ಸಿ ಟಿ ರವಿ ರಾಜ್ಯಾಧ್ಯಕ್ಷ, ಯತ್ನಾಳ್‌ ವಿಪಕ್ಷ ನಾಯಕ ಎಂದು ಸುಳಿವು ನೀಡಿದ ಎಚ್‌ ಡಿ ದೇವೇಗೌಡ

Date:

ಚುನಾವಣೆ ಮುಗಿದು ಸರ್ಕಾರ ರಚನೆ ಆಗಿ ವಿಧಾನಮಂಡಲ ಅಧಿವೇಶನ ಮುಗಿದರೂ ಬಿಜೆಪಿ ಇನ್ನು ವಿರೋಧ ಪಕ್ಷದ ನಾಯಕನ ಆಯ್ಕೆ ವಿಚಾರದಲ್ಲಿ ಅಂತಿಮ ತೀರ್ಮಾನಕ್ಕೆ ಬಂದಿಲ್ಲ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಾರಾಗುತ್ತಾರೆ ಎನ್ನುವ ಬಗ್ಗೆ ಇನ್ನೂ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಹೀಗಿರುವಾಗ ಜೆಡಿಎಸ್‌ ವರಿಷ್ಠ ಎಚ್‌ ಡಿ ದೇವೇಗೌಡರು ಮಹತ್ವದ ಸುಳಿವು ನೀಡಿದ್ದಾರೆ.

ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಅವರು, ಬಿಜೆಪಿ ರಾಜ್ಯಾಧ್ಯಕ್ಷ ಸಿ ಟಿ ರವಿ, ವಿರೋಧ ಪಕ್ಷದ ನಾಯಕ ಯತ್ನಾಳ್ ಎಂಬುದು ಈಗಾಗಲೇ ಒಂದು ಹಂತದ ಚರ್ಚೆ ಆಗಿದೆ. ಅವರ ಪಕ್ಷದಲ್ಲಿ ಏನು ನಡೆಯುತ್ತಿದೆ ಎಂಬುದರ ಬಗ್ಗೆ ನಾವು ಗಮನಹರಿಸುವುದಿಲ್ಲ. ಅದು ಅವರಿಗೆ ಸೇರಿದ ವಿಚಾರ ನಮಗೆ ಯಾಕೆ ಬೇಕು” ಎಂದು ಹೇಳಿದರು.

ಸದನದಲ್ಲಿ ಬಿಜೆಪಿ, ಜೆಡಿಎಸ್ ಜಂಟಿ ಹೋರಾಟದ ಬಗ್ಗೆ ಪ್ರತಿಕ್ರಿಯಿಸಿದ ಅವರು, ರಾಜ್ಯ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್ ಎಂದು ಬಹುತೇಕ ತೀರ್ಮಾನ ಆಗಿದೆ. ಹೀಗಾಗಿ ಬಿಜೆಪಿ ಜೊತೆ ನಮ್ಮ ಜಂಟಿ ಹೋರಾಟ ಹೇಗೆ ಆಗುತ್ತದೆ ಎಂದು ಪ್ರಶ್ನಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಜೆಡಿಎಸ್‌ ಅಳಿಸಿಹಾಕಲು ಯಾರಿಂದಲೂ ಸಾಧ್ಯವಿಲ್ಲ: ಎಚ್‌ ಡಿ ದೇವೇಗೌಡ ತಿರುಗೇಟು

ರಾಜ್ಯದಲ್ಲಿ ಅಧಿಕೃತ ವಿರೋಧ ಪಕ್ಷ ಬಿಜೆಪಿಯೇ ಆಗಿದೆ. ನಮ್ಮದು ಅನಧಿಕೃತ ವಿಪಕ್ಷ. ಕುಮಾರಸ್ವಾಮಿ ಅವರು ಬಿಜೆಪಿ ಜೊತೆ ಹೋಗಿಲ್ಲ. ವಿರೋಧಿ ವಿಚಾರ ಬಂದಾಗ ಹೋರಾಟ ನಡೆಯುತ್ತದೆ. ಕಾಂಗ್ರೆಸ್ ಇದ್ದಾಗಲೂ ನಡೆದಿದೆ, ಬಿಜೆಪಿ ಇದ್ದಾಗಲೂ ನಡೆಯುತ್ತಿದೆ. ಕಾಂಗ್ರೆಸ್ ವಿಪಕ್ಷ ಇದ್ದಾಗಲೂ ಒಟ್ಟಿಗೆ ವಿರೋಧ ಮಾಡಿದ್ದೇವೆ. ಇದರಲ್ಲಿ ಹೊಂದಾಣಿಕೆ ಎನ್ನುವ ವಿಚಾರ ಬಳಸುವುದು ಬೇಡ ಎಂದು ಸ್ಪಷ್ಟನೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಷ್ಟ್ರೀಯತೆ, ದೇಶಭಕ್ತಿ ಬಗ್ಗೆ ಬಿಜೆಪಿ ನಮಗೆ ಹೇಳಿಕೊಡಬೇಕಿಲ್ಲ: ಸಚಿವ ಎಂ ಬಿ ಪಾಟೀಲ್‌

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಮತ್ತು ದೇಶ ವಿಭಜನೆಯನ್ನು ತಡೆಯಲು ಶಕ್ತಿ ಮೀರಿ...

ಬಿಎಂಟಿಸಿ | 2,500 ಕಂಡಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಖಾಲಿ ಇರುವ ಸುಮಾರು 2,500...

ಬೆಂಗಳೂರು | ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕ ಹಾಕಲು ಬುಧವಾರವೇ ಕೊನೆ ದಿನ

ಫೆ.28ರೊಳಗೆ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ವಾಣಿಜ್ಯ ಮಳಿಗೆಗಳ ಮುಂದೆ...

ಬೆಂಗಳೂರು ಪೂರ್ವ | ಆರು ತಿಂಗಳಲ್ಲಿ 46 ‘ವ್ಹೀಲಿಂಗ್ ಮಾಡಿದ’ ಪ್ರಕರಣ ದಾಖಲು

ಬೆಂಗಳೂರಿನ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 2023 ರಿಂದ 2024ರ...