ಕೋವಿಡ್‌ | ಟಿವಿಗಳು ಅನಗತ್ಯ ಭಯ ಸೃಷ್ಟಿಸುವುದು ಬೇಡ; ಆತಂಕ ಪಡುವ ಸಂದರ್ಭ ಬಂದಿಲ್ಲ: ಸಿದ್ದರಾಮಯ್ಯ

Date:

ಕೋವಿಡ್‌ ಪರಿಸ್ಥಿತಿಯನ್ನು over play ಮಾಡಬೇಡಿ. ಮಾಧ್ಯಮದವರು, ಟಿವಿ ಚಾನಲ್‌ನವರು ಅನಗತ್ಯ ಪ್ಯಾನಿಕ್ ಸೃಷ್ಟಿಸಬಾರದು. ಆತಂಕ ಪಡಬೇಕಾದ ಸಂದರ್ಭವೇ ಬಂದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕೋವಿಡ್ ಕುರಿತ ಉನ್ನತ ಮಟ್ಟದ ಸಭೆ ಬಳಿಕ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ ಅವರು, “ಕೋವಿಡ್ ಕುರಿತು ಹಿಂದಿನ ಸರ್ಕಾರದಲ್ಲಾದ ತಪ್ಪುಗಳು ಮತ್ತೆ ಮರುಕಳಿಸದಂತೆ ನೋಡಿಕೊಳ್ಳಿ ಎಂದು ಸ್ಪಷ್ಟ ಸೂಚನೆ ನೀಡಿದ್ದೇನೆ. ಆಕ್ಸಿಜನ್, ಬೆಡ್, ವೆಂಟಿಲೇಟರ್, ಔಷಧ ಸೇರಿ ಇನ್ನಿತರೆ ಯಾವುದಕ್ಕೂ ಕೊರತೆ ಆಗದಂತೆ ನೋಡಿಕೊಳ್ಳಲು ಸೂಚಿಸಿದ್ದೇನೆ” ಎಂದರು.

“ಈಗಿನ ಉಪತಳಿ JN.1 (ಒಮಿಕ್ರಾನ್ ಉಪತಳಿ) ಇದು ಅಪಾಯಕಾರಿಯಲ್ಲ. ಈ ಉಪತಳಿ ರಾಜ್ಯದಲ್ಲಿ 92 ಪತ್ತೆಯಾಗಿದೆ. ಬೆಂಗಳೂರಲ್ಲಿ 80 ಪತ್ತೆಯಾಗಿದ್ದು 20 ಮಂದಿ ಮಾತ್ರ ಆಸ್ಪತ್ರೆಯಲ್ಲಿದ್ದಾರೆ. ಉಳಿದವರು ಮನೆಯಲ್ಲೇ ಇದ್ದಾರೆ. 20 ರಲ್ಲಿ 7 ಮಂದಿ ICU ನಲ್ಲಿದ್ದಾರೆ. ಆದರೆ ಇವರಿಗೆ ಇನ್ನಿತರೆ ಆರೋಗ್ಯ ಸಮಸ್ಯೆಗಳಿರುವ ಕಾರಣಕ್ಕೆ ICU ನಲ್ಲಿದ್ದಾರೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ದಿನ‌ 5000 ಟೆಸ್ಟ್‌ಗಳು ನಡೆಯುತ್ತವೆ. ಬೆಂಗಳೂರಲ್ಲಿ ಸಾವಿರ ಪರೀಕ್ಷೆ ನಡೆಯುತ್ತಿದೆ. ಕೋವಿಡ್‌ ನಿರ್ವಹಣೆ ಬಗ್ಗೆ ಕ್ಯಾಬಿನೆಟ್ ಉಪಸಮಿತಿ ರಚಿಸಲಾಗುವುದು. ಇವರು ಸಲಹಾ ಸಮಿತಿ ಜತೆ ಸಂಪರ್ಕದಲ್ಲಿದ್ದು ನಿರಂತರ ನಿಗಾ ಇಡಬೇಕು. ತಾತ್ರಿಕ ಸಲಹಾ ಸಮಿತಿ ಸಲಹೆಗಳನ್ನು ಪೂರ್ತಿಯಾಗಿ ಜಾರಿ ಮಾಡಬೇಕು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂಷಣೆ ಬಿಡಲಿ, ಆತ್ಮಹತ್ಯೆಯಿಂದ ರೈತರನ್ನು ದೂರ ಮಾಡಲಿ

