ಸೌಜನ್ಯಾ ಪ್ರಕರಣ | ನ್ಯಾಯ ಸಿಗದಿರುವುದಕ್ಕೆ ನೋಟಾ ಅಭಿಯಾನ: ಮಹೇಶ್ ಶೆಟ್ಟಿ ತಿಮರೋಡಿ

Date:

ಧರ್ಮಸ್ಥಳದ ಉಜಿರೆಯಲ್ಲಿ ಹನ್ನೆರಡು ವರ್ಷಗಳ ಹಿಂದೆ ನಡೆದ ‘ಸೌಜನ್ಯಾ’ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗದಿರುವುದಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೋಟಾ ಚಲಾಯಿಸಲು ಅಭಿಯಾನ ಪ್ರಾರಂಭವಾಗಿದೆ.

- Advertisement -

ಸೌಜನ್ಯಾ ಹೋರಾಟ ಸಮಿತಿ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆಯಿಂದ ನೋಟಾ ಅಭಿಯಾನಾಕ್ಕೆ ಕರೆ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಒಂದು ಪಕ್ಷಕ್ಕೆ ಪರೋಕ್ಷವಾಗಿ ಬೆಂಬಲ ನೀಡುವ ಉದ್ದೇಶದಿಂದ ನೋಟಾ ಅಭಿಯಾನ ತೆಗೆದುಕೊಳ್ಳಲಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಈ ಬಗ್ಗೆ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿ ಸ್ಪಷ್ಟನೆ ನೀಡಿದ್ದಾರೆ.

“ಹನ್ನೆರಡು ವರ್ಷಗಳಿಂದ ಸೌಜನ್ಯಾ ಪ್ರಕರಣದಲ್ಲಿ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಆದರೂ ನ್ಯಾಯ ಸಿಕ್ಕಿಲ್ಲ. ಬಿಜೆಪಿಯಾಗಲಿ, ಕಾಂಗ್ರೆಸ್ ಆಗಲಿ ನಮಗೆ ನ್ಯಾಯ ಕೊಡಿಸಿಲ್ಲ. ಹಾಗಾಗಿ, ನಾವು ನೋಟಾ ಅಭಿಯಾನಕ್ಕೆ ಕರೆ ನೀಡಿದ್ದೇವೆ” ಎಂದು ತಿಳಿಸಿದ್ದಾರೆ.

“ಯಾವ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದ ಬಿಜೆಪಿ ನಾಯಕರು ಈಗ ಆ ಬಗ್ಗೆ ಚಕಾರ ಎತ್ತುತ್ತಿಲ್ಲ. ಪ್ರಕರಣವನ್ನು ಭೇದಿಸುತ್ತೇವೆ ಎಂದು ಸವಾಲು ಹಾಕಿದ್ದ ಕಾಂಗ್ರೆಸ್ ಸರಿಯಾಗಿ ಪ್ರತಿಕ್ರಿಯಿಸಿಲ್ಲ” ಎಂದು ತಿಮರೋಡಿ ಆಕ್ರೋಶ ಹೊರಹಾಕಿದ್ದಾರೆ.

ಸೌಜನ್ಯಾ ವಿಚಾರ ಸೈಲೆಂಟ್

“ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಬಿಜೆಪಿಯ ಅಭ್ಯರ್ಥಿ ಬೃಜೇಶ್ ಚೌಟ ಆಗಲಿ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಾಗಲಿ ಸೌಜನ್ಯಾ ಕೇಸಿನ ಬಗ್ಗೆ ತುಟಿಬಿಚ್ಚುತ್ತಿಲ್ಲ. ಸನಾತನ ಹಿಂದೂ ಧರ್ಮದ ಮೇಲೆ ನಡೆದ ದೊಡ್ಡ ಷಡ್ಯಂತ್ರವಿದು. ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಸುಮಾರು ನಲವತ್ತು ವರ್ಷಗಳಿಂದ ಗುರುತಿಸಿಕೊಂಡು, ಬಿಜೆಪಿಯಲ್ಲಿ ಇದ್ದವರು ನಾವು. ಇಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ನಮಗೆ ಗೊತ್ತಿದೆ” ಎಂದು ತಿಮರೋಡಿ ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...