ವಿಧಾನಸಭೆ ಅಧಿವೇಶನದಲ್ಲಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದಕ್ಕೆ ಕ್ಷಮೆಯಾಚಿಸಿದ ಡಿ ಕೆ ಶಿವಕುಮಾರ್

Date:

ವಿಧಾನಸಭೆ ಅಧಿವೇಶನದಲ್ಲಿಯೇ ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಎಂದು ಆರ್‌ಎಸ್‌ಎಸ್‌ ಗೀತೆ ಹಾಡಿ ವಿವಾದ ಸೃಷ್ಟಿಸಿದ್ದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಕೊನೆಗೂ ಕ್ಷಮೆಯಾಚಿಸಿದ್ದಾರೆ.

- Advertisement -

ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿರುವುದು ಕಾಂಗ್ರೆಸ್ ಸೇರಿದಂತೆ ಒಟ್ಟಾರೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಡಿಕೆಶಿ ಮೃದು ಹಿಂದುತ್ವ ಹೊಂದಿದ್ದು, ಈಗ ರಾಜಕೀಯ ಲಾಭಕ್ಕಾಗಿ ಸಾರ್ವಜನಿಕವಾಗಿ ಮೃದು ಹಿಂದುತ್ವ ಪ್ರದರ್ಶನ ಮಾಡಿದ್ದಾರೆ ಎಂದು ಟೀಕಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಇದನ್ನು ಓದಿದ್ದೀರಾ? ಡಿ ಕೆ ಶಿವಕುಮಾರ್ ಬಳಿಕ ಕಾಂಗ್ರೆಸ್ ಶಾಸಕ ರಂಗನಾಥ್‌ರಿಂದ ಆರ್‌ಎಸ್‌ಎಸ್ ಗೀತೆ ಗುಣಗಾನ!

ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್​​​ನ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್, ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದರು. ಅಷ್ಟು ಮಾತ್ರವಲ್ಲದೆ ಡಿಕೆಶಿ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ರಂಗನಾಥ್‌ ಕೂಡಾ ಆರ್‌ಎಸ್‌ಎಸ್‌ ಗೀತೆ ಗುಣಗಾನ ಮಾಡಿದ್ದರು. “ಗೀತೆಯ ಅರ್ಥ ಡಿ ಕೆ ಶಿವಕುಮಾರ್ ಸಾಹೇಬ್ರು ಹಾಡಿದ ಮೇಲೆಯೇ ಓದಿ ತಿಳಿಯಿತು” ಎಂದೂ ಹೇಳಿಕೊಂಡಿದ್ದರು.

ಈ ಎಲ್ಲಾ ಬೆಳವಣಿಗೆ ಬೆನ್ನಲ್ಲೇ ಮಂಗಳವಾರ ಬೆಳಗ್ಗೆ ವಿಧಾನಸೌಧದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ, “ಆರ್‌ಎಸ್‌ಎಸ್‌ ಗೀತೆ ವಿಚಾರದಲ್ಲಿ ನನ್ನಿಂದ ನೋವಾಗಿದ್ದರೆ ಕ್ಷಮೆ ಕೇಳಲು ಸಿದ್ಧ. ಎಲ್ಲರ ಬಳಿಯೂ ಕ್ಷಮೆ ಕೇಳುತ್ತೇನೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಡಿ ಕೆ ಶಿವಕುಮಾರ್‌ ಆರ್​ಎಸ್​ಎಸ್ ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಬೇಕು: ಬಿ ಕೆ ಹರಿಪ್ರಸಾದ್ ಆಗ್ರಹ

ಹಾಗೆಯೇ, “ನಾನು ಯಾವುದೇ ತಪ್ಪು ಮಾಡಿಲ್ಲ. ಒಂದು ವೇಳೆ ತಪ್ಪು ಮಾಡಿದ್ದೇನೆ ಎಂದು ನೀವು ಭಾವಿಸಿದ್ದರೆ ಕ್ಷಮೆಯಿರಲಿ. ಎಲ್ಲ ಕಾಂಗ್ರೆಸ್ ನಾಯಕರ, ಕಾರ್ಯಕರ್ತರ, ಇಂಡಿಯಾ ಒಕ್ಕೂಟದ ನಾಯಕರ ಕ್ಷಮೆ ಕೇಳುತ್ತೇನೆ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...