ಹೈರಿಸ್ಕ್ ರೋಗ ಲಕ್ಷಣ ಇರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Date:

Advertisements

ಕೋವಿಡ್ ಪಾಸಿಟಿವ್ ಇರುವವರ ಸಂಪರ್ಕದಲ್ಲಿದ್ದ ಹೈರಿಸ್ಕ್ ರೋಗಲಕ್ಷಣ ಹೊಂದಿರುವವರಿಗೆ, ಕಡ್ಡಾಯವಾಗಿ ಕೋವಿಡ್ ಟೆಸ್ಟ್ ನಡೆಸಲು ಕ್ಯಾಬಿನೆಟ್ ಉಪ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ವಿಧಾನಸೌಧದಲ್ಲಿ ಇಂದು ಸಚಿವ ಸಂಪುಟ ಉಪ ಸಮಿತಿಯ ಎರಡನೇ ಕೋವಿಡ್ ಸಭೆ ನಡೆಸಲಾಯಿತು. ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ ಮಹದೇವಪ್ಪ, ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರಾದ ಡಾ. ರವಿ, ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, “ದೇಶದಲ್ಲಿಯೇ ಕರ್ನಾಟಕದಲ್ಲಿ ಹೆಚ್ಚು ಕೋವಿಡ್ ಟೆಸ್ಟ್‌ಗಳನ್ನು ನಡೆಸಲಾಗುತ್ತಿದೆ. ಕೋವಿಡ್ ಇಳಿಮುಖ ಕಾಣುವವರೆಗೂ ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್ ಟೆಸ್ಟಿಂಗ್ ಮುಂದುವರಿಸುತ್ತೇವೆ” ಎಂದು ಹೇಳಿದರು.

Advertisements

“ಕೋವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚು ಬರುತ್ತದೆ ಎನ್ನುವ ಕಾರಣಕ್ಕೆ ಟೆಸ್ಟಿಂಗ್ ಕಡಿಮೆ ಮಾಡಿ ಕೋವಿಡ್ ಪಾಸಿಟಿವ್ ಪ್ರಕರಣಗಳನ್ನ ಮುಚ್ಚಿಡುವ ಕೆಲಸವನ್ನು ಸರ್ಕಾರ ಮಾಡುವುದಿಲ್ಲ. ಹೆಚ್ಚಿನ ಸಂಖ್ಯೆಯಲ್ಲಿಯೇ ಟೆಸ್ಟಿಂಗ್ ನಡೆಸಿ, ಅಗತ್ಯ ಚಿಕಿತ್ಸೆ ಕೊಡುವುದು ಮುಖ್ಯ. ಈ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದರು.

“ಪ್ರಸ್ತುತ ಐ.ಸಿ.ಯುನಲ್ಲಿ 19 ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಇವರ ಮೇಲೆ ಹೆಚ್ವಿನ ನಿಗಾ ಇಡಲು ಸೂಚಿಸಲಾಗಿದೆ. ಅಲ್ಲದೇ, ಕೋವಿಡ್ ಪಾಸಿಟಿವ್ ಬಂದವರ ಸಂಪರ್ಕದಲ್ಲಿದ್ದವರಲ್ಲಿ ಹೈ ರಿಸ್ಕ್ ರೋಗಲಕ್ಷಣ ಕಂಡುಬಂದರೆ ಕಡ್ಡಾಯವಾಗಿ ಕೋವಿಡ್ ಟೆಸ್ಟಿಂಗ್ ಮಾಡುವಂತೆ ತಿಳಿಸಲಾಗಿದೆ” ಎಂದು ಆರೋಗ್ಯ ಸಚಿವರು ತಿಳಿಸಿದರು.

ಇದನ್ನು ಓದಿದ್ದೀರಾ? ಮೂರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ: ಗೊಂದಲಗಳಿಗೆ ತೆರೆ ಎಳೆದ ಸುರ್ಜೇವಾಲ

“ಕೋವಿಡ್ ಪಾಸಿಟಿವ್ ಬಂದವರಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಡೆತ್ ಆಡಿಟ್ ಮಾಡಲು ಸೂಚಿಸಲಾಗಿತ್ತು. 26 ಪ್ರಕರಣಗಳಲ್ಲಿ 21 ಜನರ ಡೆತ್ ಆಡಿಟ್ ನಡೆಸಲಾಗಿದ್ದು, ನೈಜವಾಗಿ ಕೋವಿಡ್ ಕಾರಣದಿಂದ 2 ಮಾತ್ರ ಸಾವಿಗಿಡಾಗಿದ್ದಾರೆ. ಉಳಿದವರು ಇತರ ಕಾಯಿಲೆಗಳಿಂದ ಬಳಲುತ್ತಿದ್ದರು ಎಂದು ತಾಂತ್ರಿಕ ಸಲಹಾ ಸಮಿತಿ ತಿಳಿಸಿದೆ. ಆದರೆ ಇವರಿಗೆ ಕೋವಿಡ್ ಪಾಸಿಟಿವ್ ಬಂದಿತ್ತು. ಜನರು ಆತಂಕಕ್ಕೆ ಈಡಾಗುವ ಅಗತ್ಯವಿಲ್ಲ. ಎಲ್ಲ ರೀತಿಯ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿದೆ” ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.‌

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X