ಅಲ್ಪಸಂಖ್ಯಾತರು ಭಯಭೀತರಾಗಿದ್ದರೂ ನ್ಯಾಯಾಲಯಗಳು ಮೂಕ ಪ್ರೇಕ್ಷಕರಾಗಿವೆ: ನಿವೃತ್ತ ನ್ಯಾ. ಅಜಿತ್ ಪ್ರಕಾಶ್ ಶಾ

Date:

Advertisements
  • ದೆಹಲಿ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಅಜಿತ್ ಪ್ರಕಾಶ್ ಶಾ
  • ಬುಲ್ಡೋಝರ್ ರಾಜಕೀಯ ಇಂದು ಅಧಿಕಾರದ ಸಂಕೇತವಾಗಿ ಮಾರ್ಪಾಡಾಗಿದೆ

ದೇಶದಲ್ಲಿ ಕೋಮುವಾದಿ ಶಕ್ತಿಗಳ ಹೆಚ್ಚಳದ ಮಧ್ಯೆ ಅಲ್ಪಸಂಖ್ಯಾತರು ಭಯದಲ್ಲಿ ಉಳಿದಿದ್ದರೂ ನ್ಯಾಯಾಲಯಗಳು ಮೂಕ ಪ್ರೇಕ್ಷಕರಾಗಿವೆ ಎಂದು ದೆಹಲಿ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಅಜಿತ್ ಪ್ರಕಾಶ್ ಶಾ ಅಭಿಪ್ರಾಯಿಸಿದ್ದಾರೆ.

ಭಾರತದಲ್ಲಿ ನ್ಯಾಯಾಲಯಗಳಂತಹ ಔಪಚಾರಿಕ ಸಂಸ್ಥೆಗಳು ದುರ್ಬಲಗೊಳ್ಳುತ್ತಿರುವ ಬಗ್ಗೆ ಅವರು ಆತಂಕ ವ್ಯಕ್ತಪಡಿಸಿರುವ ನಿವೃತ್ತ ನ್ಯಾಯಮೂರ್ತಿ, ದೇಶದಲ್ಲಿ ಇತ್ತೀಚೆಗೆ ‘ಉಗ್ರವಾದ ಮತ್ತು ಕೋಮುವಾದಿ’ ಶಕ್ತಿಗಳು ಹೆಚ್ಚುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

“ದೇಶದಲ್ಲಿ ಅಲ್ಪಸಂಖ್ಯಾತರು ಭಯಭೀತರಾಗಿದ್ದಾರೆ. ದ್ವೇಷದ ಸಂಸ್ಕೃತಿ ಹೆಚ್ಚಳವಾಗುತ್ತಿದೆ. ಆದರೂ ನ್ಯಾಯಾಲಯಗಳು ಈ ಬಗ್ಗೆ ಮಾತನಾಡುತ್ತಿಲ್ಲ. ಮೂಕ ಪ್ರೇಕ್ಷಕರಾಗಿದೆ’ ಎಂದು ಎ ಪಿ ಶಾ ಅಭಿಪ್ರಾಯಿಸಿದ್ದಾರೆ.

Advertisements

“ಹರಿದ್ವಾರ, ಹರಿಯಾಣ ಅಥವಾ ಇತರೆಡೆಗಳಲ್ಲಿ ಬಹುಸಂಖ್ಯಾತರು ಇತರರನ್ನು, ಅದರಲ್ಲೂ ವಿಶೇಷವಾಗಿ ಮುಸ್ಲಿಮರನ್ನು ಶತ್ರುಗಳೆಂದು ಭಾವಿಸುವಂತೆ ಮಾಡಲಾಗುತ್ತಿದೆ. ಅಲ್ಪಸಂಖ್ಯಾತರ ವಿರುದ್ಧ ದ್ವೇಷದ ಭಾವನೆ ದೇಶದಾದ್ಯಂತ ಹರಡಲಾಗುತ್ತಿದೆ” ಎಂದು ತಿಳಿಸಿದ್ದಾರೆ.

“ಎನ್‌ಕೌಂಟರ್ ಹತ್ಯೆ, ಅಲ್ಪಸಂಖ್ಯಾತ ಸಮುದಾಯದ ವ್ಯಾಪಾರಿಗಳ ಮೇಲೆ ಪಂಚಾಯತ್ ನಿಷೇಧ ಹೇರಿಕೆ ಮತ್ತು ‘ಬುಲ್ಡೋಝರ್ ರಾಜಕೀಯ’ದಂತಹ ಕಾನೂನುಬಾಹಿರ ಸಾಧನಗಳು ಈ ಪರಿಸ್ಥಿತಿಯನ್ನು ಮತ್ತಷ್ಟು ಉಲ್ಬಣಗೊಳಿಸಿದೆ ಎಂದು ನಿವೃತ್ತ ನ್ಯಾಯಮೂರ್ತಿ ಬೇಸರಿಸಿದ್ದಾರೆ.

“ಬುಲ್ಡೋಝರ್ ಇಂದು ಅಧಿಕಾರದ ಸಂಕೇತವಾಗಿ ಮಾರ್ಪಾಡಾಗಿದೆ. ಯಾವುದೇ ಕಾನೂನಿನ ಅನುಮತಿ ಅಥವಾ ಅಧಿಕಾರ ವ್ಯಾಪ್ತಿ ಇಲ್ಲದೇಯೇ ಬುಲ್ಡೋಝರ್ ಅನ್ನು ಬಳಸಲಾಗುತ್ತಿದೆ. ಹಲವಾರು ಮುಗ್ಧ ಜೀವಗಳು, ಜೀವನವನ್ನು ಕಳೆದುಕೊಂಡಿವೆ. ಅವರಿಗೆ ಚೇತರಿಸಿಕೊಳ್ಳಲು ಯಾವುದೇ ಅವಕಾಶ ನೀಡಲಾಗುತ್ತಿಲ್ಲ” ಎಂದು ದೆಹಲಿ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಅಜಿತ್ ಪ್ರಕಾಶ್ ಶಾ ಬೇಸರ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X