ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಸಿಎಂ ಡಿ ಕೆ ಶಿವಕುಮಾರ್‌ಗೆ ‘ಸುಪ್ರೀಂ’ನಿಂದ ಬಿಗ್‌ ರಿಲೀಫ್‌

Date:

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿರುವ ಕರ್ನಾಟಕ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಈ ಮೂಲಕ ಡಿಸಿಎಂ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ. 

ನ್ಯಾಯಮೂರ್ತಿ ಬಿ ಆರ್ ಗವಾಯಿ, ನ್ಯಾಯಮೂರ್ತಿ ಸಿ ಟಿ ರವಿಕುಮಾರ್ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು, ಕರ್ನಾಟಕ ಹೈಕೋರ್ಟ್ ಫೆಬ್ರವರಿ 10 ರಂದು ನೀಡಿದ್ದ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

ಡಿ ಕೆ ಶಿವಕುಮಾರ್‌ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕರ್ನಾಟಕ ಹೈಕೋರ್ಟ್‌ ಫೆಬ್ರವರಿ 10ರಂದು ಆದೇಶ ನೀಡಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಹೈಕೋರ್ಟ್‌ ಆದೇಶವನ್ನು ಪ್ರಶ್ನೆ ಮಾಡಿದ್ದ ಸಿಬಿಐ ಸುಪ್ರೀಂ ಕೋರ್ಟ್‌ ಮೊರೆ ಹೋಗಿತ್ತು. ಈ ಕುರಿತು ಚುನಾವಣಾ ಸಂದರ್ಭದಲ್ಲಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌ ವಿಚಾರಣೆಯಯನ್ನು ಜುಲೈ 31ಕ್ಕೆ ನಿಗದಿಪಡಿಸಿತ್ತು.

ಈ ಸುದ್ದಿ ಓದಿದ್ದೀರಾ? ಚುನಾವಣೆಯಲ್ಲಿ ಸೋತ ನಂತರ ವಿದೇಶದಲ್ಲಿ ನೆಲೆಸಲಿರುವ ಪ್ರಧಾನಿ: ಲಾಲು ಪ್ರಸಾದ್‌ ಯಾದವ್

ಪ್ರಕರಣದ ಹಿನ್ನೆಲೆ

ಶಿವಕುಮಾರ್ ಮೇಲೆ ಆದಾಯ ತೆರಿಗೆ ಇಲಾಖೆ 2017ರಲ್ಲಿ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿಯನ್ನು ಆದರಿಸಿ ಜಾರಿ ನಿರ್ದೇಶನಾಲಯವು (ಇ.ಡಿ) ಶಿವಕುಮಾರ್ ವಿರುದ್ಧ ತನಿಖೆ ಆರಂಭಿಸಿತ್ತು.

ಇ.ಡಿ ತನಿಖೆಯನ್ನು ಆಧರಿಸಿ, ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಲು ಸಿಬಿಐ, ರಾಜ್ಯ ಸರ್ಕಾರದ ಅನುಮತಿ ಕೋರಿತ್ತು. ಈ ಸಂಬಂಧ ಸಿಬಿಐ ತನಿಖೆ ನಡೆಸಲು ರಾಜ್ಯ ಸರ್ಕಾರ 2019ರ ಸೆಪ್ಟೆಂಬರ್ 25ರಂದು ಅಧಿಸೂಚನೆ ಹೊರಡಿಸಿತ್ತು. ಇದಾದ ನಂತರ 2020ರ ಅಕ್ಟೋಬರ್ 3ರಂದು ಸಿಬಿಐ ಎಫ್ಐಆರ್ ದಾಖಲಿಸಿತ್ತು.

ಸಿಬಿಐ ದಾಖಲಿಸಿದ್ದ ಎಫ್ಐಆರ್ ಪ್ರಶ್ನಿಸಿ ಡಿ ಕೆ ಶಿವಕುಮಾರ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಬಳಿಕ ಅವರ ಅರ್ಜಿಯನ್ನು ಹೈಕೋರ್ಟ್‌ನ ಏಕಸದಸ್ಯ ಪೀಠ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಡಿ ಕೆ ಶಿವಕುಮಾರ್ ಅವರ ಅರ್ಜಿಯನ್ನು ಪುರಸ್ಕರಿಸಿದ್ದ ಹೈಕೋರ್ಟ್, ಅವರ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತ್ತು. ಬಳಿಕ ಜುಲೈ 17 ರಂದು ಮಧ್ಯಂತರ ತಡೆಯನ್ನು ಮೂರು ವಾರಗಳ ಕಾಲ ವಿಸ್ತರಿಸಿತ್ತು.

2013ರಿಂದ 2018ರ ಕಾಂಗ್ರೆಸ್‌ ಸರ್ಕಾರದ ಕಳೆದ ಅವಧಿಯಲ್ಲಿ ಡಿ ಕೆ ಶಿವಕುಮಾರ್‌ ಅವರು ಇಂಧನ ಖಾತೆ ಸಚಿವರಾಗಿದ್ದರು. ಈ ವೇಳೆ ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ನಡೆಸುತ್ತಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಜನೆ ಬಾಲ್ಯವಿವಾಹ ತಡೆಗೆ ದಾರಿ: ಆರ್ ಕೆ ಸರ್ದಾರ್

ನಮ್ಮ ಭಾರತದ ಕಾನೂನಿನ ಅಡಿಯಲ್ಲಿ ಬಾಲ್ಯವಿವಾಹ ಕಾಯ್ದೆ ಪ್ರಕಾರ 18 ವರ್ಷದೊಳಗಿನವರಿಗೆ...

ಬಾಗೇಪಲ್ಲಿ | ಸಿಪಿಎಂ ಸಂಘಟಿಸುವ ಜವಾಬ್ದಾರಿ ಎಲ್ಲರ ಮೇಲಿದೆ; ಎಂ.ಪಿ.ಮುನಿವೆಂಕಟಪ್ಪ

ಆಧುನಿಕ ಶೋಷಣೆಯಂತಹ ದಬ್ಬಾಳಿಕಾ ಪ್ರವೃತ್ತಿಯನ್ನು ತಡೆದು, ಸಿಪಿಎಂ ಪಕ್ಷದ ಬಲಿಷ್ಟ ಸಂಘಟನೆಯ...

ಗುಬ್ಬಿ | ಬಡ್ಡಿ ದಂಧೆಗೆ ಮತ್ತೋರ್ವ ಬಲಿ : ನಿಟ್ಟೂರು ವಾಸಿ ನೇಣಿಗೆ ಶರಣು; ಆತಂಕದಲ್ಲಿ ಜನತೆ

ಮೀಟರ್ ಬಡ್ಡಿ ದಂಧೆಗೆ ಬೇಕರಿ ಮಾಲೀಕ ಬಲಿಯಾದ ಘಟನೆ ಮಾಸುವ ಮುನ್ನವೇ...

ರಾಮನಗರ | ಸಾಲ ತೀರಿಸಲು ನೆರೆಮನೆಯ ಬಾಲಕಿಯ ಅಪಹರಣಕ್ಕೆ ಯತ್ನ: ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಯುವಕ

ಮನೆ ಬಾಡಿಗೆ ಸೇರಿದಂತೆ ಕೈ ಸಾಲ ತೀರಿಸಲು ಪಕ್ಕದ ಮನೆಯಲ್ಲಿನ ಬಾಲಕಿಯನ್ನೇ...