ಹರಿಯಾಣದ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಆತ್ಮಹತ್ಯೆ ಬಗ್ಗೆ ನ್ಯಾಯಾಂಗ ತನಿಖೆಗೆ ಸಿಪಿಐಎಂ ಒತ್ತಾಯ

Date:

ಹರಿಯಾಣದ ದಲಿತ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಅವರ ಆತ್ಮಹತ್ಯೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕಮ್ಯುನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ (ಸಿಪಿಐಎಂ) ಒತ್ತಾಯಿಸಿದೆ. ಮೃತ ಅಧಿಕಾರಿಯ ಕುಟುಂಬವನ್ನು ಭೇಟಿಯಾದ ನಂತರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರಧಾನ ಕಾರ್ಯದರ್ಶಿ ಎಂ ಎ ಬೇಬಿ ಪತ್ರ ಬರೆದಿದ್ದಾರೆ. ಸಿಪಿಎಂ ನಿಯೋಗವು ಐಪಿಎಸ್ ಅಧಿಕಾರಿಯ ಕುಟುಂಬ ಸದಸ್ಯರನ್ನು ಭೇಟಿ ಮಾಡಿದೆ.

- Advertisement -

“ನ್ಯಾಯಯುತ ಮತ್ತು ಪಾರದರ್ಶಕ ನ್ಯಾಯಾಂಗ ತನಿಖೆಯು ದೇಶದ ಸಾಂವಿಧಾನಿಕ ಮೌಲ್ಯಗಳಿಗೆ ಬದ್ಧತೆಯನ್ನು ಮತ್ತು ಯಾವುದೇ ರೀತಿಯ ತಾರತಮ್ಯದಿಂದ ತನ್ನ ಅಧಿಕಾರಿಗಳನ್ನು ರಕ್ಷಿಸುವುದನ್ನು ಪುನರುಚ್ಚರಿಸುತ್ತದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇದನ್ನು ಓದಿದ್ದೀರಾ? ಹರಿಯಾಣ | ಮೃತ ಐಪಿಎಸ್‌ ಪೂರಣ್‌ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆ

ಈ ಘಟನೆಯ ಬಗ್ಗೆ ತೀವ್ರ ಕಳವಳ ಮತ್ತು ದುಃಖವನ್ನು ವ್ಯಕ್ತಪಡಿಸಿದ ಬೇಬಿ, “ಇದು ದೇಶಾದ್ಯಂತ ಆಘಾತವನ್ನು ಉಂಟು ಮಾಡಿದೆ. ಪೊಲೀಸ್ ಸೇವೆಯಲ್ಲಿ ಹಿಂದುಳಿದ ಸಮುದಾಯಗಳಿಗೆ ಸೇರಿದ ಅಧಿಕಾರಿಗಳಿಗೆ ಇರುವ ಹೊಣೆಗಾರಿಕೆ ಮತ್ತು ರಕ್ಷಣೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದಿದ್ದಾರೆ.

“ಪೂರಣ್ ಕುಮಾರ್ ಅವರ ಸಾವಿಗೆ ಕಾರಣದ ಬಗ್ಗೆ ತನಿಖೆಗಾಗಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದ ತಂಡವನ್ನು ರಚಿಸಿ ತಕ್ಷಣವೇ ನ್ಯಾಯಾಂಗ ತನಿಖೆಯನ್ನು ನಡೆಸಬೇಕೆಂದು ನಾವು ಒತ್ತಾಯಿಸುತ್ತೇವೆ. ಹಾಗೆಯೇ ಮೃತ ಅಧಿಕಾರಿ ಹೆಸರಿಸಿದ ಎಲ್ಲಾ ಅಧಿಕಾರಿಗಳನ್ನು ನ್ಯಾಯಾಂಗ ವಿಚಾರಣೆ ಮುಗಿಯುವವರೆಗೂ ಅಮಾನತುಗೊಳಿಸಬೇಕೆಂದು ನಾವು ಒತ್ತಾಯಿಸುತ್ತೇವೆ. ತನಿಖೆಯ ಮೇಲೆ ಯಾವುದೇ ರೀತಿಯಲ್ಲಿ ಪ್ರಭಾವ ಬೀರದಂತೆ ಅಥವಾ ಯಾವುದೇ ರಾಜಿ ನಡೆಯದಂತೆ ನೋಡಿಕೊಳ್ಳಲು ಇದು ಅತ್ಯಗತ್ಯ” ಎಂದು ಹೇಳಿದ್ದಾರೆ.

“ಈ ಪ್ರಕರಣವನ್ನು ತುರ್ತು ಮತ್ತು ಗಂಭೀರತೆಯಿಂದ ಪರಿಗಣಿಸಲಾಗುತ್ತದೆ ಎಂದು ನಾವು ನಂಬುತ್ತೇವೆ. ನ್ಯಾಯಯುತ ಮತ್ತು ಪಾರದರ್ಶಕ ನ್ಯಾಯಾಂಗ ತನಿಖೆಯು ದುಃಖಿತ ಕುಟುಂಬಕ್ಕೆ ಸಾಂತ್ವನ ನೀಡುವುದಲ್ಲದೆ, ಸಾಂವಿಧಾನಿಕ ಮೌಲ್ಯಗಳಿಗೆ ದೇಶದ ಬದ್ಧತೆಯನ್ನು ಮತ್ತು ಯಾವುದೇ ರೀತಿಯ ತಾರತಮ್ಯದಿಂದ ಅಧಿಕಾರಿಗಳ ರಕ್ಷಣೆಯನ್ನು ಪುನರುಚ್ಚರಿಸುತ್ತದೆ” ಎಂದೂ ಬೇಬಿ ಬರೆದಿದ್ದಾರೆ.

ಐಪಿಎಸ್ ಅಧಿಕಾರಿಯ ಸಾವಿನ ಬಗ್ಗೆ ರಾಷ್ಟ್ರವ್ಯಾಪಿ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಮತ್ತೊಂದು ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದ್ದು ಘಟನೆಗೆ ಆಘಾತಕಾರಿ ತಿರುವು ನೀಡಿದೆ. ರೋಹ್ಟಕ್‌ನ ಸೈಬರ್ ಸೆಲ್‌ನಲ್ಲಿ ಸಹಾಯಕ ಸಬ್-ಇನ್‌ಸ್ಪೆಕ್ಟರ್ ಆಗಿ ನೇಮಕಗೊಂಡಿದ್ದ ಸಂದೀಪ್ ಕುಮಾರ್, ಮೃತ ಅಧಿಕಾರಿ ಪೂರಣ್ ಕುಮಾರ್ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು ಆತ್ಮಹತ್ಯೆ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...