ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಹೆಸರು ಅನುಮೋದಿಸಿದ ಕಾಂಗ್ರೆಸ್

Date:

Advertisements

“ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ಸರ್ವಾನುಮತದಿಂದ ರಾಹುಲ್ ಗಾಂಧಿಯವರಿಗೆ ಮನವಿ ಮಾಡಲಾಗಿದೆ” ಎಂದು ಎಐಸಿಸಿ ಸಂಘಟನಾ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ.

ದೆಹಲಿಯಲ್ಲಿ ಇಂದು ಕಾಂಗ್ರೆಸ್‌ನ ನೀತಿ ನಿರ್ಧಾರಗಳನ್ನು ಕೈಗೊಳ್ಳುವ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿದ್ದು, ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಈ ವಿಚಾರ ತಿಳಿಸಿದ್ದಾರೆ.

“ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ವಹಿಸಿಕೊಳ್ಳುವಂತೆ ಸಿಡಬ್ಲ್ಯುಸಿ ಸರ್ವಾನುಮತದಿಂದ ರಾಹುಲ್ ಗಾಂಧಿಯವರಿಗೆ ಮನವಿ ಮಾಡಿದೆ. ಚುನಾವಣೆಯ ಸಮಯದಲ್ಲಿ, ನಾವು ನಿರುದ್ಯೋಗ, ಹಣದುಬ್ಬರ, ಮಹಿಳೆಯರ ಸಮಸ್ಯೆಗಳು ಮತ್ತು ಸಾಮಾಜಿಕ ನ್ಯಾಯದಂತಹ ಹಲವಾರು ಪ್ರಮುಖ ವಿಷಯಗಳನ್ನು ಪ್ರಸ್ತಾಪಿಸಿದ್ದೇವೆ. ಈ ಸಮಸ್ಯೆಗಳನ್ನು ಈಗ ಸಂಸತ್ತಿನೊಳಗೆ ಹೆಚ್ಚು ಪರಿಣಾಮಕಾರಿಯಾಗಿ ಚರ್ಚೆ ನಡೆಸಬೇಕಾಗಿದೆ. ಸಂಸತ್ತಿನಲ್ಲಿ ಈ ಅಭಿಯಾನವನ್ನು ಮುನ್ನಡೆಸಲು ರಾಹುಲ್ ಗಾಂಧಿ ಅತ್ಯುತ್ತಮ ವ್ಯಕ್ತಿ. ಹಾಗಾಗಿ ಅವರ ಹೆಸರನ್ನು ಅವಿರೋಧವಾಗಿ ಆಯ್ಕೆ ಮಾಡಿದ್ದೇವೆ” ಎಂದು ತಿಳಿಸಿದರು.

Advertisements

“ಸಿಡಬ್ಲ್ಯುಸಿಯಲ್ಲಿ ನಾಲ್ಕು ತಿಂಗಳ ಹಿಂದೆ ಇದ್ದ ವಾತಾವರಣಕ್ಕಿಂತ ಈಗ ಸಂಪೂರ್ಣವಾಗಿ ಭಿನ್ನವಾಗಿದೆ. ಲೋಕಸಭಾ ಚುನಾವಣೆಯ ಫಲಿತಾಂಶದ ಬಳಿಕ ನಾಯಕರಿಂದ ಹಿಡಿದು ಕಾರ್ಯಕರ್ತರವರೆಗೆ ಎಲ್ಲರಿಗೂ ಹೊಸ ಚೈತನ್ಯ ಬಂದಿದೆ. ಕಾಂಗ್ರೆಸ್ ಅನ್ನು ಮುಗಿಸಲು ಹಲವಾರು ಪ್ರಯತ್ನಗಳು ನಡೆದವು, ಆದರೆ ನಾವು ಬಲವಾಗಿ ನಿಂತಿದ್ದೇವೆ. ಬಿಜೆಪಿಯದ್ದು ಒಂದೇ ಅಜೆಂಡಾ. ಜನರನ್ನು ವಿಭಜಿಸುವುದು. ಆದಾಗ್ಯೂ, ಕಾಂಗ್ರೆಸ್ ಪಕ್ಷ ಮತ್ತು ಇಂಡಿಯಾ ಮೈತ್ರಿಯು ನಮ್ಮ ನಿರೂಪಣೆ ಮತ್ತು ಗ್ಯಾರಂಟಿಗಳೊಂದಿಗೆ ದೃಢವಾಗಿ ನಿಂತಿದೆ” ಎಂದು ತಿಳಿಸಿದರು.

“ರಾಷ್ಟ್ರದ ರಾಜಕೀಯದಲ್ಲಿ ಕಾಂಗ್ರೆಸ್ ಪಕ್ಷವು ಒಮ್ಮೆ ಹೊಂದಿದ್ದ ಅತ್ಯುನ್ನತ ಸ್ಥಾನವನ್ನು ಪಡೆದುಕೊಳ್ಳಲು ನಾವು ಇನ್ನೂ ಬಹಳ ದೂರ ಹೋಗಬೇಕಾಗಿದೆ. ದೇಶದ ಜನರು ಮಾತನಾಡಿ ಕಾಂಗ್ರೆಸ್‌ಗೆ ಮತ್ತೊಂದು ಅವಕಾಶ ನೀಡಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸಾಮಾಜಿಕ ಮತ್ತು ಆರ್ಥಿಕ ನ್ಯಾಯ ಮತ್ತು ಸಂವಿಧಾನ ಮತ್ತು ಅದರ ತತ್ವಗಳು, ಮೌಲ್ಯಗಳು ಮತ್ತು ನಿಬಂಧನೆಗಳನ್ನು ರಕ್ಷಿಸುವಲ್ಲಿ ಅದರ ಬದ್ಧತೆಯಲ್ಲಿ ದೃಢವಾಗಿ ಮುಂದುವರಿಸಲಿದೆ” ಎಂದು ಕೆ ಸಿ ವೇಣುಗೋಪಾಲ್ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮೋದಿ 3.0 ಸರ್ಕಾರದಲ್ಲಿ ನಿತೀಶ್ ಪಕ್ಷಕ್ಕೆ 2 ಮಂತ್ರಿಗಿರಿ

ಬಳಿಕ ಮಾತನಾಡಿದ ಕಾಂಗ್ರೆಸ್‌ನ ಹಿರಿಯ ಮುಖಂಡ ಜೈರಾಮ್ ರಮೇಶ್, “2024ರ ಲೋಕಸಭಾ ಚುನಾವಣೆಯ ಫಲಿತಾಂಶವು ಕೇವಲ ಬಿಜೆಪಿಯ ಸೋಲಲ್ಲ. ನರೇಂದ್ರ ಮೋದಿಯವರ ವ್ಯಕ್ತಿಗತ, ರಾಜಕೀಯ ಮತ್ತು ನೈತಿಕ ಸೋಲಾಗಿದೆ. ಈ ಗೆಲುವು ದೇಶದ ಜನಸಾಮಾನ್ಯರ ಗೆಲುವು. ಸಂವಿಧಾನವನ್ನು ಸುರಕ್ಷಿತವಾಗಿಡುವುದಕ್ಕೆ ಗೆಲುವು. ಇಂಡಿಯಾ ಮೈತ್ರಿಕೂಟಕ್ಕೆ ಮತ ನೀಡಿದ ಜನರಿಗೆ ಧನ್ಯವಾದ ಅರ್ಪಿಸುತ್ತೇವೆ” ಎಂದು ಹೇಳಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X