ಕೊರೋನಾ ರೂಪಾಂತರಿಯ ಬಗ್ಗೆ ಆತಂಕ ಬೇಡ: ಜಿನೋಮ್ ಒಕ್ಕೂಟದ ಮುಖ್ಯಸ್ಥ ಡಾ. ಎನ್.ಕೆ. ಅರೋರಾ

Date:

ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ವರದಿಯ ನಡುವೆಯೇ ದೇಶದಲ್ಲಿ ಮತ್ತೆ ಕೊರೋನಾ ಆತಂಕ ಆವರಿಸಿದೆ. ಈ ನಡುವೆ ಹೇಳಿಕೆ ನೀಡಿರುವ ಭಾರತೀಯ ಸಾರ್ಸ್-ಕೋವ್-2 ಜಿನೋಮ್ ಒಕ್ಕೂಟದ (ಐಎನ್‌ಎಎಸಿಒಜಿ) ಮುಖ್ಯಸ್ಥ ಡಾ. ಎನ್.ಕೆ. ಅರೋರಾ, “ಕೊರೋನಾ ರೂಪಾಂತರಿಯ ಬಗ್ಗೆ ಆತಂಕ ಬೇಡ” ಎಂದು ತಿಳಿಸಿದ್ದಾರೆ.

- Advertisement -

“ಕೊರೋನಾ ವೈರಸ್‌ನ ಉಪತಳಿ ಜೆಎನ್-1 ಬಗ್ಗೆ ಜನರು ಆತಂಕಪಡುವ ಅಗತ್ಯವಿಲ್ಲ. ಕೇರಳದಲ್ಲಿ ಮೃತಪಟ್ಟ ವ್ಯಕ್ತಿ ಕೇವಲ ವೈರಸ್ ಸೋಂಕಿನಿಂದ ಮೃತಪಟ್ಟಿಲ್ಲ. ಆತನಿಗೆ ಗಂಭೀರ ಆರೋಗ್ಯ ಸಮಸ್ಯೆಗಳು ಕೂಡ ಇದ್ದವು” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಮೃತ ವ್ಯಕ್ತಿಯು ಹೃದಯ, ಶ್ವಾಸಕೋಶ ಮತ್ತು ಮೂತ್ರಪಿಂಡದ ಕಾಯಿಲೆಗಳಿಂದ ಬಳಲುತ್ತಿದ್ದರು. ಈ ಕಾರಣಗಳಿಂದ ಸಾವು ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಕೇವಲ ಜೆಎನ್.1 ಸೋಂಕಿನಿಂದ ಅಲ್ಲ” ಎಂದು ಡಾ. ಎನ್.ಕೆ. ಅರೋರಾ ಸ್ಪಷ್ಟಪಡಿಸಿದ್ದಾರೆ.

“ಕೊರೋನಾ ರೂಪಾಂತರಿ ಜೆಎನ್-1 ಬಗ್ಗೆ ಯಾವುದೇ ಆತಂಕಪಡುವ ಅಗತ್ಯವಿಲ್ಲ. ಸೋಂಕಿತರ ಮಾದರಿಗಳ ಸಂಖ್ಯೆ ಬಹಳಷ್ಟು ಕಡಿಮೆ ಇದ್ದು, ಎಲ್ಲ ರಾಜ್ಯಗಳಿಂದ ಮಾದರಿ ಸಂಗ್ರಹಿಸಲಾಗುತ್ತಿದೆ. ಆದರೂ ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ” ಎಂದು ಸಲಹೆ ನೀಡಿದ್ದಾರೆ.

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಹೆಚ್ಚಳ ಮತ್ತು ಕೊರೋನಾ ರೂಪಾಂತರಿ ಜೆಎನ್.1 ಉಪತಳಿಯ ಮೊದಲ ಪ್ರಕರಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಕೋವಿಡ್ ಪರಿಸ್ಥಿತಿಯ ಮೇಲೆ ನಿರಂತರ ನಿಗಾ ಇರಿಸಲು ಕೇಂದ್ರ ಆರೋಗ್ಯ ಸಚಿವಾಲಯವು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸಲಹೆ ನೀಡಿದೆ.

ಈ ಮಧ್ಯೆ ನಿನ್ನೆ ಕೊಡಗಿನ ಕುಶಾಲ ನಗರದಲ್ಲಿ ಹೇಳಿಕೆ ನೀಡಿದ್ದ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್‌, “60 ವರ್ಷ ಮೇಲ್ಪಟ್ಟವರು, ಹೃದಯ ಸಂಬಂಧಿ ಕಾಯಿಲೆ ಹಾಗೂ ಕೋವಿಡ್ ಲಕ್ಷಣ ಹೊಂದಿರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಗುಂಪು ಸೇರಬಾರದು, ಈ ಬಗ್ಗೆ ಮಾರ್ಗಸೂಚಿಯನ್ನು ಇಲಾಖೆ ಹೊರಡಿಸಲಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...