ಲಿ ಏನಿದೆ?

‘ಸ್ಮಾರ್ಟ್‌ ಮೀಟರ್‌ ಸೇವೆ ಒದಗಿಸುವ ನಿಟ್ಟಿನಲ್ಲಿ 2024ರ ಸೆಪ್ಟೆಂಬರ್ 26ರಂದು ಟೆಂಡರ್‌ ಕರೆಯಲಾಗಿತ್ತು. ಬಿಡ್‌ದಾರರಾದ ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್‌ ಎಂಬ ಶೆಲ್‌ ಕಂಪನಿಗೆ ಟೆಂಡರ್‌ ನೀಡಲಾಗಿದೆ. ಈ ಟೆಂಡರ್‌ ಅನ್ನು ರಾಜ್ಯದಲ್ಲಿ ವಿವಿಧ ಭಾಗಗಳ ವಿದ್ಯುತ್‌ ಸರಬರಾಜು ಕಂಪನಿಗಳಿಗೆ ಪ್ರತ್ಯೇಕ ಟೆಂಡರ್‌ ಕರೆಯದೆ ಬೆಸ್ಕಾಂ ಕಂಪನಿಯೊಂದಕ್ಕೇ ನೇರವಾಗಿ ನೀಡಲಾಗಿದೆ. ಈ ಕಾನೂನು ಬಾಹಿರವಾದ ಒಟ್ಟು ಪ್ರಕ್ರಿಯೆ ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ (ಕೆಟಿಪಿಪಿ) ಅಧಿನಿಯಮ-2000 ಹಾಗೂ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (ಕೆಇಆರ್‌ಸಿ) ನಿಯಮಗಳಿಗೆ ವಿರುದ್ಧವಾಗಿದೆ’ ಎಂದು ದೂರುದಾರರು ಆರೋಪಿಸಿದ್ದಾರೆ.

‘ದೂರಿಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ–2023ರ ಕಲಂ 314, 316 ಮತ್ತು 61 ಹಾಗೂ ಭ್ರಷ್ಟಾಚಾರ ನಿಗ್ರಹ ತಿದ್ದುಪಡಿ ಕಾಯ್ದೆ–2018ರ ಕಲಂ 13(1) ಎ ಮತ್ತು 13(1) ಬಿ ಅನ್ವಯ ಆರೋಪಿಗಳ ವಿರದ್ಧ ಲೋಕಾಯುಕ್ತ ಪೊಲೀಸ್‌ ವರಿಷ್ಠಾಧಿಕಾರಿ ಎಫ್‌ಐಆರ್ ದಾಖಲಿಸಲು ಆದೇಶಿಸಬೇಕು’ ಎಂದು ಫಿರ್ಯಾದುದಾರರು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

2017ರಲ್ಲಿ ಚುನಾವಣಾ ಆಯೋಗವನ್ನು ನಂಬಿದ್ದೆವು, ಆದರೆ 2022ರಲ್ಲಿ ಎಸ್‌ಪಿ ಮತಗಳನ್ನು ಇಸಿ ಅಳಿಸಿದೆ: ಅಖಿಲೇಶ್ ಆರೋಪ

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಬೆಂಬಲಿಗರ...