ದಕ್ಷಿಣ ಕನ್ನಡ | ನೆರೆ ಹಾವಳಿ ಪ್ರದೇಶಗಳಿಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ, ಪರಿಹಾರ ಪಡೆಯಲು ಒಪ್ಪಿದ ರೈತರು

Date:

ದಕ್ಷಿಣ ಕನ್ನಡ ಜಿಲ್ಲೆಯ ನೆರೆ ಹಾವಳಿ ಪ್ರದೇಶಗಳಿಗೆ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

- Advertisement -

ಭಾರೀ ಮಳೆಯಿಂದಾಗಿ ಮಂಗಳೂರಿನ ಮುಳುಗಡೆ ಸ್ಥಳಗಳಿಗೆ ಭೇಟಿ ನೀಡಿ ನಿವಾಸಿಗಳ ಜೊತೆ ಚರ್ಚಿಸಿದರು. ನಂತರ ಅದ್ಯಪಾಡಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿ ಅವಲೋಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಸಚಿವರ ಜೊತೆ ಚರ್ಚೆ ನಡೆಸಿದ ಅದ್ಯಪಾಡಿ ಸ್ಥಳೀಯ ನಿವಾಸಿಗರು, ಪ್ರತಿ ವರ್ಷ ಅದ್ಯಪಾಡಿಯಲ್ಲಿ ಪಾಲ್ಗುಣಿ ನದಿಯ ನೆರೆ ಪ್ರವಾಹದ ಬಗ್ಗೆ ಮಾಹಿತಿ ನೀಡಿದರು.

ತೋಟ ಗದ್ದೆಗಳು ಮುಳುಗಿರುವ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಸ್ಥಳದಲ್ಲೇ ಜಿಲ್ಲಾಧಿಕಾರಿಗಳಿಗೆ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದರು. ಹಾಗೆಯೇ ಅದ್ಯಪಾಡಿಯ ಅಕ್ಕ ಪಕ್ಕದ ಹಳ್ಳಿಗಳಿಗೆ ಪಲ್ಗುಣಿ ನದಿ ನೆರೆ ಹಾವಳಿ ತಡೆಯಲು, ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ತಜ್ಞರಿಂದ ವರಿದಿ ಪಡೆದು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.

ನೆರೆ ಪರಿಹಾರ ನಿರಾಕರಿಸಿದ ರೈತರು

ನೆರೆ ಪರಿಹಾರ ತೆಗೆದುಕೊಳ್ಳುವಂತೆ ನಿವಾಸಿಗರಿಗೆ ಮನವಿ ಮಾಡಿದ ದಿನೇಶ್ ಗುಂಡೂರಾವ್, “ನೆರೆ ಪರಿಹಾರಕ್ಕೂ ಶಾಶ್ವತ ಪರಿಹಾರಕ್ಕೂ ಸಂಬಂಧವಿಲ್ಲ. ನೆರೆ ಪರಿಹಾರ ಪಡೆದರೆ ಶಾಶ್ವತ ಪರಿಹಾರ ಆಗಲ್ಲ ಎಂಬ ಭಾವನೆ ಬೇಡ‌. ಒಂದಕ್ಕೂಂದು ಲಿಂಕ್ ಮಾಡುವ ಅಗತ್ಯವಿಲ್ಲ” ಎಂದರು.

“ಭತ್ತದ ಗದ್ದೆ ತೋಟ ಮುಳುಗಡೆಯಿಂದ ನಷ್ಟ ಅನುಭವಿಸಿದ್ದೀರಾ. ಅದಕ್ಕೆ ಸರ್ಕಾರದಿಂದ ಸಿಗುವ ನೆರೆ ಪರಿಹರವನ್ನ ಪಡೆಯಿರಿ. ಪಲ್ಗಣಿ ನದಿಯಿಂದಾಗುವ ನೆರೆ ಹಾವಳಿ ತಡೆಯುವ ಶಾಶ್ವತ ಪರಿಹಾರ ಒದಸುವ ಜವಾಬ್ದಾರಿ ನಮಗೆ ಬಿಡಿ” ಎಂದು ರೈತರನ್ನು ಮನವೊಲಿಸಿದರು.

ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ಕಳೆದ 11 ವರ್ಷದಿಂದ ನೆರೆ ಪರಿಹಾರವನ್ನ ತಿರಸ್ಕರಿಸುತ್ತಾ ಬಂದಿದ್ದ ಅದ್ಯಪಾಡಿ ನಿವಾಸಿಗರು.
ಸಚಿವರ ಮನವಿಗೆ ಒಪ್ಪಿಗೆ ಸೂಚಿಸಿ ಪರಿಹಾರ ಪಡೆಯುವುದಾಗಿ ಸ್ಥಳೀಯ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...

ಯೂಸುಫ್ ಪಠಾಣ್‌ಗೆ ಭರ್ಜರಿ ಕೊಡುಗೆ: ‘ಬಿಜೆಪಿ ವಾಷಿಂಗ್ ಮಷೀನ್’ ಕುತಂತ್ರಕ್ಕೆ ಇನ್ನೊಂದು ಕನ್ನಡಿ!

ಬಿಜೆಪಿಯನ್ನು ‘ವಾಷಿಂಗ್ ಮಷೀನ್’ ಎಂದು ಟೀಕಿಸುವುದಕ್ಕೆ ಯೂಸುಫ್ ಪಠಾಣ್ ಅವರ ಭೂಮಿ...

ಅಪ್ರಾಪ್ತ ಮಗನ ಕಾರು ಅಪಘಾತದಲ್ಲಿ ಮೂವರ ಸಾವು; ತಂದೆ ವಿರುದ್ಧದ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಅಪ್ರಾಪ್ತ ವಯಸ್ಸಿನ ಮಗನಿಗೆ ಕಾರು ಚಲಾಯಿಸಲು ಅವಕಾಶ ನೀಡಿದ ಆರೋಪ ಎದುರಿಸುತ್ತಿರುವ...

ಝುಬಿನ್ ಗರ್ಗ್‌ಗೆ ನ್ಯಾಯಕ್ಕಾಗಿ ಆಗ್ರಹ: ನೂರಕ್ಕೂ ಹೆಚ್ಚು ಪ್ರತಿಭಟನಾಕಾರರು ಅಸ್ಸಾಂ ಪೊಲೀಸ್ ವಶಕ್ಕೆ

ಅಸ್ಸಾಂನ ಪ್ರಸಿದ್ಧ ಸಾಂಸ್ಕೃತಿಕ ಪ್ರತಿಭೆ, ಗಾಯಕ ಝುಬಿನ್ ಗರ್ಗ್ ಅವರ ಸಾವಿಗೆ...