ಗಡಿ ಜಿಲ್ಲೆಗಳಲ್ಲಿ ಹೆಚ್ಚೆಚ್ಚು ಪರೀಕ್ಷೆ

“ಗಡಿ ಜಿಲ್ಲೆಗಳಲ್ಲಿ ಹೆಚ್ಚೆಚ್ಚು ಪರೀಕ್ಷೆ ನಡೆಯಬೇಕು. ಯಾರು ಆತಂಕ ಪಡುವ ಅಗತ್ಯವಿಲ್ಲ. ಎಚ್ಚರಿಕೆಯಿಂದಿದ್ದರೆ ಸಾಕು. ಜನಸಂದಣಿಯಲ್ಲಿ ಮಾಸ್ಕ್ ಧರಿಸಬೇಕು. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸದ್ಯ ರಾಜ್ಯದಲ್ಲಿ 60 ವರ್ಷ ಕೆಳಗಿನವರಿಗೆ ಮಾಸ್ಕ್ ಕಡ್ಡಾಯವಿಲ್ಲ. ಜನಸಂದಣಿಗೆ ಹೋಗುವವರು ಮಾಸ್ಕ್ ಧರಿಸಿದರೆ ಒಳ್ಳೆಯದು” ಎಂದರು.

“ಡೆಡಿಕೇಟೆಡ್ ಆಸ್ಪತ್ರೆಗಳಲ್ಲಿ ಸಕಲ ಸಿದ್ದತೆ ಇರುತ್ತವೆ. ಎಲ್ಲ ಜಿಲ್ಲೆಗಳಲ್ಲೂ ಆಕ್ಸಿಜನ್, ಬೆಡ್, ವೆಂಟಿಲೇಟರ್ ಸೇರಿ ಕೋವಿಡ್ ಸಂಬಂಧಿತ ಎಲ್ಲವನ್ನೂ ವ್ಯವಸ್ಥೆ ಮಾಡಿಕೊಳ್ಳಬೇಕು. ಲಸಿಕೆಗಳನ್ನು ಸಿದ್ದವಿಟ್ಟುಕೊಳ್ಳಲು ಸೂಚಿಸಲಾಗಿದೆ” ಎಂದರು.

“ಕೇರಳದಲ್ಲಿ ಪರೀಕ್ಷೆ ಹೆಚ್ಚು. ಆದ್ದರಿಂದ ಪ್ರಮಾಣ ಕೂಡ ಹೆಚ್ಚಿದೆ. ಇಲ್ಲಿ ಪರೀಕ್ಷೆಗಳು ಹೆಚ್ಚಾದಂತೆ ಪತ್ತೆ ಪ್ರಮಾಣವೂ ಹೆಚ್ಚಾಗಿದೆ. ಸಾಕಷ್ಟು ಹಣ ಇದೆ. ಕೋವಿಡ್ ನಿರ್ವಹಣೆಗೆ ಹಣಕಾಸಿಗೆ ಕೊರತೆ ಇಲ್ಲ.
ಪರಿಸ್ಥಿತಿ ನೋಡಿಕೊಂಡು ಡೆಡಿಕೇಟೆಡ್ ಆಸ್ಪತ್ರೆಗಳನ್ನು ನಿಗದಿ ಮಾಡುತ್ತೇವೆ” ಎಂದು ವಿವರಿಸಿದರು.

ಕೋವಿಡ್‌ 19 ಪರಿಸ್ಥಿತಿ ಕುರಿತ ಉನ್ನತ ಮಟ್ಟದ ಸಭೆಯ ಮುಖ್ಯಾಂಶಗಳು

ಕಳೆದ ಒಂದು ವಾರದ ಅವಧಿಯಲ್ಲಿ ಜಾಗತಿಕವಾಗಿ 51,214 ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ ಪ್ರತಿದಿನ ಸರಾಸರಿ 310 ಪ್ರಕರಣಗಳು ವರದಿಯಾಗುತ್ತಿವೆ. ಕರ್ನಾಟಕದಲ್ಲಿ ಪ್ರಸ್ತುತ 92 Active COVID Cases ವರದಿಯಾಗಿವೆ. ಕೇರಳದಲ್ಲಿ 2041, ತಮಿಳು ನಾಡಿನಲ್ಲಿ 77, ಮಹಾರಾಷ್ಟ್ರದಲ್ಲಿ 35, ಗೋವಾದಲ್ಲಿ 23 ಹಾಗೂ ಗುಜರಾತಿನಲ್ಲಿ 12 Active cases ಇವೆ.

