ಮಣಿಪುರ ಗಲಭೆಗೆ ‘ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳು’ ಕಾರಣ: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Date:

ಕಳೆದ ಎರಡು ಮೂರು ತಿಂಗಳಿನಿಂದ ಹೊತ್ತಿ ಉರಿಯುತ್ತಿರುವ ಮಣಿಪುರ ಗಲಭೆಯ ವಿಚಾರವಾಗಿ ಮಾತನಾಡಿರುವ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್, ಮಣಿಪುರದಲ್ಲಿ ಹಿಂಸಾಚಾರ ನಡೆದಿಲ್ಲ. ಬದಲಿಗೆ ಕೆಲವರು ನಡೆಸಿರುವುದು. ಗಲಭೆಯನ್ನು ‘ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳು’ ನಡೆಸಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

- Advertisement -

ಲೋಕಸಭಾ ಚುನಾವಣೆ ಸಮೀಪದಲ್ಲಿರುವಂತೆಯೇ ಮಣಿಪುರದ ಬಗ್ಗೆ ಮಾತನಾಡಿರುವ ಮೋಹನ್ ಭಾಗವತ್, ‘ಮಣಿಪುರದಲ್ಲಿ ಹಿಂಸಾಚಾರ ನಡೆದಿಲ್ಲ, ಅದನ್ನು ಅಲ್ಲಿ ವ್ಯವಸ್ಥಿತವಾಗಿ ನಡೆಸಿರುವುದು. ಹಲವಾರು ವರ್ಷಗಳಿಂದ ಮಣಿಪುರದಲ್ಲಿ ಕುಕಿ ಮತ್ತು ಮೈತೇಯಿ ಸಮುದಾಯಗಳು ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದರು. ಇದ್ದಕ್ಕಿದ್ದಂತೆ ಅಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು ಹೇಗೆ? ಮಣಿಪುರ ಸಂಘರ್ಷದಿಂದ ಬಾಹ್ಯ ಶಕ್ತಿಗಳಿಗೆ ಪ್ರಯೋಜನವಿದೆ. ಬಾಹ್ಯ ಶಕ್ತಿಗಳು ಹಿಂಸಾಚಾರ ನಡೆಸಲು ವ್ಯವಸ್ಥಿತವಾಗಿ ಕೆಲಸ ಮಾಡಿರುವ ಅನುಮಾನವಿದೆ’ ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಮಣಿಪುರಕ್ಕೆ ಭೇಟಿ ನೀಡಿದ್ದ ಕೇಂದ್ರದ ಗೃಹ ಸಚಿವ ಅಮಿತ್ ಶಾ ಮೂರು ದಿನಗಳ ಕಾಲ ಅಲ್ಲಿ ತಂಗಿದ್ದರು. ಮಣಿಪುರದಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಸಂಘದ ಕಾರ್ಯಕರ್ತರೂ ಕೂಡ ಶ್ರಮಿಸಿದ್ದರು ಎಂದಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ, ನೀವು(ಮತದಾರರು) ಎಲ್ಲರನ್ನೂ ನೋಡಿದ್ದೀರಾ. ಹಾಗಾಗಿ, ಉತ್ತಮವಾದವರನ್ನೇ ಆಯ್ಕೆ ಮಾಡಿ’ ಎಂದು ಹೇಳಿಕೆ ನೀಡಿದ್ದಾರೆ.

