ಸಿ ಟಿ ರವಿ ಅವರ ಸಹಕಾರ ಸಿ ಪಿ ಯೋಗೇಶ್ವರ್ ಪರವಾಗಿದೆ: ಮಾಜಿ ಸಂಸದ ಡಿ ಕೆ ಸುರೇಶ್

Date:

ಸಿ ಟಿ ರವಿ ಅವರ ಸಹಕಾರ ಸಿ ಪಿ ಯೋಗೇಶ್ವರ್ ಅವರ ಪರವಾಗಿದೆ. ಮಿಕ್ಕ ವಿಶ್ಲೇಷಣೆ ಮಾಧ್ಯಮದವರು ಮಾಡಿಕೊಳ್ಳಿ ಎಂದು ಮಾಜಿ ಸಂಸದ ಡಿ ಕೆ ಸುರೇಶ್ ಹೇಳಿದರು.

- Advertisement -

ಸದಾಶಿವನಗರದ ತಮ್ಮ ನಿವಾಸದಲ್ಲಿ ಸಿ.ಪಿ.ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡು ಕಾಂಗ್ರೆಸ್ ದುರ್ಬಲವೆಂದು ತೋರಿಸಿಕೊಂಡಿದೆ ಎನ್ನುವ ಸಿ ಟಿ ರವಿ ಅವರ ಹೇಳಿಕೆ ಸುದ್ದಿಗಾರರು ಕೇಳಿದಾಗ ಈ ರೀತಿ ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಬಿಜೆಪಿಯ ಕೆಲ ನಾಯಕರಿಂದಾಗಿ ಯೋಗೇಶ್ವರ್ ಕಾಂಗ್ರೆಸ್ ಸೇರಿದ್ದಾರೆ ಎಂಬ ಕುಮಾರಸ್ವಾಮಿ ಹಾಗೂ ನಿಖಿಲ್ ಅವರ ಹೇಳಿಕೆ ಬಗ್ಗೆ ಕೇಳಿದಾಗ “ನಾನು ಸಿ ಟಿ ರವಿಯವರ ಹೇಳಿಕೆಗೆ ಮಾತ್ರ ಉತ್ತರ ನೀಡುತ್ತಿದ್ದು, ಮಿಕ್ಕ ಚರ್ಚೆ, ವಿಶ್ಲೇಷಣೆಯನ್ನು ನೀವು ಮಾಡಿ. ಮಾಧ್ಯಮದವರು ಹೆಚ್ಚು ವ್ಯಾಖ್ಯಾನ ಮಾಡುವುದರಿಂದ ಇದರ ಸಾಧಕ- ಬಾಧಕಗಳು ಹಾಗೂ ಕಳೆದ ಒಂದು ವಾರಗಳಿಂದ ನಡೆದ ವಿದ್ಯಮಾನಗಳನ್ನು ರಾಜ್ಯದ ಜನರಿಗೆ ನೀವು ತಿಳಿಸಬೇಕು” ಎಂದರು.

ನಿಖಿಲ್ ಅಥವಾ ಅನಸೂಯಾ ಮಂಜುನಾಥ್ ಅವರನ್ನು ಕಣಕ್ಕೆ ಇಳಿಸಬೇಕು ಎನ್ನುವ ಚರ್ಚೆಯ ಬಗ್ಗೆ ಕೇಳಿದಾಗ “ಅದು ಆಯಾಯ ಪಕ್ಷದ ತೀರ್ಮಾನ” ಎಂದು ಹೇಳಿದರು.

ಚನ್ನಪಟ್ಟಣದಲ್ಲಿ ಜೆಡಿಎಸ್ ನಿಂದ ಪ್ರಬಲ ವ್ಯಕ್ತಿಯನ್ನೇ ಕಾಂಗ್ರೆಸ್‌ಗೆ ಕರೆತರಲಾಗುತ್ತದೆ ಎನ್ನುವ ಸುದ್ದಿಯ ಬಗ್ಗೆ ಕೇಳಿದಾಗ “ಕಾದು ನೋಡೋಣ” ಎಂದಷ್ಟೇ ಉತ್ತರಿಸಿದರು.

