ಅಮುಲ್ ವಿವಾದ | ಸಿ ಟಿ ರವಿಗೆ ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ : ಕಾಂಗ್ರೆಸ್ ಪ್ರಶ್ನೆ

Date:

  • ಮಹಾರಾಷ್ಟ್ರದ ಕುರಿತು ಮಾತನಾಡುವಂತೆ ಕಾಂಗ್ರೆಸ್ ಆಗ್ರಹ
  • ಅಮುಲ್‌ನ ವ್ಯಾಪಾರ ವಿಸ್ತರಣೆ ಸಮರ್ಥಿಸಿಕೊಂಡಿದ್ದ ರವಿ

ಸಿ ಟಿ ರವಿ ಅವರೇ ನಿಮಗೆ ಕನ್ನಡದ ಮೇಲೆ, ಕನ್ನಡಿಗರ ಮೇಲೆ ಯಾಕಿಷ್ಟು ದ್ವೇಷ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಗುಜರಾತ್ ಮೂಲದ ಅಮುಲ್ ಕಂಪನಿ ರಾಜ್ಯದಲ್ಲಿ ತನ್ನ ವ್ಯಾಪಾರ ವಿಸ್ತರಿಸುತ್ತಿದೆ. ಈ ಕುರಿತು ಟ್ವೀಟ್ ಮಾಡಿದ್ದ ಬಿಜೆಪಿ ನಾಯಕ ಸಿ ಟಿ ರವಿ ಸಮರ್ಥನೆ ಮಾಡಿಕೊಂಡಿದ್ದರು. ಅಮುಲ್ ವಿರೋಧಿಸುವವರನ್ನು ‘ಗುಲಾಮರು’ ಎಂದು ಸಹ ಕರೆದಿದ್ದರು.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, “ನಂದಿನಿಯನ್ನು ಅಮೂಲ್‌ನಲ್ಲಿ ವಿಲೀನ ಮಾಡುತ್ತೇವೆ ಎಂದರೂ ಸಮರ್ಥನೆ. ಮೊಸರಿಗೆ ದಹಿ ಎಂದರೂ ಸಮರ್ಥನೆ, ನಂದಿನಿಯನ್ನು ಮುಳುಗಿಸುವ ಷಡ್ಯಂತ್ರ ನಡೆದರೂ ಸಮರ್ಥನೆ,
ಹಿಂದಿ ಹೇರಿಕೆಗೂ ಸಮರ್ಥನೆ” ಎಂದು ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಅಮುಲ್‌ ಮಾರಾಟಕ್ಕೆ ಮುಂದಾದರೆ ಕನ್ನಡಿಗರು ದಂಗೆ ಏಳುತ್ತಾರೆ: ನಾರಾಯಣಗೌಡ ಎಚ್ಚರಿಕೆ

“ಸಿ ಟಿ ರವಿ ಅವರೇ, ಮಹಾರಾಷ್ಟ್ರ ಕರ್ನಾಟಕದ ನೆಲವನ್ನು ಕಬಳಿಸುವ ಸಂಚಿನ ಬಗ್ಗೆ ಏಕೆ ಮೌನ? ಅದನ್ನೂ ಸಮರ್ಥಿಸಿಕೊಳ್ಳಿ” ಎಂದು ವ್ಯಂಗ್ಯವಾಡಿದ್ದಾರೆ.

“ಕನ್ನಡಿಗರು ತಮ್ಮ ಹಕ್ಕುಗಳಿಗಾಗಿ, ತಮ್ಮ ಭಾಷೆಯ ಉಳಿವಿಗಾಗಿ, ತಾವು ಕಟ್ಟಿ ಬೆಳೆಸಿದ ಸಂಸ್ಥೆಗಳಿಗಾಗಿ ಹೋರಾಡಿದಾಗೆಲ್ಲ ಅಣಕಿಸುವ, ಟೀಕಿಸುವ ಸಿ.ಟಿ ರವಿಯವರೇ, ನಿಮಗೆ ಕನ್ನಡದ ಮೇಲೆ, ಕನ್ನಡಿಗರ ಮೇಲೆ, ಕರ್ನಾಟಕದ ಮೇಲೆ ಯಾಕಿಷ್ಟು ದ್ವೇಷ, ತಾತ್ಸಾರ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಮುಂದುವರೆದ ಕಾಂಗ್ರೆಸ್, “ಸಿ ಟಿ ರವಿ ಅಂದರೆ, ಕನ್ನಡಿಗರ ಟೀಕೆ ರವಿ! ಕನ್ನಡಕ್ಕೆ ಕಂಟಕ ರವಿ!” ಎಂದಿದೆ.

ಸಿ ಟಿ ರವಿ ಟ್ವೀಟ್

“ಇಟಲಿಯನ್ನರು ದೇಶವನ್ನು ಆಳಿದರೆ ಗುಲಾಮರಿಗೆ ಯಾವ ತೊಂದರೆಯೂ ಇಲ್ಲ. ಆದರೆ, ಭಾರತದ್ದೆ ಆದ ಅಮುಲ್ ಇತರೆ ಕಂಪನಿಗಳಂತೆ ಕರ್ನಾಟಕದಲ್ಲಿ ಮಾರಾಟ ಮಾಡಿದರೆ ಇವರಿಗೆ ಸಮಸ್ಯೆ ಎನಿಸುತ್ತದೆ. ಇದೆಂತ ಮುಟ್ಟಾಳರ ಗುಂಪೋ” ಎಂದು ಟ್ವೀಟ್ ಮಾಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುರೋಹಿತ ಕೂಡಾ ಸಿಎಎ ಅರ್ಹತಾ ಪ್ರಮಾಣಪತ್ರ ನೀಡಬಹುದೆಂದ ಸರ್ಕಾರಿ ಸಹಾಯವಾಣಿ!

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿ ಭಾರತದ ಪೌರತ್ವ ಪಡೆಯುವವರಿಗೆ ಸ್ಥಳೀಯ...

ಮಮತಾ ಕುರಿತು ಅವಹೇಳನ; ಬಿಜೆಪಿ ಸಂಸದ ದಿಲೀಪ್ ಘೋಷ್ ವಿರುದ್ಧ ಎಫ್‌ಐಆರ್

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತು ಅವಹೇಳನಾಕಾರಿ ಹೇಳಿಕೆ ನೀಡಿದ್ದ...

ಕಾಂಗ್ರೆಸ್ ಬ್ಯಾಂಕ್ ಖಾತೆ ನಿರ್ಬಂಧ ಉಲ್ಲೇಖ; ಕೇಜ್ರಿವಾಲ್ ಬಂಧನದ ಬಗ್ಗೆ ಮತ್ತೆ ಹೇಳಿಕೆ ನೀಡಿದ ಅಮೆರಿಕಾ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಅಮೆರಿಕಾ ಹೇಳಿಕೆ ನೀಡಿದ...