- ಜೆಡಿಎಸ್ ಜೊತೆ ಮೈತ್ರಿ ಸಾಧ್ಯತೆ ಬಿಚ್ಚಿಟ್ಟ ಬಿಜೆಪಿ ನಾಯಕ
- ರಾಜ್ಯ ರಾಜಕಾರಣದಲ್ಲಿ ಮುಂದೆ ಮಹತ್ವದ ಬದಲಾವಣೆ
ಮುಂಬರುವ ಲೋಕಸಭಾ ಚುನಾವಣೆ ಎದುರಿಸಲು ರಾಜ್ಯ ಬಿಜೆಪಿ, ಪ್ರಾದೇಶಿಕ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಮುನ್ನಡೆಯಲು ನಿರ್ಧರಿಸಿದೆ ಎನ್ನುವ ಹೇಳಿಕೆಗೆ ಈಗ ಪುಷ್ಟಿ ದೊರೆತಿದೆ.
ರಾಮನಗರದಲ್ಲಿ ಪಕ್ಷದ ನಾಯಕ, ಮಾಜಿ ಸಚಿವ ಸಿ ಪಿ ಯೋಗೇಶ್ವರ್ ನೀಡಿರುವ ಹೇಳಿಕೆ ಹೊಂದಾಣಿಕೆ ರಾಜಕಾರಣ ಕುರಿತಾದ ಚರ್ಚೆಯನ್ನು ಇನ್ನಷ್ಟು ಗಟ್ಟಿಗೊಳಿಸಿದೆ.
ರಾಜ್ಯ ರಾಜಕಾರಣದಲ್ಲಿ ಮುಂದೆ ಮಹತ್ವದ ಬದಲಾವಣೆಯಾಗಬಹುದು. ಜೆಡಿಎಸ್ ಜೊತೆ ಹೊಂದಾಣಿಕೆಯೂ ಆಗಬಹುದು. ಬದಲಾವಣೆ ಜೊತೆಯಲ್ಲೇ ನಾವು ಚುನಾವಣೆ ಎದುರಿಸುತ್ತೇವೆ. ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ ಎಂದವರು ಹೇಳಿದರು.
ಲೋಕಸಭಾ ಚುನಾವಣೆಗೆ ತಯಾರಿ ನಡೆಯುತ್ತಿದೆ. ಈ ಬಾರಿಯೂ ಅತಿ ಹೆಚ್ಚು ಸಂಸದರನ್ನ ಲೋಕಸಭೆಗೆ ಕಳುಹಿಸಬೇಕು ಅದಕ್ಕಾಗಿ ಸೂಕ್ತ ತಯಾರಿ ಮಾಡಿಕೊಳ್ಳುತ್ತಿದ್ದೇವೆ ಎಂದು ಯೋಗೇಶ್ವರ್ ತಿಳಿಸಿದರು.
ಈ ಸುದ್ದಿ ಓದಿದ್ದೀರಾ? :ಸರ್ಕಾರ ಯಾವುದೇ ಇದ್ದರೂ ಕಮಿಷನ್ ದಂಧೆ ವಿರುದ್ಧ ಹೋರಾಟ ನಿರಂತರ: ಡಿ ಕೆಂಪಣ್ಣ
ಇನ್ನು ಚುನಾವಣಾ ಸ್ಪರ್ಧೆ ವಿಚಾರವಾಗಿ ಅಭಿಪ್ರಾಯ ಹಂಚಿಕೊಂಡ ಯೋಗೇಶ್ವರ್ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಹೇಳಿದರೆ ಸ್ಪರ್ಧಿಸುತ್ತೇನೆ. ಟಿಕೆಟ್ ನೀಡುವುದರ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.
ಸೋಲು ಕಟ್ಟಿಟ್ಟ ಬುತ್ತಿ ಎಂಬುದರ ಸಂಕೇತ.