ಬಿಜೆಪಿಯಲ್ಲಿ ಅನಾಥವಾದ ಬಾಂಬೆ ಟೀಮ್‌ | ಕಾಂಗ್ರೆಸ್‌ ಟೀಕೆ

Date:

Advertisements
  • ಬಿಜೆಪಿ ಆಂತರಿಕ ಚರ್ಚೆಗೆ ಕಾರಣವಾದ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಹೇಳಿಕೆ
  • ‘ವಲಸಿಗರಿಂದಲೇ ಬಿಜೆಪಿಗೆ ಸೋಲಾಗಿದೆ’ ಎಂದು ಹೇಳಿಕೆ ನೀಡಿದ್ದ ಕೆಎಸ್‌ ಈಶ್ವರಪ್ಪ

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಆಪರೇಷನ್‌ ಕಮಲವೇ ಕಾರಣ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ನೀಡಿದ್ದ ಹೇಳಿಕೆ ಈಗ ಬಿಜೆಪಿಯ ಆಂತರಿಕ ವಲಯದಲ್ಲಿ ಬಾರೀ ಚರ್ಚೆಗೆ ಕಾರಣವಾಗಿದೆ. ಈ ಕುರಿತು ಕಾಂಗ್ರೆಸ್‌ ಕೂಡ ವ್ಯಂಗ್ಯವಾಡಿದೆ.

“ಬಿಜೆಪಿಯಲ್ಲಿ ಶಿಸ್ತು ಹೋಗಿದೆ. ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬೀರಿದೆ. ಕಾಂಗ್ರೆಸ್ ನಾಯಕರನ್ನು ಕರೆದುಕೊಂಡು ಬಂದಿದ್ದಕ್ಕೆ ನಾವು ಈಗ ಅನುಭವಿಸುತ್ತಿದ್ದೇವೆ” ಎಂದು ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಹೇಳಿಕೆ ನೀಡಿದ್ದರು. ಆ ಮೂಲಕ ಬಿಜೆಪಿ ಸೋಲಿಗೆ ಆಪರೇಷನ್ ಕಮಲವೇ ಕಾರಣ ಎಂಬುದನ್ನು ಪರೋಕ್ಷವಾಗಿ ಹೇಳಿದ್ದರು.

ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್, “ಬಾಂಬೆ ಟೀಮ್ ಈಗ ಬಿಜೆಪಿಯಲ್ಲಿ ಅನಾಥರ ಟೀಮ್ ಆಗಿದೆ. ‘ವಲಸಿಗ / ಮೂಲ’ ಎಂಬ ಒಳಬೇಗುದಿಗೆ ಈಶ್ವರಪ್ಪ ತುಪ್ಪ ಸುರಿದಿದ್ದಾರೆ. ವಲಸೆ ಬಂದವರಿಂದಲೇ ಶಿಸ್ತು ಮಾಯವಾಗಿದೆ ಎಂಬ ಹೇಳಿಕೆಯನ್ನು ರಾಜ್ಯ ಬಿಜೆಪಿ ನಾಯಕರು ಒಪ್ಪಿಕೊಳ್ಳುತ್ತೀರಾ ಅಥವಾ ಈಶ್ವರಪ್ಪರನ್ನೇ ಬಾಯಿ ಮುಚ್ಚಿಸುತ್ತೀರಾ? ನಾಯಕನಿಲ್ಲದ ಬಿಜೆಪಿ, ನಾವಿಕನಿಲ್ಲದ ಹಡಗಿನಂತಾಗಿ ಮುಳುಗಿದೆ. ನೆಲ ಕಚ್ಚುವುದೊಂದೇ ಬಾಕಿ” ಎಂದು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ/ಬಿಜೆಪಿ ಎಂಬ ಹ್ಯಾಷ್‌ಟ್ಯಾಗ್‌ ಬಳಸಿದೆ.