ರಾಜ್ಯದಲ್ಲಿರುವ ಒಟ್ಟು 92 Active COVID Case ಗಳಲ್ಲಿ 80 ಬೆಂಗಳೂರು ನಗರದಲ್ಲಿ ಇದೆ. ಉಳಿದಂತೆ ಮೈಸೂರಿನಲ್ಲಿ 5, ಬಳ್ಳಾರಿಯಲ್ಲಿ 3, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಇವರಲ್ಲಿ 72 ಜನ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ. (Home Isolation) 20 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಳು ಜನರು ಐಸಿಯುನಲ್ಲಿದ್ದು, ಇವರೆಲ್ಲರೂ ಇತರ ಸಮಸ್ಯೆಗಳಿಂದಲೂ ಬಳಲುತ್ತಿದ್ದಾರೆ.

ರಾಜ್ಯದಲ್ಲಿ ಕೋವಿಡ್‌ ಪರೀಕ್ಷಾ ಪ್ರಮಾಣವನ್ನು ದಿನಕ್ಕೆ 5000 ಕ್ಕೆ ಹೆಚ್ಚಿಸಲಾಗಿದೆ. ಇದರಲ್ಲಿ 1500 Rapid Antigen Test ಹಾಗೂ 3500 RTPCR ಪರೀಕ್ಷೆಗಳಾಗಿವೆ. ಬೆಂಗಳೂರು ನಗರದಲ್ಲಿ 1000 ಪರೀಕ್ಷೆಗಳನ್ನು ನಡೆಸಲಾಗುವುದು. ಗಡಿ ಭಾಗಗಳಲ್ಲಿ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗುವುದು.

ಕರ್ನಾಟಕದಲ್ಲಿ ಡಿಸೆಂಬರ್‌ 15 ರಂದು ಒಂದು ಹಾಗೂ ಡಿಸೆಂಬರ್‌ 20 ರಂದು ಎರಡು ಸಾವುಗಳು ಸಂಭವಿಸಿವೆ. ಈ ಮೂರು ಪ್ರಕರಣಗಳಲ್ಲಿ ಎಲ್ಲರೂ ಇತರ ಆರೋಗ್ಯ ಸಮಸ್ಯೆಗಳಿಂದ (Co-Morbidity) ಬಳಲುತ್ತಿದ್ದರು.

ಕೋವಿಡ್‌ 19 ಈಗ Pandemic ಆಗಿ ಉಳಿದಿಲ್ಲ. Endemic ಆಗಿದೆ. ಸರ್ಕಾರ ಸಹ ಎಲ್ಲ ಅಗತ್ಯ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲಿದೆ. ಮೃತರಾದವರು, Co-morbidity ಇರುವವರು, ಒಂದೇ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಪ್ರಕರಣಗಳು ವರದಿಯಾದ ಸಂದರ್ಭದಲ್ಲಿ, ವಿದೇಶ ಪ್ರಯಾಣದ ಹಿನ್ನೆಲೆ ಹೊಂದಿದವರ ಜಿನೋಮ್‌ ಸಿಕ್ವೆನ್ಸಿಂಗ್‌ ಮಾಡಲಾಗುತ್ತಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೇಸಿಗೆಯಲ್ಲಿ ಉದ್ಯಾನವನಗಳನ್ನು ಹಸಿರಾಗಿಡಲು ಸಂಸ್ಕರಿಸಿದ ನೀರುಣಿಸಲು ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯಲು ನೀರಿಲ್ಲದೇ ಜನ ಪರಡಾಡುವಂತಾಗಿದೆ. ಜತೆಗೆ, ಮರಗಿಡಗಳು...

ರಾಜಕೀಯ ಲಾಭಕ್ಕಾಗಿ ಬಿಜೆಪಿಯವರು ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್

"ಬಿಜೆಪಿಯವರು ತಮ್ಮ ರಾಜಕೀಯ ಲಾಭಕ್ಕಾಗಿ ರಾಜ್ಯದ ಘನತೆ ಹಾಳು ಮಾಡುತ್ತಿದ್ದಾರೆ" ಎಂದು...

ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ...

ಸಿಎಎ ರದ್ದಾಗದಿದ್ದರೆ ಬೃಹತ್ ಹೋರಾಟ; ಅಸ್ಸಾಂ ವಿಪಕ್ಷಗಳ ಎಚ್ಚರಿಕೆ

ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಅನುಷ್ಠಾನಗೊಳಿಸದಂತೆ ಅಸ್ಸಾಂನ 16 ಪಕ್ಷಗಳ...