ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಅಭಿಯಾನಕ್ಕೆ ಸಿಪಿಐಎಂ ಬೆಂಬಲ; ವಿಶೇಷ ಸಂಸತ್ ಅಧಿವೇಶನಕ್ಕೆ ಆಗ್ರಹ

Date:

ಕೆಲವು ವಿಚಾರದಲ್ಲಿ ತನ್ನ ‘ವಿರೋಧ’ಗಳ ಹೊರತಾಗಿಯೂ, ಆಪರೇಷನ್ ಸಿಂಧೂರ ಬಳಿಕ ಪಾಕಿಸ್ತಾನದ ಮೇಲೆ ರಾಜತಾಂತ್ರಿಕ ಒತ್ತಡ ಹೇರಲು ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಅಭಿಯಾನ ನಡೆಸುವುದಕ್ಕೆ ಭಾರತೀಯ ಕಮ್ಯೂನಿಸ್ಟ್ ಪಕ್ಷ(ಮಾರ್ಕ್ಸ್‌ವಾದಿ)-ಸಿಪಿಐಎಂ ಬೆಂಬಲ ವ್ಯಕ್ತಪಡಿಸಿದೆ. ಹಾಗೆಯೇ ವಿವಿಧ ಪ್ರಮುಖ ದೇಶಗಳಿಗೆ ಭೇಟಿ ನೀಡಲಿರುವ ಸರ್ವಪಕ್ಷ ನಿಯೋಗದ ಭಾಗವಾಗಲು ನಿರ್ಧರಿಸಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದೆ.

- Advertisement -

ಇದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತ್ರ ಸಭೆ ನಡೆಸುತ್ತಿರುವ ಬಗ್ಗೆ ಸಿಪಿಐಎಂ ಪೊಲಿಟ್ ಬ್ಯೂರೋ ಅಸಮಾಧಾನ ವ್ಯಕ್ತಪಡಿಸಿದೆ. ಗಡಿಯಲ್ಲಿನ ಇತ್ತೀಚಿನ ಬೆಳವಣಿಗೆಗಳ ಕುರಿತು ಚರ್ಚಿಸಲು ವಿಶೇಷ ಸಂಸತ್ತಿನ ಅಧಿವೇಶನ ನಡೆಸಬೇಕು ಎಂಬ ತನ್ನ ಬೇಡಿಕೆಯನ್ನು ಪುನರುಚ್ಚರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಬೆಂಗಳೂರು | ವಿಧಾನಸಭಾ ಉಪಚುನಾವಣೆ; ಪ್ರಜಾಪ್ರಭುತ್ವ ವಿರೋಧಿ, ಕೋಮುವಾದಿ ಬಿಜೆಪಿ-ಜೆಡಿಎಸ್ ಪಕ್ಷಗಳನ್ನು ಸೋಲಿಸಲು ಸಿಪಿಐಎಂ ಕರೆ

“ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ನಂತರದ ಬೆಳವಣಿಗೆಗಳ ಕುರಿತು ಚರ್ಚಿಸಲು ಪ್ರಧಾನಿ ಮತ್ತು ಅವರ ಸರ್ಕಾರ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಲು ನಿರಾಕರಿಸಿದ್ದು ದುರದೃಷ್ಟಕರ. ಸರ್ಕಾರವು ತಕ್ಷಣವೇ ಸಂಸತ್ತಿನ ಅಧಿವೇಶನವನ್ನು ಕರೆಯಬೇಕು. ಜನರಿಗೆ ಮಾಹಿತಿ ನೀಡಬೇಕು. ಸ್ವಷ್ಟೀಕರಣ ಪಡೆಯಲು ಅವಕಾಶ ನೀಡಬೇಕು” ಎಂದು ಸಿಪಿಐಎಂ ಒತ್ತಾಯಿಸಿದೆ.

ಸಿಪಿಐಎಂ

“ಪ್ರಧಾನಿ ಬಿಜೆಪಿ-ಎನ್‌ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯನ್ನು ಕರೆದು ‘ಆಪರೇಷನ್ ಸಿಂಧೂರ’ ಬಗ್ಗೆ ವಿವರಿಸಲು ನಿರ್ಧರಿಸಿದರು. ಇದು ತಾರತಮ್ಯ. ದೇಶಕ್ಕೆ ಸಂಬಂಧಿಸಿದ ಗಂಭೀರ ವಿಚಾರದ ಬಗ್ಗೆ ಮಾಹಿತಿ ನೀಡಲು ಕೇಂದ್ರವು ವಿರೋಧ ಪಕ್ಷದ ಮುಖ್ಯಮಂತ್ರಿಗಳು ಸೇರಿದಂತೆ ದೇಶದ ಎಲ್ಲಾ ಮುಖ್ಯಮಂತ್ರಿಗಳ ಸಭೆಯನ್ನು ನಡೆಸಬೇಕು” ಎಂದು ಆಗ್ರಹಿಸಿದೆ.

“ಸರ್ಕಾರವು ಮೊದಲು ಭಾರತದ ಜನರಿಗೆ ಮಾಹಿತಿ ನೀಡಬೇಕು, ಪಾರದರ್ಶಕವಾಗಿರಬೇಕು.ಆಡಳಿತ ಪಕ್ಷದ ನಾಯಕರು ಮತ್ತು ರಾಜ್ಯ ಸಚಿವರು ಈ ಪರಿಸ್ಥಿತಿಗೆ ಕೋಮು ಬಣ್ಣ ಬಳಿಯುವ ಅಭಿಯಾನ ನಡೆಸುತ್ತಿದ್ದಾರೆ. ಅದನ್ನು ಕೂಡಲೇ ನಿಲ್ಲಿಸಬೇಕು” ಎಂದು ಸಿಪಿಐಎಂ ಒತ್ತಾಯಿಸಿದೆ.

ಇನ್ನು, “ಸರ್ಕಾರವು ರಾಜ್ಯಸಭೆಯಲ್ಲಿ ನಮ್ಮ ಪಕ್ಷದ ನಾಯಕರನ್ನು ಕರೆದು, ತನ್ನ ರಾಜತಾಂತ್ರಿಕ ಸಂಪರ್ಕದ ಭಾಗವಾಗಿ ವಿವಿಧ ದೇಶಗಳಿಗೆ ಕಳುಹಿಸಲು ನಿರ್ಧರಿಸಿರುವ ವಿವಿಧ ನಿಯೋಗಗಳ ಬಗ್ಗೆ ತಿಳಿಸಿದೆ. ನಾವು ಇತರೆ ಯಾವುದೇ ಆಗ್ರಹಗಳನ್ನು ಹೊಂದಿದ್ದರೂ ಕೂಡಾ, ಅದನ್ನು ಪುನರುಚ್ಚರಿಸುತ್ತಲೇ ಈ ನಿಯೋಗ ರಚನೆಗೆ ಬೆಂಬಲ ನೀಡುತ್ತೇವೆ. ವಿಶಾಲ ರಾಷ್ಟ್ರೀಯ ಹಿತಾಸಕ್ತಿಯಿಂದ ಈ ನಿಯೋಗದ ಭಾಗವಾಗಲು ನಾವು ಬಯಸುತ್ತೇವೆ” ಎಂದು ಸಿಪಿಐಎಂ ಪೊಲಿಟ್ ಬ್ಯೂರೋ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...