- ಸಮಗ್ರ ತನಿಖೆ ಆಗಬೇಕು, ಇದರ ಹಿಂದೆ ಯಾರೇ ಇದ್ದರೂ ಕ್ರಮ ಕೈಗೊಳ್ಳಬೇಕು
- ಉಡುಪಿಯಂಥ ಬುದ್ದಿವಂತರ ಜಿಲ್ಲೆಯ ಇವರೇ ಮೋಸ ಹೋಗಿದ್ದಾರೆ: ರವಿ
ಬಿಜೆಪಿಯಲ್ಲಿ ಹಣವೇ ಪ್ರಧಾನವಲ್ಲ. ಹೀಗಾಗಿಯೇ ನೂರಾರು ಬಡ ಕಾರ್ಯಕರ್ತರು ನಮ್ಮಲ್ಲಿ ಸಂಸದರು, ಶಾಸಕರು ಆಗಿದ್ದಾರೆ ಎಂದು ಮಾಜಿ ಸಚಿವ ಸಿ ಟಿ ರವಿ ಹೇಳಿದರು.
“ಬೈಂದೂರು ಬಿಜೆಪಿ ಟಿಕೆಟ್ಗಾಗಿ ಚೈತ್ರಾ ಕುಂದಾಪುರ ಕೋಟಿ ಕೋಟಿಗೆ ಡೀಲ್ ಮಾಡಿಕೊಂಡಿರುವ ಪ್ರಕರಣ ಸಂಬಂಧ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲಿ ಹಣವೇ ಪ್ರಧಾನವಾಗಿದ್ದರೆ ಬೈಂದೂರಿನ ಟಿಕೆಟ್ ಬಡ ಕಾರ್ಯಕರ್ತ ಗುರುರಾಜ್ ಶೆಟ್ಟಿ ಗಂಟಿಹೊಳೆ, ಸುಳ್ಯದ ಟಿಕೆಟ್ ಬಡ ಮಹಿಳೆ ಭಾಗೀರಥಿ ಮುರುಳ್ಯ ಅವರಿಗೆ ಸಿಗುತ್ತಿರಲಿಲ್ಲ. ಕೋಟಾ ಶ್ರೀನಿವಾಸ್ ಪೂಜಾರಿ, ಸುನೀಲ್ ಕುಮಾರ್, ನಳಿನ್ ಕುಮಾರ್ ಕಟೀಲ್, ಪ್ರತಾಪ್ ಸಿಂಹ ಅವರು ನಾಯಕರಾಗುತ್ತಿರಲಿಲ್ಲ” ಎಂದರು.
ಗೋವಿಂದ ಬಾಬು ಪೂಜಾರಿ ಅವರೇ ಬಿಜೆಪಿ ನಾಯಕರ ಜೋತೆ ನೇರವಾಗಿ ಫೋನ್ ಮಾಡಿ ಮಾತನಾಡುವ ಅವಕಾಶ ಇತ್ತು. ಚೈತ್ರಾ ಕುಂದಾಪುರ ಪ್ರಕರಣದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರನ್ನು ಮೋಸ ಮಾಡಿದ್ದಾರೆ. ಈ ಪ್ರಕರಣದ ಬಗ್ಗೆ ಸತ್ಯ ಬಹಿರಂಗ ಆಗಬೇಕು, ಸಮಗ್ರ ತನಿಖೆ ಆಗಬೇಕು. ಯಾರೇ ಇದ್ದರೂ ಸೂಕ್ತ ತನಿಖೆ ನಡೆದು ಕ್ರಮ ಆಗಲಿ. ಯಾರದ್ದೋ ಹೆಸರು ಕೇಳಿ ಬರುತ್ತಿದೆ ಅನ್ನೋದು ಬೇರೆ. ಮೊದಲು ಸಮಗ್ರ ತನಿಖೆ ಆಗಲಿ” ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕರಾವಳಿಯ ಜನ ಹಿಂದುತ್ವದ ನಶೆಯಿಂದ ಹೊರಬರಲು ಇದು ʼಚೈತ್ರಕಾಲʼ
“ದಕ್ಷಿಣ ಕನ್ನಡ ಮತ್ತು ಉಡುಪಿಯಂಥ ಬುದ್ದಿವಂತರ ಜಿಲ್ಲೆಯ ಇವರೇ ಮೋಸ ಹೋಗಿದ್ದಾರೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯೇ ಅವರ ಜೊತೆ ತುಳು ಭಾಷೆಯಲ್ಲೇ ಮಾತಾಡುತ್ತಿದ್ದರು. ನಳಿನ್ ಕುಮಾರ್ ಕಟೀಲ್, ಕೋಟಾ ಶ್ರೀನಿವಾಸ ಪೂಜಾರಿಯೂ ಮಾತಾಡುತ್ತಿದ್ದರು” ಎಂದರು.
ಮೈತ್ರಿ ವಿಚಾರದಲ್ಲಿ ವರಿಷ್ಠರ ನಡೆ ಮುಖ್ಯ
“ನಾವು ಪರಿಷತ್ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಚರ್ಚೆ ಆಗುತ್ತಿದೆ. ಆದರೆ ಅಂತಿಮ ಆಗಿಲ್ಲ. ಹಾಗಾಗಿ ಅದು ವರಿಷ್ಠರ ತೀರ್ಮಾನ, ನಾವು ಚುನಾವಣೆಗೆ ನಮ್ಮ ಹಂತದಲ್ಲಿ ಸಿದ್ಧವಾಗುತ್ತಿದ್ದೇವೆ. ಈ ಮೈತ್ರಿ ವಿಚಾರದಲ್ಲಿ ವರಿಷ್ಠರ ನಡೆ ಮುಖ್ಯವಾಗಿದೆ” ಎಂದು ಹೇಳಿದರು.