ಇಂಡಿಯಾ ಒಕ್ಕೂಟ ನಮ್ಮ ಚಿಹ್ನೆ ದುರುಪಯೋಗ ಮಾಡುತ್ತಿದೆ: ಇಸಿಗೆ ಸಿಪಿಎಂ ದೂರು

Date:

ಜಾರ್ಖಂಡ್‌ನಲ್ಲಿ ನಾವು ಇಂಡಿಯಾ ಒಕ್ಕೂಟದ ಮಿತ್ರ ಪಕ್ಷವಾಗಿಲ್ಲ. ಆದರೂ ಕೂಡಾ ಇಂಡಿಯಾ ಒಕ್ಕೂಟವು ಪ್ರಚಾರಕ್ಕಾಗಿ ನಮ್ಮ ಪಕ್ಷದ ಚಿಹ್ನೆಯನ್ನು ಬಳಸುತ್ತಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಬುಧವಾರ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

- Advertisement -

ಈ ಬಗ್ಗೆ ಸಿಪಿಐಎಂ ಜಾರ್ಖಂಡ್ ಮುಖ್ಯ ಚುನಾವಣಾ ಅಧಿಕಾರಿ ಕೆ ರವಿಕುಮಾರ್ ಅವರಿಗೆ ದೂರು ಸಲ್ಲಿಸಿದೆ. “ಸಿಪಿಎಂ ಪಕ್ಷವು ರಾಜ್ಯದಲ್ಲಿ ಇಂಡಿಯಾ ಒಕ್ಕೂಟದ ಭಾಗವಾಗಿಲ್ಲ ಮತ್ತು 81 ಸದಸ್ಯರ ವಿಧಾನಸಭೆಗೆ ನಡೆಯುವ ಚುನಾವಣೆಯಲ್ಲಿ ಸ್ವತಂತ್ರವಾಗಿ ಒಂಬತ್ತು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ...

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ ಹೆಸರು ಆಜಾದ್. ಅವರ ಕನಸು ಸ್ವತಂತ್ರ ಭಾರತ. ಅವರ ಹೋರಾಟ ರಾಷ್ಟ್ರೀಯ ಏಕತೆ. ಅವರ ನಂಬಿಕೆ ಶಿಕ್ಷಣ. ಅವರ ವೈಚಾರಿಕ...

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

“ಜಾರ್ಖಂಡ್‌ನಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳ ನಡುವೆ ಸೀಟು ಹಂಚಿಕೆ ವ್ಯವಸ್ಥೆಯಲ್ಲಿ ಸಿಪಿಎಂ ಅನ್ನು ಸೇರಿಸಲಾಗಿಲ್ಲ. ನಮ್ಮ ಚುನಾವಣಾ ಚಿಹ್ನೆಯಾದ ಸುತ್ತಿಗೆ, ಕುಡುಗೋಲು ಮತ್ತು ನಕ್ಷತ್ರವನ್ನು ಕಾಂಗ್ರೆಸ್ ಮತ್ತು ಜೆಎಂಎಂ ನಮ್ಮ ಒಪ್ಪಿಗೆಯಿಲ್ಲದೆ ತಮ್ಮ ಪ್ರಚಾರದಲ್ಲಿ ಬಳಸುತ್ತಿವೆ ಎಂದು ನಾವು ಎಲ್ಲಾ ಸ್ಥಳಗಳಿಂದ ಮಾಹಿತಿಯನ್ನು ಪಡೆಯುತ್ತಿದ್ದೇವೆ” ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದನ್ನು ಓದಿದ್ದೀರಾ? ಹಾಸನ | ಗೌರಿ ಕೊಲೆ ಹಂತಕರಿಗೆ ಸನ್ಮಾನ ಮಾಡಿರುವುದು ಬಹಿರಂಗ ಪ್ರಚೋದನೆ: ಸಿಪಿಐಎಂ ಧರ್ಮೇಶ್

ಜಾರ್ಖಂಡ್‌ನಲ್ಲಿ ಕಾಂಗ್ರೆಸ್, ಜೆಎಂಎಂ, ಆರ್‌ಜೆಡಿ ಮತ್ತು ಸಿಪಿಐ (ಎಂಎಲ್) ಮಾತ್ರ ಅಧಿಕೃತವಾಗಿ ಇಂಡಿಯಾ ಒಕ್ಕೂಟದ ಭಾಗವಾಗಿದೆ ಎಂದು ಸಿಪಿಎಂ ಜಾರ್ಖಂಡ್ ಕಾರ್ಯದರ್ಶಿ ಪ್ರಕಾಶ್ ವಿಪ್ಲವ್ ಹೇಳಿದ್ದಾರೆ.

