ಕಳೆದ ಎರಡು ಮೂರು ತಿಂಗಳಿನಿಂದ ಹೊತ್ತಿ ಉರಿಯುತ್ತಿರುವ ಮಣಿಪುರ ಗಲಭೆಯ ವಿಚಾರವಾಗಿ ಮಾತನಾಡಿರುವ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಮಣಿಪುರದಲ್ಲಿ ಹಿಂಸಾಚಾರ ನಡೆದಿಲ್ಲ. ಬದಲಿಗೆ ಕೆಲವರು ನಡೆಸಿರುವುದು. ಗಲಭೆಯನ್ನು ‘ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳು’ ನಡೆಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
ಲೋಕಸಭಾ ಚುನಾವಣೆ ಸಮೀಪದಲ್ಲಿರುವಂತೆಯೇ ಮಣಿಪುರದ ಬಗ್ಗೆ ಮಾತನಾಡಿರುವ ಮೋಹನ್ ಭಾಗವತ್, ‘ಮಣಿಪುರದಲ್ಲಿ ಹಿಂಸಾಚಾರ ನಡೆದಿಲ್ಲ, ಅದನ್ನು ಅಲ್ಲಿ ವ್ಯವಸ್ಥಿತವಾಗಿ ನಡೆಸಿರುವುದು. ಹಲವಾರು ವರ್ಷಗಳಿಂದ ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳು ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದರು. ಇದ್ದಕ್ಕಿದ್ದಂತೆ ಅಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು ಹೇಗೆ? ಮಣಿಪುರ ಸಂಘರ್ಷದಿಂದ ಬಾಹ್ಯ ಶಕ್ತಿಗಳಿಗೆ ಪ್ರಯೋಜನವಿದೆ. ಬಾಹ್ಯ ಶಕ್ತಿಗಳು ಹಿಂಸಾಚಾರ ನಡೆಸಲು ವ್ಯವಸ್ಥಿತವಾಗಿ ಕೆಲಸ ಮಾಡಿರುವ ಅನುಮಾನವಿದೆ’ ಎಂದು ಆರೋಪಿಸಿದ್ದಾರೆ.
#WATCH | Nagpur, Maharashtra: While addressing RSS Vijayadashmi Utsav, RSS Chief Mohan Bhagwat says, “The situation in Manipur is calming now. How did a sudden fight occur there? … Who benefits from it? External powers will benefit from this. Who was behind this? The government… pic.twitter.com/bqNaLN29Z5
— ANI (@ANI) October 24, 2023
ಮಣಿಪುರಕ್ಕೆ ಭೇಟಿ ನೀಡಿದ್ದ ಕೇಂದ್ರದ ಗೃಹ ಸಚಿವ ಅಮಿತ್ ಶಾ ಮೂರು ದಿನಗಳ ಕಾಲ ಅಲ್ಲಿ ತಂಗಿದ್ದರು. ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಸಂಘದ ಕಾರ್ಯಕರ್ತರೂ ಕೂಡ ಶ್ರಮಿಸಿದ್ದರು ಎಂದಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ, ನೀವು(ಮತದಾರರು) ಎಲ್ಲರನ್ನೂ ನೋಡಿದ್ದೀರಾ. ಹಾಗಾಗಿ, ಉತ್ತಮವಾದವರನ್ನೇ ಆಯ್ಕೆ ಮಾಡಿ’ ಎಂದು ಹೇಳಿಕೆ ನೀಡಿದ್ದಾರೆ.
