ಪರಿಷತ್‌ನಲ್ಲಿ ಸಿ.ಟಿ ರವಿ ಅಸಹ್ಯವಾಗಿ ಮಾತನಾಡಿದ್ದು ಸತ್ಯ: ಬಿ.ಆರ್ ಪಾಟೀಲ್

Date:

ಬೆಳಗಾವಿ ಅಧಿವೇಶನದ ವೇಳೆ ವಿಧಾನ ಪರಿಷತ್‌ನಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಅಸಹ್ಯವಾಗಿ ಮಾತನಾಡಿದ್ದು ಸತ್ಯ. ಸಿ.ಟಿ ರವಿ ಅಂತಹ ಮಾತುಗಳನ್ನು ಆಡಬಾರದಿತ್ತೆಂದು ಸದನದಲ್ಲಿಯೇ ಬಿಜೆಪಿಯ ಕೆಲ ಶಾಸಕರು ಲಕ್ಷ್ಮಿ ಹೆಬ್ಬಾಳ್ಕರ್ ಬಳಿ ಕ್ಷಮೆ ಕೇಳಿದ್ದಾರೆ ಎಂದು ಮುಖ್ಯಮಂತ್ರಿಗಳ ಸಲಹೆಗಾರ, ಆಳಂದ ಶಾಸಕ ಬಿ.ಆರ್ ಪಾಟೀಲ್ ಹೇಳಿದ್ದಾರೆ.

- Advertisement -

ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಬಿ.ಆರ್ ಪಾಟೀಲ್ ಮಾತನಾಡಿದರು. “ಸಿ.ಟಿ. ರವಿ ಪರ ನಾವೇ ಕ್ಷಮೆಯಾಚಿಸುತ್ತೇವೆ ಎಂದು ಕೆಲ ಬಿಜೆಪಿ ಶಾಸಕರು ಲಕ್ಷ್ಮಿ ಹೆಬ್ಬಾಳ್ಕರ್ ಬಳಿ ಕ್ಷಮೆ ಕೇಳಿದ್ದಾರೆ. ಅವರ ಹೆಸರನ್ನು ನಾನು ಹೇಳಲು ಇಚ್ಛಿಸುವುದಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ಮಹಾತ್ಮ ಗಾಂಧಿ ನೇತೃತ್ವದಲ್ಲಿ 1924ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್‌ ಅಧಿವೇಶನಕ್ಕೆ 100 ವರ್ಷಗಳಾಗಿವೆ. ಬೆಳಗಾವಿಯಲ್ಲಿ ಡಿ.26 ಮತ್ತು 27ರಂದು ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ. ಗಾಮೀಣಾಭಿವೃದ್ಧಿ ಬಗ್ಗೆ ಗಾಂಧಿ ಕನಸು ಕಂಡಿದ್ದರು. ಹೀಗಾಗಿ, ಗದಗ ಗ್ರಾಮೀಣ ವಿಶ್ವವಿದ್ಯಾಲಯಕ್ಕೆ ಗಾಂಧಿ ಅವರ ಹೆಸರಿಡಬೇಕು” ಎಂದು ಅವರು ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ರಾಜಶೇಖರ್ ಯಂಕಂಚಿ, ಬಾಬುರಾವ್ ಗೊಬ್ಬುರ್ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...