Advertisements

“ಬಿಜೆಪಿಯಲ್ಲಿ ಈಗ ಸೋಲಿನ ಆತ್ಮಾವಲೋಕನದ ಹೆಸರಲ್ಲಿ ಸಂತೋಷ ಕೂಟ ಮತ್ತು ಬಿಎಸ್‌ವೈ ಕೂಟದ ನಡುವೆ ಒಬ್ಬರನ್ನೊಬ್ಬರು ಸೋಲಿಸುವ ಅವಲೋಕನ ನಡೆಯುತ್ತಿದೆ. ಈ ಸೋಲಿನ ಅವಲೋಕನಾ ಸಭೆಗಳಿಗೆ ಜೋಶಿ, ಸಂತೋಷ್ ಅವರುಗಳು ಬಾಗವಹಿಸದೆ, ತಮ್ಮ ಶಿಷ್ಯ ಪಡೆಯನ್ನು ಮುಂದೆ ಬಿಟ್ಟಿರುವುದೇಕೆ? ಹೀನಾಯ ಸೋಲಿಗೆ ಅವರಿಬ್ಬರೇ ಕಾರಣರಲ್ಲವೇ, ಅವರೇ ಇಲ್ಲದಿದ್ದರೆ ಹೇಗೆ?” ಎಂದು ಕಾಂಗ್ರೆಸ್‌ ಕುಟುಕಿದೆ.

ಕಾಂಗ್ರೆಸ್‌ ಟ್ವೀಟ್‌

ಹೊರಗಿನವರು ಒಳಗಿನವರು ಎಂಬ ಭೇದವಿಲ್ಲ: ಸ್ಪಷ್ಟನೆ

ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಧಾನ ಪರಿಷತ್ ಬಿಜೆಪಿ ಸದಸ್ಯ ಎನ್​ ರವಿಕುಮಾರ್, “ಕೆ ಎಸ್ ಈಶ್ವರಪ್ಪ ಅವರು ಯಾವ ಹಿನ್ನೆಲೆಯಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಕಾಂಗ್ರೆಸ್​​ನಿಂದ ಬಂದವರಿಂದಲೇ ನಾವು ಅಧಿಕಾರ ನಡೆಸಿದ್ದು. ಪಕ್ಷಕ್ಕೆ ಬಂದ ಬಹಳಷ್ಟು ವಲಸಿಗರು ಗೆದ್ದಿದ್ದಾರೆ. ಲೋಕಸಭೆ ಚುನಾವಣೆಯನ್ನು ಎಲ್ಲರೂ ಒಟ್ಟಾಗಿ ಎದುರಿಸುತ್ತೇವೆ. ಹೊರಗಿನವರು, ಒಳಗಿನವರು ಎಂಬ ಭೇದ ಇಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಲೆ ಏರಿಕೆಗೆ ಕಡಿವಾಣ ಹಾಕದಿದ್ದರೆ, ನಾರಿಶಕ್ತಿ ಆಕ್ರೋಶಕ್ಕೆ ಕಾಂಗ್ರೆಸ್‌ ನಿರ್ನಾಮ; ಎಚ್‌ಡಿಕೆ ಕಿಡಿ

ಎಲ್ಲವನ್ನೂ ಬಂದವರ ತಲೆಗೆ ಕಟ್ಟುವುದು ಬೇಡ: ಸಿಟಿ ರವಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಪ್ರತಿಕ್ರಿಯಿಸಿದ್ದು, “ನಾನು ಇದರ ಬಗ್ಗೆ ಸಾರ್ವಜನಿಕ ಚರ್ಚೆಗೆ ಹೋಗುವುದಿಲ್ಲ. ನಾನು ಅಂದು ದೆಹಲಿಯಲ್ಲಿ ಕೇವಲ ಅರ್ಕಾವತಿಗೆ ಸಂಬಂಧಿಸಿದಂತೆ ಮಾತ್ರ ಹೇಳಿದ್ದೆ. ಅರ್ಕಾವತಿ ವಿಷಯದಲ್ಲಿ ನಾವು ಬಿಗಿ ನಿಲುವು ತೆಗೆದುಕೊಂಡಿದ್ದರೆ ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಅಂತ ನಾನು ದೆಹಲಿಯಲ್ಲಿ ಹೇಳಿದ್ದೆ. ಹೀಗಾಗಿ ಎಲ್ಲವನ್ನೂ ಬಂದವರ ತಲೆ ಮೇಲೆ ಕಟ್ಟಲು ಇಷ್ಟ ಪಡುವುದಿಲ್ಲ. ಯಾರು ಸರಿ ಅಂತಲೂ ನಾವು ಹೇಳುವುದಿಲ್ಲ. ಆದರೆ ಪಕ್ಷದ ವೇದಿಕೆಯಲ್ಲಿ ಏನೇ ಇದ್ದರೂ ಮಾತಾಡುತ್ತೇನೆ. ನಮ್ಮಿಂದ ಏನೂ ತಪ್ಪು ಆಗಿಲ್ಲ ಅನ್ನೋದು ಬೇಡ, ಕೆಲವು ತಪ್ಪಾಗಳಾಗಿವೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X