ರಾಜ್ಯಗಳ ನಡುವೆ ಘರ್ಷಣೆ ಹುಟ್ಟುಹಾಕುವುದು ಮೋದಿಯ ‘ಕೀಳು ರಾಜಕಾರಣ’: ಸ್ಟಾಲಿನ್

Date:

ಪ್ರಧಾನಿ ಮೋದಿ ಅವರು ರಾಜ್ಯಗಳ ನಡುವೆ ಘರ್ಷಣೆ ಹುಟ್ಟುಹಾಕುವ ‘ಕೀಳುಮಟ್ಟದ ತಂತ್ರ’ವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಯಾಕೆಂದರೆ, ಅವರ ‘ಕೋಮು ದ್ವೇಷದ ಪ್ರಚಾರ’ ಫಲಕೊಟ್ಟಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹೇಳಿದ್ದಾರೆ.

- Advertisement -

ತಮಿಳುನಾಡು ಸೇರಿದಂತೆ ದಕ್ಷಿಣದ ರಾಜ್ಯಗಳ ನಾಯಕರು ಉತ್ತರ ಪ್ರದೇಶದ ಜನರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ ಎಂಬುದು ಮೋದಿಯವರ ‘ಕಾಲ್ಪನಿಕ ಕತೆ ಮತ್ತು ಸುಳ್ಳು ಮೂಟೆ’ ಎಂದು ಸ್ಟಾಲಿನ್ ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇತ್ತೀಚೆಗೆ, ಚುನಾವಣಾ ಪ್ರಚಾರದಲ್ಲಿ ಮಾತನಾಡಿದ್ದ ಮೋದಿ, “ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ನ ದಕ್ಷಿಣದ ಮಿತ್ರಪಕ್ಷಗಳು ಉತ್ತರ ಪ್ರದೇಶ ಮತ್ತು ಸನಾತನ ಧರ್ಮವನ್ನು ಅವಮಾನಿಸಿವೆ” ಎಂದು ಆರೋಪಿಸಿದ್ದರು.

ತಮಿಳುನಾಡಿನಲ್ಲಿ ಬಿಹಾರದಿಂದ ಬಂದ ವಲಸೆ ಕಾರ್ಮಿಕರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಎಂದು ಮನೀಷ್ ಕಶ್ಯಪ್ ಎಂಬಾತ ತನ್ನ ಯೂಟ್ಯೂಬ್‌ನಲ್ಲಿ ನಕಲಿ ವಿಡಿಯೋವನ್ನು ಪ್ರಕಟಿಸಿದ್ದ. ಆತನನ್ನು ಪೊಲೀಸರು ಬಂಧಿಸಿದ್ದರು. ಕಳೆದ ತಿಂಗಳು ಜೈಲಿನಿಂದ ಬಿಡುಗಡೆಯಾದ ಆತ ಬಿಜೆಪಿ ಸೇರಿದ್ದಾನೆ. ಇಂತಹ ಸುಳ್ಳುಗಳನ್ನು ಹರಡುವುದು ಮತ್ತು ಹರಡುವವರನ್ನು ಬಿಜೆಪಿ ಪ್ರೋತ್ಸಾಹಿಸುತ್ತದೆ ಎಂದು ಮುಖ್ಯಮಂತ್ರಿ ಸ್ಟಾಲಿನ್ ಟೀಕಿಸಿದ್ದಾರೆ.

“ಬಿಜೆಪಿಯ ವಿಭಜನೆಯ ಕನಸುಗಳು ಎಂದಿಗೂ ನನಸಾಗುವುದಿಲ್ಲ! ಸುಳ್ಳು ನಿರೂಪಣೆ ಮತ್ತು ದ್ವೇಷವನ್ನು ಕಿತ್ತೊಗೆಯಲಾಗುತ್ತದೆ. ಭಾರತ ಗೆಲ್ಲುತ್ತದೆ,” ಸ್ಟಾಲಿನ್ ಹೇಳಿದ್ದಾರೆ.

“ದ್ವೇಷದ ಪ್ರಚಾರ ನಿಷ್ಪ್ರಯೋಜಕವಾಗಿದೆ. ಹೀಗಾಗಿ, ಮೋದಿ ಹತಾಶರಾಗಿದ್ದಾರೆ. ಹತ್ತು ವರ್ಷಗಳ ಅಧಿಕಾರಾವಧಿಯಲ್ಲಿ ಜನರಿಗೆ ಹೇಳಲು ಯಾವುದೇ ಸಾಧನೆಗಳಿಲ್ಲ” ಎಂದು ಅವರು ವ್ಯಂಗ್ಯವಾಡಿದ್ದಾರೆ.

“ದ್ವೇಷ ಭಾಷಣ ವಿಫಲವಾದ್ದರಿಂದ, ಪ್ರಧಾನಿ ಮೋದಿ ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಲ್ಲಿ ಜಾರಿಗೆ ತಂದಿರುವ ಕಲ್ಯಾಣ ಯೋಜನೆಗಳನ್ನು ಟೀಕಿಸುತ್ತಿದ್ದಾರೆ. ರಾಜ್ಯಗಳ ನಡುವೆ ಸಂಘರ್ಷ ಸೃಷ್ಟಿಸಲು ಯತ್ನಿಸುತ್ತಿದ್ದಾರೆ. ತಾವು ಯಾವಾಗಲೂ ಬಡ ಜನರ ವಿರೋಧಿ ಎಂಬುದನ್ನು ತೋರಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

‘ಇಂಡಿಯಾ’ ಮೈತ್ರಿಕೂಟ ಗೆಲುವಿನತ್ತ ಓಡುತ್ತಿದೆ. ಮೋದಿ ಅವರು ಸುಳ್ಳು ಮತ್ತು ದ್ವೇಷದ ಪ್ರಚಾರ ಮಾಡುತ್ತಿದ್ದಾರೆ. ಜನರು ಚುನಾವಣಾ ಆಯೋಗದ ಮೌನವನ್ನು ಆಘಾತ ಮತ್ತು ದುಃಖದಿಂದ ಗಮನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...