ನರ್ಸಿಂಗ್‌ ಕಾಲೇಜು ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸಲು ಸಚಿವ ಶರಣ್ ಪ್ರಕಾಶ್‌ ಪಾಟೀಲ್‌ ಸೂಚನೆ

Date:

Advertisements

ರಾಜ್ಯದಲ್ಲಿ ನರ್ಸಿಂಗ್‌ ಕಾಲೇಜುಗಳ ಶುಲ್ಕ ನಿಯಂತ್ರಣಕ್ಕೆ ಪ್ರಾಧಿಕಾರ ರಚಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸೋಮವಾರ ಬೆಂಗಳೂರಿನ ವಿಕಾಸಸೌಧದಲ್ಲಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಅವರು, “ರಾಜ್ಯದ ನರ್ಸಿಂಗ್‌ ಕಾಲೇಜುಗಳಲ್ಲಿ ಅಧಿಕ ಶುಲ್ಕ ವಸೂಲು ಮಾಡುತ್ತಿರುವ ಬಗ್ಗೆ ನಮ್ಮ ಕಚೇರಿಗೆ ಹಲವಾರು ದೂರುಗಳು ಸಲ್ಲಿಕೆಯಾಗಿವೆ. ಇದರಿಂದ ವಿದ್ಯಾರ್ಥಿಗಳ ಹಣಕಾಸಿನ ಹೊರೆಯನ್ನು ಹೊರಬೇಕಾಗಿದೆ. ಹೀಗಾಗಿ ಈ ಕ್ರಮ ಕೈಗೊಳ್ಳುತ್ತಿದ್ದೇವೆ” ಎಂದರು.

“ವೈದ್ಯಕೀಯ ಶಿಕ್ಷಣ ಇಲಾಖೆಯ ಜಂಟಿ ಕಾರ್ಯದರ್ಶಿಗಳ ನೇತೃತ್ವದಲ್ಲಿ 5 ಜನ ಸದಸ್ಯರುಗಳ “ಶುಲ್ಕ ನಿಯಂತ್ರಣ ಪ್ರಾಧಿಕಾರವನ್ನು” ರಚಿಸಲಾಗುವುದು. ನರ್ಸಿಂಗ್‌ ಕಾಲೇಜುಗಳ ಶುಲ್ಕಗಳನ್ನ ಪರಿಶೀಲಿಸುವ ಕಾರ್ಯವನ್ನು ಈ ಪ್ರಾಧಿಕಾರಕ್ಕೆ ವಹಿಸಲಾಗಿದೆ. ಸರಕಾರ ನಿಗದಿಪಡಿಸಿರುವ ಶುಲ್ಕಕ್ಕೂ ಹೆಚ್ಚು ಶುಲ್ಕವನ್ನು ವಸೂಲು ಮಾಡುತ್ತಿರುವ ಸಂಸ್ಥೆಗಳ ಎಸೆನ್ಸಿಯಲ್‌ ಸರ್ಟಿಫಿಕೇಟ್‌ ಹಾಗೂ ಫೀಸಿಬಲಿಟಿ ಸರ್ಟಿಫಿಕೇಟ್‌ನ್ನು ರದ್ದುಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ” ಎಂದು ಹೇಳಿದರು.

Advertisements

“ಪ್ರಸ್ತುತ ಸರಕಾರಿ ಕೋಟಾದ ಅಡಿಯಲ್ಲಿ ಭರ್ತಿಯಾಗುವ ವಿದ್ಯಾರ್ಥಿಗಳಿಗೆ 10,000. ಮ್ಯಾನೇಜ್‌ ಮೆಂಟ್‌ ಕೋಟಾದ ಅಡಿಯಲ್ಲಿ ಭರ್ತಿಯಾಗುವ ವಿದ್ಯಾರ್ಥಿಗಳಿಗೆ 1 ಲಕ್ಷ ಮತ್ತು ನಾನ್‌-ಕರ್ನಾಟಕ ವಿದ್ಯಾರ್ಥಿಗಳಿಗೆ 1.40 ಲಕ್ಷ ರೂಪಾಯಿಗಳ ಶುಲ್ಕವನ್ನು ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ 611 ನರ್ಸಿಂಗ್‌ ಕಾಲೇಜುಗಳಿದ್ದು 35,000 ಸೀಟ್‌ ಗಳು ಲಭ್ಯವಿವೆ. ಅಲ್ಲದೇ, ಈ ಶುಲ್ಕವನ್ನು ಶೇಕಡಾ 20 ರಷ್ಟು ಹೆಚ್ಚಿಸುವಂತೆ ನರ್ಸಿಂಗ್‌ ಕಾಲೇಜುಗಳ ಆಡಳಿತ ಮಂಡಳಿಯ ಪ್ರತಿನೀಧಿಗಳು ಇತ್ತೀಚೆಗೆ ಮಾಡಿದ ಮನವಿಯನ್ನು ತಿರಸ್ಕರಿಸಲಾಗಿದೆ” ಎಂದರು.

