ಬಿಜೆಪಿ ಸ್ಪೀಕರ್ ಹುದ್ದೆಯನ್ನು ಉಳಿಸಿಕೊಂಡರೆ ಅಪಾಯಕಾರಿ: ಎಎಪಿ ಸಂಸದ

Date:

ಹೊಸ ಲೋಕಸಭೆಯಲ್ಲಿ ಬಿಜೆಪಿ ಸ್ಪೀಕರ್ ಹುದ್ದೆಯನ್ನು ಉಳಿಸಿಕೊಂಡರೆ ‘ಸಂಸದೀಯ ಸಂಪ್ರದಾಯಗಳಿಗೆ ಅಪಾಯಕಾರಿ’ ಎಂದು ಎಎಪಿ ಸಂಸದ ಸಂಜಯ್ ಸಿಂಗ್ ಆತಂಕ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಕುದುರೆ ವ್ಯಾಪಾರ ಮತ್ತು ಸಾಂವಿಧಾನಿಕ ನಿಬಂಧನೆಗಳ ಉಲ್ಲಂಘನೆಯ ಸಾಧ್ಯತೆಯ ಬಗ್ಗೆ ಪ್ರಸ್ತಾಪಿಸಿದ್ದಾರೆ.

ಲಕ್ನೋದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, 16 ಸಂಸದರನ್ನು ಹೊಂದಿರುವ ಎನ್‌ಡಿಎಯ ಎರಡನೇ ಅತಿದೊಡ್ಡ ಸದಸ್ಯ ಪಕ್ಷವಾದ ಟಿಡಿಪಿ ಈ ಹುದ್ದೆಯನ್ನು ಅಲಂಕರಿಸಬೇಕು ಎಂದು ಅಭಿಪ್ರಾಯಿಸಿರುವ ಎಎಪಿ ಸಂಸದ, ಬಿಜೆಪಿ ನಾಯಕರು ಸ್ಪೀಕರ್ ಆದರೆ ಅಪಾಯವಿದೆ ಎಂದಿದ್ದಾರೆ.

ಇದನ್ನು ಓದಿದ್ದೀರಾ?  ಮೂವರು ಪ್ರಭಾವಿ ಬಿಜೆಪಿ ನಾಯಕರುಗಳಿಗೆ ಮೋದಿ ಸಂಪುಟದಲ್ಲಿ ಅವಕಾಶವಿಲ್ಲ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ದೇಶದ ಸಂಸತ್ತಿನ ಇತಿಹಾಸದಲ್ಲಿ ಎಂದಿಗೂ 150ಕ್ಕೂ ಹೆಚ್ಚು ಸಂಸದರನ್ನು ಅಮಾನತುಗೊಳಿಸಿಲ್ಲ. ಆದರೆ ಬಿಜೆಪಿ ಅದನ್ನು ಮಾಡಿದೆ. ಆದ್ದರಿಂದ, ಸ್ಪೀಕರ್ ಬಿಜೆಪಿಯವರಾಗಿದ್ದರೆ, ಸಂವಿಧಾನವನ್ನು ಉಲ್ಲಂಘಿಸುವ ಮೂಲಕ ವಿಧೇಯಕಗಳನ್ನು ಅನಿಯಂತ್ರಿತ ರೀತಿಯಲ್ಲಿ ಅಂಗೀಕರಿಸಲಾಗುತ್ತದೆ” ಎಂದು ಆರೋಪಿಸಿದರು.

“ಮುಂದಿನ ದಿನಗಳಲ್ಲಿ ಟಿಡಿಪಿ, ಜೆಡಿಯು ಮತ್ತು ಇತರ ಸಣ್ಣ ಪಕ್ಷಗಳಲ್ಲಿ ಬಿಜೆಪಿ ಬಿರುಕು ತಂದು ಆ ಪಕ್ಷದ ಮುಖಂಡರು ಬಿಜೆಪಿಗೆ ಬಲವಂತವಾಗಿ ಸೇರಿಕೊಳ್ಳುವಂತೆ ಮಾಡುತ್ತದೆ. ಬಿಜೆಪಿಗೆ ಇಂತಹ ಇತಿಹಾಸವೇ ಇರುವುದು” ಎಂದು ಹೇಳಿದ್ದಾರೆ.

ಸ್ಪೀಕರ್ ಹುದ್ದೆಯನ್ನು ಹೊಸ ಎನ್‌ಡಿಎ ಸರ್ಕಾರದ ‘ಮೊದಲ ಪರೀಕ್ಷೆ’ ಎಂದು ಕರೆದ ಸಿಂಗ್, ಈ ಹುದ್ದೆ ಬಿಜೆಪಿಯಲ್ಲೇ ಉಳಿದರೆ ‘ಧ್ವನಿ ಎತ್ತುವ ಸಂಸದರನ್ನು ಸದನದಿಂದ ಹೊರಹಾಕಲಾಗುತ್ತದೆ’ ಎಂದು ನಾನು ಮತ್ತು ಪಕ್ಷ ನಂಬುತ್ತದೆ ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

FACT CHECK | ತಾಯಿಯೋರ್ವಳು ತನ್ನ ಮಗನಿಗೆ ನಿರ್ದಯವಾಗಿ ಹೊಡೆಯುತ್ತಿರುವ ವಿಡಿಯೋ ಕರ್ನಾಟಕದ್ದಲ್ಲ; ಏನಿದು ಪ್ರಕರಣ?

ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾಗಳಲ್ಲಿ ತಾಯಿಯೋರ್ವಳು ತನ್ನ ಮಗನಿಗೆ ನಿರ್ದಯವಾಗಿ...

ಉತ್ತರ ಪ್ರದೇಶದ ಕನ್ವರ್ ಯಾತ್ರೆಯಲ್ಲಿ ಅಂಗಡಿ ಮಾಲೀಕರ ಹೆಸರು ಪ್ರದರ್ಶಿಸಲು ಆದೇಶ: ಸುಪ್ರೀಂನಲ್ಲಿ ಅರ್ಜಿ

ಕನ್ವರ್‌ ಯಾತ್ರೆ ಯುದ್ದಕ್ಕೂ ಇರುವ ಅಂಗಡಿ ಮಾಲೀಕರು ತಮ್ಮ ಹೆಸರುಗಳನ್ನು ಕಡ್ಡಾಯವಾಗಿ...

ಬಿಜೆಪಿ ನೇತೃತ್ವದ ಸರ್ಕಾರ ಹೆಚ್ಚು ಕಾಲ ಉಳಿಯದು: ಟಿಎಂಸಿ ರ್‍ಯಾಲಿಯಲ್ಲಿ ಅಖಿಲೇಶ್, ಮಮತಾ

ಕೇಂದ್ರದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು...