ದಕ್ಷಿಣ ಕನ್ನಡ | ಭ್ರಷ್ಟಾಚಾರಕ್ಕೆ ಚುನಾವಣಾ ಬಾಂಡ್ ದಾರಿ: ಪ್ರಕಾಶ್ ರಾಜ್

Date:

ಚುನಾವಣಾ ಬಾಂಡ್ ವಿಚಾರದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಸುಳ್ಳು ಹೇಳುತ್ತಿದ್ದಾರೆ. ಚುನಾವಣಾ ಬಾಂಡ್ ರಾಜಕೀಯ ಭ್ರಷ್ಟಾಚಾರಕ್ಕೆ ದಾರಿ ಮಾಡಿಕೊಡುತ್ತದೆ ಎಂದು ನಟ ಪ್ರಕಾಶ್ ರಾಜ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಮಾತನಾಡಿದ ಅವರು, “ಪ್ರಧಾನಿ ಮೋದಿ ತಮ್ಮ ‘ಮನ್‌ ಕಿ ಬಾತ್‌’ನಲ್ಲಿ ಚುನಾವಣಾ ಬಾಂಡ್‌ ಲೂಟಿಯ ಬಗ್ಗೆ ಯಾಕೆ ಮಾತನಾಡಲಿಲ್ಲ. ಚುನಾವಣೆಗೆ ಹಣಕ್ಕಾಗಿ ಬಾಂಡ್ ಮೂಲಕ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ. ಇದು ಪ್ರಪಂಚದ ದೊಡ್ಡ ಹಗರಣ” ಎಂದು ಕಿಡಿಕಾರಿದ್ದಾರೆ.

“ಲಾಟರಿ ಏಜೆಂಟ್ ಮರ್ಟಿನ್‌ ಅವರಿಂದ ಚುನಾವಣಾ ಬಾಂಡ್‌ ತೆಗೆದುಕೊಂಡಿದ್ದಾಗಿ ಡಿಎಂಕೆ ಹೇಳಿಕೊಂಡಿದೆ. ಇದೇ ರೀತಿ, ಸತ್ಯ ಹೇಳಲು ಪ್ರಧಾನಿ ಮೋದಿ ಸಿದ್ದರಿಲ್ಲ. ಬಾಂಡ್‌ನಿಂದ ಪಡೆದ ಹಣದಲ್ಲಿ ಶಾಸಕರನ್ನು ಖರೀದಿಸಿದ್ದಾರಾ” ಎಂದು ಪ್ರಶ್ನಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬಿಜೆಪಿಗರು ನಮ್ಮಲ್ಲಿ 330 ಸಂಸದರಿದ್ದಾರೆ. ನಾವು ಚುನಾವಣಾ ಬಾಂಡ್‌ ಮೂಲಕ 6,000 ಕೋಟಿ ರೂ. ಪಡೆದ್ದೇವೆ. ಕಡಿಮೆ ಸಂಸದರಿರುವ ಪಕ್ಷದವರು ಜಾಸ್ತಿ ಹಣ ಪಡೆದಿದ್ದಾರೆ ಎನ್ನುತ್ತಿದ್ದಾರೆ. ಇದರರ್ಥ ಏನು?” ಎಂದು ಕಿಡಿಕಾರಿದ್ದಾರೆ.

“ಆಳುವ ಪಕ್ಷವನ್ನು ನಾನು ಪ್ರಶ್ನಿಸುತ್ತೇನೆ. ಯಾರ ಒರವಾಗಿಯೂ ಪ್ರಚಾರ ಮಾಡಲು ಹೋಗುವುದಿಲ್ಲ. ಜನರು ಪಕ್ಷ ನೋಡಿ ಮತ ಹಾಕಬಾರದು. ಕೆಲಸ ಮಾಡುವ, ನಮ್ಮ ಕೈಗೆ ಸಿಗಬಲ್ಲ ಅಭ್ಯರ್ಥಿಗೆ ಮತ ಚಲಾಯಿಸಬೇಕು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಸಂಪತ್ತಿನ ಬಗ್ಗೆ ರಾಹುಲ್ ಮಾತನಾಡಿಲ್ಲ; ಬಿಜೆಪಿ ಗೊಂದಲ ಸೃಷ್ಟಿಸುತ್ತಿದೆ: ಸಿಎಂ ರೇವಂತ್ ರೆಡ್ಡಿ

ತೆಲಂಗಾಣದಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿ, ಅಧಿಕಾರ ಹಿಡಿದ ಕೆಲ ತಿಂಗಳುಗಳಲ್ಲೇ...

ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ | ಕೆಲವೇ ಹೊತ್ತಲ್ಲಿ ಎಸ್‌ಐಟಿ ರಚನೆ: ಡಾ. ಜಿ ಪರಮೇಶ್ವರ್‌

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ...

ಕರ್ನಾಟಕಕ್ಕೆ ಇಂದು ಮೋದಿ; ಹಾಸನ ಪೆನ್‌ಡ್ರೈವ್ ಪ್ರಕರಣದ ಬಗ್ಗೆ ಮಾತಾಡ್ತಾರಾ ಪ್ರಧಾನಿ?

ಮಹಿಳೆಯರ ರಕ್ಷಣೆಗಾಗಿ 'ಬೇಟಿ ಬಚೋವೋ - ಬೇಟಿ ಪಡಾವೋ' ಎಂಬ ಘೋಷಣೆಯನ್ನು...

ಉದ್ಧವ್‌, ಶರದ್ ಪರವಾಗಿ ಅನುಕಂಪದ ಅಲೆಯಿದೆ ಎಂದ ಅಜಿತ್ ಪವಾರ್ ಬಣದ ನಾಯಕ!

"ರಾಜ್ಯದಲ್ಲಿ (ಮಹಾರಾಷ್ಟ್ರ) ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಪರವಾಗಿ ಅನುಕಂಪದ...