ಸಿ ಟಿ ರವಿಗೆ ಅನ್ಯಾಯವಾಗಿದೆ, ಅವರಿಗೆ ಒಳ್ಳೆಯ ಅವಕಾಶ ಸಿಗುತ್ತೆ: ಯಡಿಯೂರಪ್ಪ

Date:

ನಮ್ಮ ಸಿ ಟಿ ರವಿ ಅವರಿಗೆ ಅನ್ಯಾಯ ಆಗಿರುವುದನ್ನು ಒಪ್ಪಿಕೊಳ್ಳುವೆ. ಬರುವ ದಿನಗಳಲ್ಲಿ ಅವರಿಗೆ ವಿಧಾನಸಭೆ ಅಥವಾ ವಿಧಾನ ಪರಿಷತ್ತಿನಲ್ಲಿ ಅವಕಾಶ ಕಲ್ಪಿಸಿ, ಅನ್ಯಾಯ ಸರಿಪಡಿಸಲಾಗುವುದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದರು.

- Advertisement -

ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಗುರುವಾರ ಮತನಾಡಿದ ಅವರು, “ವಿಧಾನಸಭೆಯಲ್ಲಿ ಗುಡುಗಬೇಕಿದ್ದವರು ಈಗ ಹೊರಗಿದ್ದಾರೆ. ಮುಂದಿನ ದಿನಗಳಲ್ಲಿ ಅವರಿಗೆ ಸೂಕ್ತ ಅವಕಾಶ ಸಿಗಲೇಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದಕ್ಕೂ ಮುನ್ನ ಮಾತನಾಡಿದ ಬಿಜೆಪಿ ಮುಖಂಡ ಸಿ ಟಿ ರವಿ, “ನಮ್ಮ ನಾಯಕರ ಹೆಸರನ್ನೇ ಹೇಳಿಕೊಂಡು ವಿಧಾನಸಭೆ ಚುನಾವಣೆಯಲ್ಲಿ ಅಪಪ್ರಚಾರ ನಡೆಯಿತು. ಇದರಿಂದ ನಾನು ಸೋಲಬೇಕಾಯಿತು” ಎಂದು ತಿಳಿಸಿದರು.

“ಮಾದರಸನ ಕೆರೆ, ದಾಸರಹಳ್ಳಿ ಕೆರೆ ತುಂಬಿಸಿದಾಗ ಮತ್ತೆ ಮತ ಕೇಳಲು ಬರುವುದು ಬೇಡ, ನಾವೇ ಮತ ಹಾಕುತ್ತೇವೆ ಎಂದು ಜನ ಹೇಳಿದ್ದರು. ಚುನಾವಣೆ ಸಂದರ್ಭದಲ್ಲಿ ಕೆಲಸದ ಚರ್ಚೆ ಆಗದೇ, ನನ್ನ ವಿರುದ್ಧ ಅಪಪ್ರಚಾರ ನಡೆಯಿತು. ಜೆಡಿಎಸ್‌ನವರೂ ಅವರಿಗೇ ಬೆಂಬಲ ನೀಡಿದರು” ಎಂದರು.

“ಕಾಂಗ್ರೆಸ್‌ಗೆ ಮತ ಹಾಕಿ ಗೂಟ ಹೊಡೆಸಿಕೊಳ್ಳಬೇಕಾಯಿತು. ದುಡಿಯುವ ಎತ್ತಿಗೆ ಮೇವು ಹಾಕಬೇಕು ಎಂಬುದನ್ನು ಜನ ಯೋಚನೆ ಮಾಡಬೇಕಿತ್ತು. ಮುಂದೆ ಗೂಟ ಹೊಡೆಸಿಕೊಳ್ಳಬಾರದು ಎಂದಾದರೆ ಬಿಜೆಪಿಗೆ ಮತ ಹಾಕಿ” ಎಂದು ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

‘ಲೆಹರಾ ದೋ ತಿರಂಗಾ’ ಮಾರ್ಚ್‌ಗೆ ಮುನ್ನ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ದೆಹಲಿ ಪೊಲೀಸರಿಂದ ವಶಕ್ಕೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರನ್ನು ಶುಕ್ರವಾರ...

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...