ಯುವನಿಧಿ ಯೋಜನೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸೂಚನೆ

Date:

Advertisements

ರಾಜ್ಯ ಸರ್ಕಾರದ ಮಹಾತ್ವಕಾಂಕ್ಷೆಯ ಯುವನಿಧಿ ಯೋಜನೆಗೆ ಅರ್ಹ ಫಲಾನುಭವಿಗಳ ಹೆಸರುಗಳನ್ನು ಸೇವಾ ಸಿಂಧು ಪೋರ್ಟಲ್‌ ಮೂಲಕ ನೋಂದಾಯಿಸಲು ಅಗತ್ಯಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ ಹಾಗೂ ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ವಿಕಾಸ ಸೌಧದಲ್ಲಿ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ವೇಳೆ ಮಾತನಾಡಿದ ಸಚಿವರು, ಕೆಲವು ಜಿಲ್ಲೆಗಳಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಯುವನಿಧಿ ಯೋಜನೆಗೆ ನೋಂದಣಿ ಆಗದಿರುವುದಕ್ಕೆ ಅಧಿಕಾರಿಗಳಿಂದ ವಿವರಣೆ ಹಾಗೂ ರಾಜ್ಯದ ಎಲ್ಲ ಜಿಲ್ಲೆಗಳ ಅಂಕಿ‌- ಸಂಖ್ಯೆಯನ್ನು ಮಾಹಿತಿ ಪಡೆದು, ಅಧಿಕಾರಿಗಳು ಹೆಚ್ಚು ಸಕ್ರಿಯರಾಗುವಂತೆ ತಿಳಿಸಿದರು.

“ಪದವಿ ಕಾಲೇಜು, ಡಿಪ್ಲೊಮಾ, ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜುಗಳ ಮುಖ್ಯಸ್ಥರು, ಪ್ರಾಂಶುಪಾಲರ
ಜೊತೆಗೆ ಕೂಡಲೇ ಸಭೆ ನಡೆಸಿ, ಗರಿಷ್ಠ ಪ್ರಮಾಣದಲ್ಲಿ ನೋಂದಣಿ ಮಾಡಿಸಬೇಕು. ಸರ್ಕಾರದ ಈ ಯೋಜನೆ ಪರಿಣಾಮಕಾರಿ ಅನುಷ್ಠಾನವಾಗಲು ಶಕ್ತಿ ಮೀರಿ ಪ್ರಯತ್ನ ಮಾಡಬೇಕು” ಎಂದು ಸಚಿವ ಪಾಟೀಲ್ ಹೇಳಿದರು.

Advertisements

“ನಗರಸಭೆ, ಪುರಸಭೆ, ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್, ಗ್ರಾಮ ಪಂಚಾಯತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಮೂಲಕ ವ್ಯಾಪಕ ಪ್ರಚಾರ ನಡೆಸಬೇಕು. ಯೋಜನೆಯಿಂದ ಸಿಗುವ ಲಾಭದ ಬಗ್ಗೆ ಮನವರಿಕೆ ಮಾಡಿ” ಎಂದು ಅಧಿಕಾರಿಗಳಿಗೆ ಸಚಿವರು ಸಲಹೆ ನೀಡಿದರು.

ಯುವನಿಧಿ ಯೋಜನೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಲು ಸಾಮಾಜಿಕ ಜಾಲತಾಣಗಳನ್ನು ಅಧಿಕಾರಿಗಳು ಹೆಚ್ಚು ಬಳಸಿಕೊಳ್ಳಬೇಕು. ವಾಟ್ಸಪ್, ಫೇಸ್‌ಬುಕ್, ಇನ್ಸ್‌ಟಾಗ್ರಾಂ, ಮೆಸೆಂಜರ್, ಟ್ವಿಟ್ಟರ್ ಸೇರಿದಂತೆ ಅನೇಕ ರೀತಿಯ ವೇದಿಕೆಗಳನ್ನು ಬಳಸಿಕೊಳ್ಳಬೇಕು ಎಂದು ಸೂಚಿಸಿದರು.

ಪ್ರತಿಯೊಂದು ಕಾಲೇಜು ಮುಂಭಾಗ ಬೃಹತ್ ಪ್ರಮಾಣದ ಕಟ್ ಔಟ್, ಹೋರ್ಡಿಂಗ್ ಸೇರಿದಂತೆ ಗ್ರಾಮ ಪಂಚಾಯತಿಗಳು ಮತ್ತು ಪ್ರತಿ ಗ್ರಾಮದಲ್ಲೂ ಊರಿನ ಮುಂಭಾಗದಲ್ಲಿ ಫ್ಲೆಕ್ಸ್ ಆಳವಡಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕಾಯಂ ಸೇವೆ | ಕೊಟ್ಟ ಮಾತಿನಂತೆ ನಡೆದುಕೊಳ್ಳಿ: ಸರ್ಕಾರಕ್ಕೆ ಅತಿಥಿ ಉಪನ್ಯಾಸಕರ ಒಕ್ಕೊರಲ ಆಗ್ರಹ

ಅಭ್ಯರ್ಥಿಗಳ ನೋಂದಣಿ ವೇಳೆ ನಕಲಿ ಪ್ರಮಾಣಪತ್ರ ಸಲ್ಲಿಕೆ ಆಗದಂತೆ ನೋಡಿಕೊಳ್ಳಬೇಕು. ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯಗಳು ಡಿಪ್ಲೊಮಾ, ಇಂಜಿನಿಯರಿಂಗ್, ವೈದ್ಯಕೀಯ ಕಾಲೇಜಿನ ಮಾನ್ಯತೆಯನ್ನು ಕಡ್ಡಾಯವಾಗಿ ಪರಿಶೀಲನೆ ನಡೆಸಬೇಕು. ಒಂದು ವೇಳೆ ಪ್ರಮಾದ ಕಂಡು ಬಂದರೆ, ತಪ್ಪಿತಸ್ಥರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸುವುದಾಗಿ ಸಚಿವ ಶರಣ್ ಪ್ರಕಾಶ್ ಪಾಟೀಲ್ ಎಚ್ಚರಿಕೆ ನೀಡಿದರು.

ಈ ವೇಳೆ, ಕೌಶಲ್ಯಭಿವೃದ್ದಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್,ಆಯುಕ್ತೆ ರಾಗಪ್ರಿಯ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X