ಚುನಾವಣೆಗಳು ಹತ್ತಿರದಲ್ಲಿದ್ದು, ಸಮಾಜದಲ್ಲಿ ಬಿರುಕು ಮೂಡಿಸುವ ವಿಚ್ಛಿದ್ರಕಾರಕ ಶಕ್ತಿಗಳಿಗೆ ಜನರು ಮರುಳಾಗಬಾರದು. ಮತದಾನ ಮಾಡುವುದು ಪ್ರತಿಯೊಬ್ಬ ನಾಗರಿಕನ ಹಕ್ಕು. ಪ್ರತಿಯೊಬ್ಬರೂ ಮತ ಚಲಾಯಿಸಬೇಕು. ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಜನರ ಭಾವನೆಗಳನ್ನು ಕೆರಳಿಸುವ ಮೂಲಕ ಮತಗಳನ್ನು ಸೆಳೆಯುವ ಪ್ರಯತ್ನ ನಡೆಯುತ್ತಿದೆ. ಅಂತಹ ಎಲ್ಲ ಪ್ರಯತ್ನಗಳ ಹೊರತಾಗಿಯೂ, ಮತದಾರರು ತಮ್ಮ ಮುಂದೆ ಲಭ್ಯವಿರುವ ಉತ್ತಮವಾದವರನ್ನು ಮಾತ್ರ ಆಯ್ಕೆ ಮಾಡಬೇಕು. ದೇಶದ ಏಕತೆ, ಸಮಗ್ರತೆ, ಅಸ್ಮಿತೆ ಮತ್ತು ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮತ ಚಲಾಯಿಸಬೇಕು ಎಂದರು.

ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳು ಮತ್ತು ಜಾಗೃತರು ಮಾಧ್ಯಮ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ಪ್ರಭಾವವನ್ನು ಬಳಸಿಕೊಂಡು ದೇಶದ ಶಿಕ್ಷಣ ಮತ್ತು ಸಂಸ್ಕೃತಿಯನ್ನು ಹಾಳು ಮಾಡುತ್ತಿದ್ದಾರೆ. ಸಾಂಸ್ಕೃತಿಕ ಮಾರ್ಕ್ಸ್‌ವಾದಿಗಳು ಮತ್ತು ಸ್ವಾರ್ಥ, ತಾರತಮ್ಯ ಮತ್ತು ವಂಚಕ ಶಕ್ತಿಗಳು ಮಾಧ್ಯಮ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ಪ್ರಭಾವವನ್ನು ಬಳಸಿಕೊಂಡು ದೇಶದ ಶಿಕ್ಷಣ ಮತ್ತು ಸಂಸ್ಕೃತಿಯನ್ನು ಹಾಳುಮಾಡಲು ಯತ್ನಿಸುತ್ತಿದ್ದಾರೆ. ಈ ವಿಧ್ವಂಸಕ ಶಕ್ತಿಗಳ ಬಗ್ಗೆ ಎಚ್ಚರದಿಂದ ಇರಬೇಕು. ನಾವು ಉನ್ನತ ಗುರಿಯನ್ನಿಟ್ಟು ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿಕೊಳ್ಳುತ್ತಾರೆ. ಆದರೆ ಜಗತ್ತಿನ ಕ್ರಮ ಬದ್ಧತೆಯನ್ನು ಅಡ್ಡಿಪಡಿಸುವುದೇ ಅವರ ನಿಜವಾದ ಗುರಿ ಎಂದು ಅವರು ಹೇಳಿದ್ದಾರೆ.

ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರನ್ನು ಆಗಾಗ್ಗೆ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿ ಮೋಹನ್ ಭಾಗವತ್, ದೇಶದಲ್ಲಿ ಮೂಡಿರುವ ಒಡಕು ನಿವಾರಣೆಯ ಅಗತ್ಯವಿದೆ ಎಂದು ಹೇಳಿದರು.

‘ಸಂವಿಧಾನ ರಚನಾ ಸಭೆಯನ್ನುದ್ದೇಶಿಸಿ ಅಂಬೇಡ್ಕರ್ ಮಾಡಿದ ಎರಡು ಭಾಷಣಗಳ ಬಗ್ಗೆ ಎಲ್ಲರೂ ಗಮನ ಹರಿಸಬೇಕು. ಆರ್‌ಎಸ್‌ಎಸ್‌ನ ಸ್ವಯಂಸೇವಕರು ಅವುಗಳನ್ನು ಮತ್ತೆ ಮತ್ತೆ ಓದುತ್ತಲೇ ಇರುತ್ತಾರೆ’ ಎಂದು ಇದೇ ವೇಳೆ ಮೋಹನ್ ಭಾಗವತ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...