ಕಾಂಗ್ರೆಸ್ ಶಾಸಕ ಪ್ರದೀಪ್‌ ಈಶ್ವರ್‌ ಹೆಸರಲ್ಲಿ ನಕಲಿ ರಾಜೀನಾಮೆ ಪತ್ರ ಸೃಷ್ಟಿ

Date:

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್‌ ಒಂದು ಮತದ ಮುನ್ನಡೆ ಸಾಧಿಸಿದರು ಕೂಡ ನಾನು ರಾಜೀನಾಮೆ ಕೊಡುತ್ತೇನೆ ಎಂದಿದ್ದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌ ಹೆಸರಲ್ಲಿ ‌ಸೃಷ್ಟಿಸಿರುವ ನಕಲಿ ರಾಜೀನಾಮೆ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

- Advertisement -

ಶಾಸಕ ಪ್ರದೀಪ್‌ ಈಶ್ವರ್‌ ಅವರ ಆಪ್ತ ಸಹಾಯಕರೊಬ್ಬರು ಈ ಕುರಿತು ಸ್ಪಷ್ಟನೆ ನೀಡಿದ್ದು, “ಶಾಸಕ ಪ್ರದೀಪ್‌ ಈಶ್ವರ್‌ ಹೆಸರಿನಲ್ಲಿ ಹರಿದಾಡುತ್ತಿರುವ ರಾಜೀನಾಮೆ ಪತ್ರ ನಕಲಿ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಸುಧಾಕರ್‌ ಒಂದು ಮತದ ಮುನ್ನಡೆ ಸಾಧಿಸಿದರು ಕೂಡ ನಾನು ರಾಜೀನಾಮೆ ಕೊಡುತ್ತೇನೆ ಎಂದು ಶಾಸಕ ಪ್ರದೀಪ್‌ ಈಶ್ವರ್ ಚುನಾವಣೆಗೂ ಮುನ್ನ ಹೇಳಿದ್ದರು. ಲೋಕಸಭಾ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಮಾಜಿ ಸಚಿವ ಕೆ.ಸುಧಾಕರ್ ಕಾಂಗ್ರೆಸ್‌ ಅಭ್ಯರ್ಥಿ ಎಂ.ಎಸ್.ರಕ್ಷಾರಾಮಯ್ಯ ವಿರುದ್ದ 1,62,099 ಮತಗಳ ಗೆಲುವು ಸಾಧಿಸಿದ್ದಾರೆ.

ಸುಳ್ಳು ಪತ್ರದಲ್ಲೇನಿದೆ?

“ಸುಧಾಕರ್ ಅವರು ಸುಮಾರು 20 ಸಾವಿರ ಮತಗಳನ್ನು ನನ್ನ ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಂಡಿರುವುದರಿಂದ ನಾನು ಹಿಂದೆ ಆಡಿದ ಮಾತಿಗೆ ಬದ್ಧನಾಗಿ ಸ್ವಇಚ್ಛೆಯಿಂದ ನನ್ನ ವಿಧಾನಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಬಾಲ್ಯದಿಂದಲೇ ಪುಣ್ಯ ಕೋಟಿ ಕಥೆಯನ್ನು ಆದರ್ಶವಾಗಿರಿಸಿಕೊಂಡು, “ಕೊಟ್ಟ ಮಾತು- ಇಟ್ಟ ಹೆಜ್ಜೆ ತಪ್ಪಬಾರದು” ಅನ್ನೋ ಮಾತನ್ನು ಜೀವನದುದ್ದಕ್ಕೂ ಪಾಲಿಸುತ್ತಾ ಬಂದವನು ನಾನು. ನಾನು ಕೆಲ ದಿನಗಳ ಹಿಂದೆ ಮಾಜಿ ಸಚಿವ ಡಾ.ಕೆ ಸುಧಾಕರ್ ಅವರು ಲೋಕಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಒಂದು ಮತವನ್ನು ಲೀಡ್ ತೆಗೆದುಕೊಂಡರೆ ನಾನು ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಸಾರ್ವಜನಿಕವಾಗಿ ಹೇಳಿರುತ್ತೇನೆ. ನನ್ನ ಮಾತಿಗೆ ನಾನು ಬದ್ಧನಾಗಿ ನಡೆದುಕೊಳ್ಳುತ್ತಿದ್ದೇನೆ” ಎಂದು ಸಭಾಪತಿ ಯು ಟಿ ಖಾದರ್ ಅವರಿಗೆ ಬರೆದಂತೆ ನಕಲಿ ಪತ್ರ ಸೃಷ್ಟಿಸಲಾಗಿದೆ.

ನಕಲಿ ಪತ್ರ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...