ಚುನಾವಣೆಗಳು ಹತ್ತಿರದಲ್ಲಿದ್ದು, ಸಮಾಜದಲ್ಲಿ ಬಿರುಕು ಮೂಡಿಸುವ ವಿಚ್ಛಿದ್ರಕಾರಕ ಶಕ್ತಿಗಳಿಗೆ ಜನರು ಮರುಳಾಗಬಾರದು. ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕನ ಹಕ್ಕು. ಪ್ರತಿಯೊಬ್ಬರೂ ಮತ ಚಲಾಯಿಸಬೇಕು. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಜನರ ಭಾವನೆಗಳನ್ನು ಕೆರಳಿಸುವ ಮೂಲಕ ಮತಗಳನ್ನು ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಅಂತಹ ಎಲ್ಲ ಪ್ರಯತ್ನಗಳ ಹೊರತಾಗಿಯೂ, ಮತದಾರರು ತಮ್ಮ ಮುಂದೆ ಲಭ್ಯವಿರುವ ಉತ್ತಮವಾದವರನ್ನು ಮಾತ್ರ ಆಯ್ಕೆ ಮಾಡಬೇಕು. ದೇಶದ ಏಕತೆ, ಸಮಗ್ರತೆ, ಅಸ್ಮಿತೆ ಮತ್ತು ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮತ ಚಲಾಯಿಸಬೇಕು ಎಂದರು.
ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳು ಮತ್ತು ಜಾಗೃತರು ಮಾಧ್ಯಮ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ಪ್ರಭಾವವನ್ನು ಬಳಸಿಕೊಂಡು ದೇಶದ ಶಿಕ್ಷಣ ಮತ್ತು ಸಂಸ್ಕೃತಿಯನ್ನು ಹಾಳು ಮಾಡುತ್ತಿದ್ದಾರೆ. ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳು ಮತ್ತು ಸ್ವಾರ್ಥ, ತಾರತಮ್ಯ ಮತ್ತು ವಂಚಕ ಶಕ್ತಿಗಳು ಮಾಧ್ಯಮ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ಪ್ರಭಾವವನ್ನು ಬಳಸಿಕೊಂಡು ದೇಶದ ಶಿಕ್ಷಣ ಮತ್ತು ಸಂಸ್ಕೃತಿಯನ್ನು ಹಾಳುಮಾಡಲು ಯತ್ನಿಸುತ್ತಿದ್ದಾರೆ. ಈ ವಿಧ್ವಂಸಕ ಶಕ್ತಿಗಳ ಬಗ್ಗೆ ಎಚ್ಚರದಿಂದ ಇರಬೇಕು. ನಾವು ಉನ್ನತ ಗುರಿಯನ್ನಿಟ್ಟು ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಾರೆ. ಆದರೆ ಜಗತ್ತಿನ ಕ್ರಮ ಬದ್ಧತೆಯನ್ನು ಅಡ್ಡಿಪಡಿಸುವುದೇ ಅವರ ನಿಜವಾದ ಗುರಿ ಎಂದು ಅವರು ಹೇಳಿದ್ದಾರೆ.
VIDEO | “With every passing year, the respect for Indians is increasing in the world, which we all are experiencing ourselves. When the G20 Summit was organised here (in India), the hospitality of Indians was immensely appreciated,” says RSS chief Mohan Bhagwat at the RSS… pic.twitter.com/WHASQs2gEd
— Press Trust of India (@PTI_News) October 24, 2023
ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಆಗಾಗ್ಗೆ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿ ಮೋಹನ್ ಭಾಗವತ್, ದೇಶದಲ್ಲಿ ಮೂಡಿರುವ ಒಡಕು ನಿವಾರಣೆಯ ಅಗತ್ಯವಿದೆ ಎಂದು ಹೇಳಿದರು.
‘ಸಂವಿಧಾನ ರಚನಾ ಸಭೆಯನ್ನುದ್ದೇಶಿಸಿ ಅಂಬೇಡ್ಕರ್ ಮಾಡಿದ ಎರಡು ಭಾಷಣಗಳ ಬಗ್ಗೆ ಎಲ್ಲರೂ ಗಮನ ಹರಿಸಬೇಕು. ಆರ್‌ಎಸ್‌ಎಸ್‌ನ ಸ್ವಯಂಸೇವಕರು ಅವುಗಳನ್ನು ಮತ್ತೆ ಮತ್ತೆ ಓದುತ್ತಲೇ ಇರುತ್ತಾರೆ’ ಎಂದು ಇದೇ ವೇಳೆ ಮೋಹನ್ ಭಾಗವತ್ ತಿಳಿಸಿದರು.