“ಈ ಸಮಿತಿಯು ಬಿಎಸ್ಸಿ, ನರ್ಸಿಂಗ್‌ ಹಾಗೂ ಜನರಲ್‌ ನರ್ಸಿಂಗ್‌ ಮತ್ತು ಮಿಡ್‌ವೈಪ್ರೀ (ಜಿಎನ್‌ಎಂ) ಡಿಪ್ಲಮೋ ಪ್ರೋಗ್ರಾಂ ಗಳ ಶುಲ್ಕದ ಬಗ್ಗೆಯೂ ನಿಗಾವಹಿಸಲಿದೆ. ಹಾಗೆಯೇ, ಜಿಲ್ಲಾಧಿಕಾರಿಗಳ ಸಭೆಯನ್ನು ಆಯೋಜಿಸಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿರುವ ಜಿಎನ್‌ಎಂ ನರ್ಸಿಂಗ್‌ ಕಾಲೇಜುಗಳಲ್ಲಿರುವ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಬೇಕು. ಒಂದು ತಿಂಗಳ ಒಳಗಾಗಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಲು ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿಗಳಾದ ಮೊಹಮ್ಮದ್‌ ಮೋಶಿನ್‌ ಅವರಿಗೆ ಸೂಚಿಸಲಾಗಿದೆ” ಎಂದು ಹೇಳಿದರು.

“ಬಿಎಸ್‌ಸಿ ನರ್ಸಿಂಗ್‌ ಕಾಲೇಜುಗಳಿಗೆ ಸಂಬಂಧಿಸಿದಂತೆ ಒಂದು ಪರಿಶೀಲನಾ ತಂಡವನ್ನು ರಚಿಸಿ ವರದಿ ನೀಡಬೇಕು” ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕರಾದ ಡಾ. ಬಿ.ಎಲ್‌ ಸುಜಾತಾ ಅವರಿಗೆ ಸೂಚನೆ ನೀಡಿದರು.

“ನರ್ಸಿಂಗ್‌ ಕಾಲೇಜುಗಳಲ್ಲಿ ಅಗತ್ಯ ಸೌಲಭ್ಯಗಳು, ಭೋಧಕ ಮತ್ತು ಭೋಧಕೇತರ ಸಿಬ್ಬಂದಿಗಳು, ಲ್ಯಾಬೋರೋಟರಿಗಳು, ಗ್ರಂಥಾಲಯಗಳು ಹಾಗೂ ಹೈಜೀನ್‌ ಸ್ಟಾಂರ್ಡ್‌ಡ್‌ ಇಲ್ಲದೇ ಇರುವ ಬಗ್ಗೆ ಹಲವು ದೂರುಗಳು ನಮ್ಮ ಕಚೇರಿಗೆ ಸಲ್ಲಿಕೆಯಾಗಿವೆ. ಹೆಚ್ಚು ಶುಲ್ಕವನ್ನು ತಗೆದುಕೊಳ್ಳುವುದರ ಹೊರತಾಗಿಯೂ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಸಂಸ್ಥೆಗಳು ವಿಫಲವಾಗಿವೆ. ಅಗತ್ಯ ಸೌಲಭ್ಯಗಳನ್ನು ಹೊಂದಿರದೇ ಇರುವ ನರ್ಸಿಂಗ್‌ ಕಾಲೇಜುಗಳ ಅನುಮತಿಯನ್ನ ಹಿಂದಕ್ಕೆ ಪಡೆಯಲಾಗುವುದು” ಎಂದು ಸಚಿವರು ಎಚ್ಚರಿಕೆ ನೀಡಿದರು.

ಒಂದು ಕಟ್ಟಡ ಒಂದು ಸಂಸ್ಥೆ ನಿಯಮ

“ನರ್ಸಿಂಗ್‌ ಕಾಲೇಜುಗಳನ್ನು ನಡೆಸಲು ಅನುಮತಿ ಪಡೆದಿರುವ ಕಟ್ಟಡಗಳಲ್ಲಿ ನರ್ಸಿಂಗ್‌ ಕೋರ್ಸುಗಳನ್ನು ಮಾತ್ರ ನಡೆಸಬೇಕು. ಬೇರೆ ಯಾವುದೇ ಕೋರ್ಸುಗಳನ್ನು ನಡೆಸುತ್ತಿದ್ದರೆ ಅಂತಹ ಕಾಲೇಜುಗಳ ಅನುಮತಿಯನ್ನು ಹಿಂಪಡೆಯಬೇಕು” ಎಂದು ಸೂಚಿಸಿದರು.

ಸಭೆಯಲ್ಲಿ ರಾಜೀವ್‌ ಗಾಂಧಿ ಯೂನಿರ್ಸಿಟಿ ಆಫ್‌ ಹೆಲ್ತ ಸೈನ್ಸ್‌ಸ್‌ ನ ಉಪ-ಕುಲಪತಿಗಳಾದ ಡಾ ರಮೇಶ್‌, ರಿಜಿಸ್ಟ್ರಾರ್‌ ಪಿ.ಆರ್‌ ಶಿವಪ್ರಸಾದ್‌, ಜಂಟಿ ಕಾರ್ಯದರ್ಶಿಗಳಾದ ವೆಂಕಟೇಶ್‌ ಮೂರ್ತಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X