ಚನ್ನಪಟ್ಟಣದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದೆ

ಚನ್ನಪಟ್ಟಣದಲ್ಲಿ ಡಿ.ಕೆ.ಸುರೇಶ್ ಅವರಿಗೆ ಟಿಕೆಟ್ ನೀಡಲು ಶಿವಕುಮಾರ್ ಅವರು ಹಿಂದೇಟು ಹಾಕಿದರು ಎನ್ನುವ ಬಗ್ಗೆ ಕೇಳಿದಾಗ, “ನಾನು ಲೋಕಸಭಾ ಚುನಾವಣೆಯಲ್ಲಿ ಸೋತಿದ್ದೇನೆ. ತಕ್ಷಣ ಇನ್ನೊಂದು ಚುನಾವಣೆಗೆ ನಿಂತರೆ, ಜನರಿಗೆ ಒಳ್ಳೆಯ ಸಂದೇಶ ನೀಡಿದಂತೆ ಆಗುವುದಿಲ್ಲ. ಹೀಗಾಗಿ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟವಾಗಿ ಹೈಕಮಾಂಡ್‌ಗೆ ಹಾಗೂ ಪಕ್ಷದ ವರಿಷ್ಠರಿಗೆ ತಿಳಿಸಿದ್ದೆ. ಅನೇಕ ಕಾರ್ಯಕರ್ತರು ನಾನೇ ನಿಲ್ಲಬೇಕು ಎಂದು ಹೇಳಿದರು. ನಾನು ಪಕ್ಷದ ತೀರ್ಮಾನಕ್ಕೆ ಬದ್ಧನಾಗಿದ್ದೇನೆ” ಎಂದರು.

ಅಭ್ಯರ್ಥಿಗಳ ವಿಚಾರದಲ್ಲಿ ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿರಬೇಕು

ಯೋಗೇಶ್ವರ್ ಅವರು ಪಕ್ಷದಲ್ಲಿ ಮೂರು ವರ್ಷ ದುಡಿದ ನಂತರ ಟಿಕೆಟ್ ನೀಡಿ ಎನ್ನುವ ಕಾರ್ಯಕರ್ತರ ಹೇಳಿಕೆಗಳ ಬಗ್ಗೆ ಕೇಳಿದಾಗ, “ಪಕ್ಷದ ಶಿಸ್ತಿನ ಸಿಪಾಯಿಗಳಾಗಿ ನಾವುಗಳು, ಮುಖಂಡರು, ಕಾರ್ಯಕರ್ತರಾದಿಯಾಗಿ ಎಲ್ಲರೂ ಪಕ್ಷ ತೆಗೆದುಕೊಂಡಿರುವ ತೀರ್ಮಾನಕ್ಕೆ ಬದ್ಧವಾಗಿರಬೇಕಾಗುತ್ತದೆ. ಒಬ್ಬೊಬ್ಬರದು ಒಂದೊಂದು ಅಭಿಪ್ರಾಯವಿರುತ್ತದೆ. ನಾಮಪತ್ರ ಸಲ್ಲಿಕೆಯಾದ ನಂತರ ಎಲ್ಲರ ಬಳಿಯೂ ನಾನೇ ಖುದ್ದಾಗಿ ಮಾತನಾಡುತ್ತೇನೆ” ಎಂದು ತಿಳಿಸಿದರು.

ಆಕಾಂಕ್ಷಿಗಳ ಪಟ್ಟಿ ದೆಹಲಿಗೆ

ಶಿಗ್ಗಾಂವಿಯಲ್ಲಿ ಮುಸ್ಲಿಂ ಅಭ್ಯರ್ಥಿ ಹೊರತಾಗಿ ಬೇರೆಯವರನ್ನು ಘೋಷಣೆ ಮಾಡಲಾಗುತ್ತದೆಯೇ ಎಂದು ಕೇಳಿದಾಗ, “ಇದನ್ನು ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಸ್ಕ್ರೀನಿಂಗ್ ಕಮಿಟಿಯವರು ಈಗಾಗಲೇ ನಾಲ್ಕರಿಂದ ಐದು ಜನ ಆಕಾಂಕ್ಷಿಗಳ ಹೆಸರನ್ನು ದೆಹಲಿಗೆ ಕಳಿಸಿರಬಹುದು. ಮಾಜಿ ಮುಖ್ಯಮಂತ್ರಿ ಕ್ಷೇತ್ರವಾಗಿರುವುದರಿಂದ, ಗೆಲ್ಲುವಂತಹ ಪ್ರಭಾವಿ ವ್ಯಕ್ತಿಗೆ ಟಿಕೆಟ್ ನೀಡಬಹುದು” ಎಂದರು.

ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಿ ಎನ್ನುವ ಸಚಿವ ಜಮೀರ್ ಅವರ ಬಹಿರಂಗ ಹೇಳಿಕೆ ಬಗ್ಗೆ ಕೇಳಿದಾಗ, “ಪ್ರತಿ ಬಾರಿಯೂ ಶಿಗ್ಗಾಂವಿ ಕ್ಷೇತ್ರದಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಲಾಗುತ್ತಿದೆ. ಕ್ಷೇತ್ರದ ಅಭ್ಯರ್ಥಿ ಆಯ್ಕೆ ಉಸ್ತುವಾರಿಯನ್ನು ಜಮೀರ್ ಅವರಿಗೆ ಹೈಕಮಾಂಡ್ ನೀಡಿರುವುದರಿಂದ ಹಾಗೂ ಅವರು ಸಹ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಕಾರಣಕ್ಕೆ ಈ ರೀತಿಯ ಬೇಡಿಕೆ ಇಡುವುದು ಸಹಜ” ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...