ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಸಾಮೂಹಿಕ ರಾಜೀನಾಮೆಗೆ ನಿರ್ಧಾರ: ಮೇ 29ರಂದು ಸಭೆ

Date:

ದ.ಕ ಜಿಲ್ಲೆಯ ಇತ್ತೀಚಿನ ಬೆಳವಣಿಗೆ ಮತ್ತು ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯಕ್ಕೆ ಮನನೊಂದು‌ ಸಾಮೂಹಿಕ ರಾಜೀನಾಮೆಗೆ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ತೀರ್ಮಾನ ಮಾಡಿದ್ದಾರೆ.

- Advertisement -

ಇಂದು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಅಲ್ಪಸಂಖ್ಯಾತ ಘಟಕದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಬೂತ್ ಕಮಿಟಿ ಬ್ಲಾಕ್ ಸಮಿತಿ ಜಿಲ್ಲಾ ಘಟಕ, ರಾಜ್ಯ ಘಟಕಗಳ ಹುದ್ದೆಗಳಿಗೆ ರಾಜೀನಾಮಗೆ ತೀರ್ಮಾನ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಾಹುಲ್ ಹಮೀದ್ ಕೆ.ಕೆ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮುಹಮ್ಮದ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ನವಾಝ್, ರಾಜ್ಯ ಅಲ್ಪಸಂಖ್ಯಾತ ಘಟಕದ ನಾಯಕ ನಾಸಿರ್ ಲಕ್ಕಿಸ್ಟಾರ್, ಕೆಪಿಸಿಸಿ ಕಾರ್ಮಿಕ ವಿಭಾಗದ ಪ್ರಧಾನ ಕಾರ್ಯದರ್ಶಿ ವಹಾಬ್ ಕುದ್ರೋಳಿ, ಮಾಜಿ ಪಾಲಿಕೆ ಸದಸ್ಯರಾದ ರವೂಫ್, ಲತೀಫ್ ಕಂದಕ್ ಸೇರಿ ಎಲ್ಲಾ ಬೂತ್ ಮಟ್ಟದ ಹುದ್ದೆಗಳಿಗೆ, ಬ್ಲಾಕ್ ಮಟ್ಟದ ಹುದ್ದೆಗಳಿಗೆ, ಜಿಲ್ಲಾ ಘಟಕ ಮತ್ತು ರಾಜ್ಯ ಘಟಕಗಳ ವಿವಿಧ ಹುದ್ದೆಗಳಿಗೆ ರಾಜೀನಾಮೆ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ.

ಮುಂದಿನ ನಿರ್ಧಾರದ ಬಗ್ಗೆ ಚರ್ಚಿಸಲು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕವು ಮೇ 29ರಂದು ಅಪರಾಹ್ನ 2.30ಕ್ಕೆ ನಗರದ ಬೋಳಾರ ಶಾದಿಮಹಲ್‌ನ ಸಭಾಂಗಣದಲ್ಲಿ ಸಭೆ ಕರೆದಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮೋದಿ ಆಡಳಿತಕ್ಕೆ 11 ವರ್ಷ; ದೇಶ ಉದ್ಧಾರವಾಯಿತೇ?

ಜಿಲ್ಲೆಯಲ್ಲಿ ಸರಣಿ ಕೊಲೆಗಳು ನಡೆಯುತ್ತಿವೆ. ಇದನ್ನು ತಡೆಯುವಲ್ಲಿ ಗೃಹ ಇಲಾಖೆಯ ವೈಫಲ್ಯ ಮತ್ತು ಮುಸ್ಲಿಮರ ಕಡೆಗಣನೆ ಬೇಸತ್ತು ಕಾಂಗ್ರೆಸ್ ಪಕ್ಷದ ಬೂತ್ ಮಟ್ಟದಿಂದ ಹಿಡಿದು ರಾಜ್ಯ ಘಟಕದವರೆಗಿನ ವಿವಿಧ ಹುದ್ದೆಯಲ್ಲಿರುವ ಮುಸ್ಲಿಮ್ ಮುಖಂಡರು ಮತ್ತು ಕಾರ್ಯಕರ್ತರು ಸಾಮೂಹಿಕ ರಾಜೀನಾಮೆ ಪ್ರಕಟಿಸುವ ನಿಟ್ಟಿನಲ್ಲಿ ಈ ಸಭೆ ಕರೆಯಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಮುಹಮ್ಮದ್ ಮತ್ತು ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಕೆ. ಶಾಹುಲ್ ಹಮೀದ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸೌಜನ್ಯಾ ಪ್ರಕರಣ: ಮಂಗಳೂರಿಗೆ ನೂತನ SIT ತಂಡ; ತನಿಖೆಗೆ ಸಿದ್ಧತೆ

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್...

ಎಂಆರ್‌ಪಿಎಲ್ ದುರಂತ: ಮೃತ ಮನೀಶ್ ಕುಟುಂಬಕ್ಕೆ ₹1.20 ಕೋಟಿ ಪರಿಹಾರ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್ (ಸಿಎಚ್‌ಟಿಯು)ನಲ್ಲಿ ಬುಧವಾರ ಸಂಭವಿಸಿದ ದುರಂತದಲ್ಲಿ ಮೃತಪಟ್ಟ...

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...