“ಇಂಡಿಯಾ ಒಕ್ಕೂಟವು ಸಿಪಿಎಂನ ಚಿಹ್ನೆಯನ್ನು ಬಳಸುವುದರಿಂದ ಮತದಾರರು ಮತ್ತು ಪಕ್ಷದ ಅಭ್ಯರ್ಥಿಗಳಲ್ಲಿ ಗಮನಾರ್ಹ ಗೊಂದಲ ಉಂಟಾಗಿದೆ. ಸುತ್ತಿಗೆ ಮತ್ತು ಕುಡಗೋಲು ಚಿಹ್ನೆಯ ಅನಧಿಕೃತ ಬಳಕೆಯು ಅನಗತ್ಯ ತೊಡಕುಗಳನ್ನು ಸೃಷ್ಟಿಸುತ್ತಿದೆ. ಇದು ಮತದಾರರ ಮೇಲೆ ಪ್ರಭಾವ ಬೀರಬಹುದು” ಎಂದು ವಿಪ್ಲವ್ ಹೇಳಿದ್ದಾರೆ. ಮಧ್ಯಪ್ರವೇಶಿಸಿ ತನ್ನ ಚಿಹ್ನೆಯ ದುರುಪಯೋಗವನ್ನು ನಿಲ್ಲಿಸುವಂತೆ ಸಿಪಿಎಂ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದೆ.

ಇದನ್ನು ಓದಿದ್ದೀರಾ? ಕೇರಳ | ಹೊಸ ರಾಜಕೀಯ ಪಕ್ಷ ಕಟ್ಟಲು ಮುಂದಾದ ಸಿಪಿಐಎಂ ಬಂಡಾಯ ಶಾಸಕ ಪಿ ವಿ ಅನ್ವರ್

ಇಂಡಿಯಾ ಒಕ್ಕೂಟದಲ್ಲಿನ ಸೀಟು ಹಂಚಿಕೆ ಒಪ್ಪಂದದ ಪ್ರಕಾರ, ಜೆಎಂಎಂ 43 ವಿಧಾನಸಭಾ ಸ್ಥಾನಗಳಲ್ಲಿ, ಕಾಂಗ್ರೆಸ್ 30, ಆರ್‌ಜೆಡಿ 6 ಮತ್ತು ಸಿಪಿಐ (ಎಂಎಲ್) ನಾಲ್ಕು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಧನ್ವಾರ್, ಛತ್ರಾಪುರ ಮತ್ತು ವಿಶ್ರಾಮ್‌ಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳ ನಡುವೆ ಸೌಹಾರ್ದ ಸ್ಪರ್ಧೆ ನಡೆಯಲಿದೆ. ಆ ಕ್ಷೇತ್ರಗಳಿಗೆ ಸೀಟು ಹಂಚಿಕೆ ಒಪ್ಪಂದವಾಗಿಲ್ಲ.

ಜಾರ್ಖಂಡ್‌ನಲ್ಲಿ ನವೆಂಬರ್ 13 ಮತ್ತು 20ರಂದು ಎರಡು ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

“ವಾಯುಮಾಲಿನ್ಯದಲ್ಲಿ ನಾವು ‘ವಿಶ್ವಗುರು’ ಆಗುತ್ತಿರುವುದು ಏಕೆ”: ಮೋದಿ ಸರ್ಕಾರದ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ರಾಜ್ಯಗಳಲ್ಲಿ ವಾಯುಮಾಲಿನ್ಯ ಮಿತಿಮೀರಿರುವ ಹಿನ್ನೆಲೆಯಲ್ಲಿ...

ಕೋಮುದ್ವೇಷ | 3 ತಿಂಗಳಲ್ಲಿ 16 ಮುಸ್ಲಿಮರ ಹತ್ಯೆ

2026ರ ಆಗಸ್ಟ್‌ ಮತ್ತು ಅಕ್ಟೋಬರ್‌ ನಡುವಿನ ಮೂರು ತಿಂಗಳ ಅವಧಿಯಲ್ಲಿ ಸರ್ಕಾರಿ...

ಬಂಗಾಳ SIR | ಚು. ಆಯೋಗ ಅಳಿಸಲು ಯತ್ನಿಸುತ್ತಿರುವ ಪ್ರತಿ 10 ಮಂದಿಯಲ್ಲಿ 9 ಮಂದಿ ಮುಸ್ಲಿಮರು!

ಮುಸ್ಲಿಮರು ಗಣನೀಯ ಸಂಖ್ಯೆಯಲ್ಲಿ ವಾಸಿಸುವ ಬಹುತೇಕ ಎಲ್ಲ ಪ್ರದೇಶಗಳಲ್ಲೂ, ಮತದಾರರ ಪಟ್ಟಿಯಿಂದ...

ಎರಡು ದಶಕಗಳ ಪರಿಸರ ಪ್ರೇಮ: ವಲಸೆ ಹಕ್ಕಿಗಳಿಗಾಗಿ ತಮಿಳುನಾಡಿನಲ್ಲಿ ಪಟಾಕಿ ಮುಕ್ತ ದೀಪಾವಳಿ

ದೀಪಾವಳಿಯನ್ನು ದೇಶದ ವಿವಿಧ ಭಾಗಗಳಲ್ಲಿ ವಿಭಿನ್ನವಾಗಿ ಆಚರಿಸಲಾಗುತ್ತದೆ. ಆದರೆ, ವನ್ಯಜೀವಿಗಳು ಮತ್ತು...