- ಎಡಿಟ್ ಮಾಡಿದ್ದ ವಿಡಿಯೋ ಹಂಚಿಕೊಂಡಿದ್ದ ಸಿ ಟಿ ರವಿ, ಅಶ್ವಥ್ ನಾರಾಯಣ್ ಸಿಎಂ ಟಾಂಗ್,
- ಯಡಿಯೂರಪ್ಪ ಹೇಳಿಕೆಯನ್ನು ಉಲ್ಲೇಖಿಸಿದ್ದನ್ನು ಮಾತ್ರ ಕಟ್ ಮಾಡಿ ಹಂಚಿಕೊಂಡ ಬಿಜೆಪಿಗರು
ಬೆಳಗಾವಿಯಲ್ಲಿ ಡಿ.15ರಂದು ಮುಕ್ತಾಯಗೊಂಡ ಚಳಿಗಾಲದ ಅಧಿವೇಶನದಲ್ಲಿ ಸಿಎಂ ಸಿದ್ದರಾಮಯ್ಯನವರು ಸಾಲಮನ್ನಾ ವಿಚಾರವಾಗಿ ಮಾಜಿ ಸಿಎಂ ಯಡಿಯೂರಪ್ಪನವರು ನೀಡಿದ್ದ ಹಿಂದಿನ ಹೇಳಿಕೆಯನ್ನು ನೀಡಿದ್ದರು. ಬಿಜೆಪಿ ಮುಖಂಡ ಸಿ ಟಿ ರವಿ, ಅಶ್ವಥ್ ನಾರಾಯಣ್ ಅವರು ಇದರ ಅರ್ಧ ಕಟ್ ಮಾಡಿರುವ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ.
ಇದರ ವಿರುದ್ಧ ಕಿಡಿಕಾರಿರುವ ಸಿಎಂ ಸಿದ್ದರಾಮಯ್ಯ, “ಸಿ ಟಿ ರವಿ, ಅಶ್ವಥ್ ನಾರಾಯಣ್ ಅವರು ಫೇಕ್ ನ್ಯೂಸ್ ಪೆಡ್ಲರ್‌ಗಳು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತನ್ನ ಹೇಳಿಕೆಯ ಸಂಪೂರ್ಣ ವಿಡಿಯೋವನ್ನು ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, “ಮಾಜಿ ಶಾಸಕರಾದ ಸಿಟಿ ರವಿ ಮತ್ತವರ ಬಿಜೆಪಿ ಪಕ್ಷ ಇಂಥಾ ಅಗ್ಗದ ಚೇಷ್ಠೆಗಳನ್ನು ಮಾಡಿದ್ದರ ಫಲವೇ ಇಂದು ಜನ ನಿಮ್ಮನ್ನು ಮನೆಯಲ್ಲಿ ಮತ್ತು ಪಕ್ಷವನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ. ಆದರೂ ನಿಮಗೆ ಬುದ್ದಿ ಬಂದಂತೆ ಕಾಣುತ್ತಿಲ್ಲ” ಎಂದು ಸಿಎಂ ಜರೆದಿದ್ದಾರೆ.
ಗೌರವಾನ್ವಿತ ಮಾಜಿ ಶಾಸಕರಾದ @CTRavi_BJP ಅವರೇ, ನೀವು ಮತ್ತು ನಿಮ್ಮ ಪಕ್ಷ ಇಂಥಾ ಅಗ್ಗದ ಚೇಷ್ಠೆಗಳನ್ನು ಮಾಡಿದ್ದರ ಫಲವೇ ಇಂದು ಜನ ನಿಮ್ಮನ್ನು ಮನೆಯಲ್ಲಿ ಮತ್ತು ಪಕ್ಷವನ್ನು ವಿರೋಧ ಪಕ್ಷದ ಸ್ಥಾನದಲ್ಲಿ ಕೂರಿಸಿದ್ದಾರೆ. ಒಬ್ಬ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಪರದಾಡಬೇಕಾದ ದುಸ್ಥಿತಿಯಲ್ಲಿ ನಿಮ್ಮ ಪಕ್ಷ ಇದೆ. ಆದರೂ ನಿಮಗೆ ಬುದ್ದಿ… pic.twitter.com/UyTr98k5ja
— Siddaramaiah (@siddaramaiah) December 17, 2023
“ನಾವು ನುಡಿದಂತೆ ನಡೆಯುವವರು, ಹಿಂದೆ 2013 – 18ರ ಐದು ವರ್ಷಗಳ ಅವಧಿಯಲ್ಲಿ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು, ಇದರ ಜೊತೆಗೆ ಸಾಲ ಮನ್ನಾ, ಇಂದಿರಾ ಕ್ಯಾಂಟೀನ್ ಸೇರಿದಂತೆ 30ಕ್ಕೂ ಅಧಿಕ ಕಾರ್ಯಕ್ರಮಗಳನ್ನು ಭರವಸೆ ನೀಡಿದ ಹೊರತಾಗಿಯೂ ಜಾರಿಗೆ ತಂದು ಬದ್ಧತೆ ಪ್ರದರ್ಶಿಸಿದ್ದೆವು. 2018ರಲ್ಲಿ ಜನತೆಗೆ ನೀಡಿದ್ದ ಶೇ.90 ಭರವಸೆಗಳನ್ನು ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಈಡೇರಿಸದೆ ಜನ ದ್ರೋಹ ಎಸಗಿತ್ತು” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೆಲಸವಿಲ್ಲದ ಬಡಗಿ ಏನೋ ಮಾಡಿದ ಅನ್ನೋ ಹಾಗೆ ಈ OT ಮಂಗ WhatsApp ನಲ್ಲಿ ಬಂದ edited video ಹಾಕಿ ತನ್ನ ಮಾನ ಮೂರು ಕಾಸಿಗೆ ಹರಾಜು ಮಾಡಿಕೊಳ್ತಾ ಇದಾನೆ 😅pic.twitter.com/VaWP6XHKi6 https://t.co/UlbJNWfrL7
— 👑Che_ಕೃಷ್ಣ🇮🇳💛❤️ (@ChekrishnaCk) December 17, 2023
“ನಮ್ಮ ಪಕ್ಷದ ನಾಯಕರಾದ ಉಗ್ರಪ್ಪನವರು 2009ರಲ್ಲಿ ಸಾಲ ಮನ್ನಾ ಮಾಡುವಂತೆ ಸದನದಲ್ಲಿ ಒತ್ತಾಯಿಸಿದ್ದಾಗ ಅಂದಿನ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಏನು ಉತ್ತರ ಕೊಟ್ಟಿದ್ದರು ಎಂಬುದನ್ನು ನೆನಪು ಮಾಡಿಕೊಳ್ಳಿ. ರೈತರ ಸಾಲ ಮನ್ನಾ ಮಾಡಲು ನಾವೇನು ನೋಟು ಪ್ರಿಟಿಂಗ್ ಮೆಷಿನ್ ಇಟ್ಟಿದ್ದೇವೆಯೇ? ಎಂದು ಅವರು ಹೇಳಿಲ್ಲವೇ? ಈಗ ಮೊನ್ನೆ ವಿಧಾನಸಭೆಯಲ್ಲಿ ನಾನು ಹೇಳಿದ ವೀಡಿಯೋವನ್ನು ತಪ್ಪು ಅರ್ಥ ಬರುವಂತೆ ನಿಮಗೆ ಬೇಕಾದಷ್ಟೆ ಕಟ್ ಮಾಡಿ ಹಾಕಿ ವಿಕೃತ ಸಂತೋಷ ಪಡುತ್ತಿದ್ದೀರಿ. ಆದರೆ, ಅಶ್ವಥ್ ನಾರಾಯಣ್ ಅವರು ಕೂಡ ಇದೇ ರೀತಿ ವೀಡಿಯೋ ಶೇರ್ ಮಾಡಿದ್ದು ನೋಡಿ ಆಶ್ಚರ್ಯವಾಗುತ್ತಿದೆ. ಹಾಲಿ ಶಾಸಕರಾಗಿರುವವರು ಸದನದಲ್ಲಿ ಕೂತು ಅಭಿವೃದ್ಧಿ ಕಾರ್ಯಗಳ ಬಗೆಗಿನ ಚರ್ಚೆಯಲ್ಲಿ ಪಾಲ್ಗೊಳ್ಳಬೇಕಿತ್ತು, ಆದರೆ ಅವರ ಗಮನವೆಲ್ಲ ವಿರೋಧ ಪಕ್ಷದ ನಾಯಕನ ಕುರ್ಚಿಯ ಮೇಲೆ ಇದೆಯೆಂದು ಕಾಣುತ್ತದೆ. ನೀವು ಶೇರ್ ಮಾಡಿರುವ ತಿರುಚಿದ ವಿಡಿಯೋಗಳನ್ನು ನಂಬುವಷ್ಟು ರಾಜ್ಯದ ಜನ ಮೂರ್ಖರಲ್ಲ” ಎಂದು ಬಿಜೆಪಿ ಮುಖಂಡರ ವಿರುದ್ಧ ಮುಖ್ಯಮಂತ್ರಿ ಹರಿಹಾಯ್ದಿದ್ದಾರೆ.
ಮತ್ತೆ ಅದೇನೋ “ನುಡಿದಂತೆ ನಡೆದಿದ್ದೇವೆ” ಅಂತ ಉದ್ದುದ್ದ ಡೈಲಾಗ್ ಹೊಡಿತಿರಲ್ಲ ಅದೇನು ಕತೆ? 🙄🙄 pic.twitter.com/pT3bYUAiSP
— ಶಕುಂತಲ ನಟರಾಜ್🪷Shakunthala (@ShakunthalaHS) December 16, 2023
“ಬಿಜೆಪಿ ನಾಯಕರಿಗೆ ಮಾನ ಮರ್ಯಾದೆ ಬಗ್ಗೆ ಕನಿಷ್ಠ ಕಾಳಜಿ ಇದ್ದರೆ, ನೀವು ಶೇರ್ ಮಾಡಿರುವ ವಿಡಿಯೋ ಡಿಲೀಟ್ ಮಾಡಿ, ಸಾರ್ವಜನಿಕವಾಗಿ ಕ್ಷಮೆ ಕೇಳಬೇಕೆಂದು ಆಗ್ರಹಿಸುತ್ತೇನೆ. ಬಿಜೆಪಿ ನಾಯಕರ ಇಂತಹ ನಡವಳಿಕೆಗಳು ಬಿಜೆಪಿ ಎಂದರೆ ‘ಬೊಗಳೆ ಜನತಾ ಪಾರ್ಟಿ’ ಎಂಬ ಕುಖ್ಯಾತಿಯನ್ನು ದೃಢೀಕರಿಸುವಂತಿದೆ. ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಪ್ರಸಾರವನ್ನೇ ನಂಬಿ ರಾಜಕಾರಣ ಮಾಡುವ ಬಿಜೆಪಿಯವರಿಗೆ ನನ್ನ ವಚನ ಬದ್ಧತೆಯನ್ನು ಪ್ರಶ್ನಿಸುವ ನೈತಿಕತೆಯೇ ಇಲ್ಲ. ನರೇಂದ್ರ ಮೋದಿಯವರು, ಮೌಲ್ಯಾಧಾರಿತ ರಾಜಕಾರಣ ಮತ್ತು ಸತ್ಯದ ಪರವಾಗಿದ್ದರೆ ಈ ಕೂಡಲೇ “ಫೇಕ್ ನ್ಯೂಸ್ ಪೆಡ್ಲರ್” ಗಳಾದ ಸಿಟಿ ರವಿ ಹಾಗೂ ಮತ್ತು ಅಶ್ವತ್ ನಾರಾಯಣ್ ಅವರನ್ನು ಪಕ್ಷದಿಂದ ಆಚೆಗಟ್ಟಲಿ” ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.