ದಾವಣಗೆರೆ | ಆಗ್ನೇಯ ಪದವೀಧರರ ಮತದಾರ ನೊಂದಣಿ ವಿಸ್ತರಿಸಿ: ಪ್ರಗತಿಪರ ಮುಖಂಡರ ಆಗ್ರಹ

Date:

ಆಗ್ನೇಯ ಪದವೀಧರರ ಮತದಾರ ನೊಂದಣಿ ಪ್ರಕ್ರಿಯೆ ವಿಸ್ತರಣೆಗೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಮುಖಂಡರುಗಳು ದಾವಣಗೆರೆ ಜಿಲ್ಲೆ ಜಗಳೂರು ನಗರದ ತಾಲೂಕು ಕಛೇರಿ ಮುಂಭಾಗದಲ್ಲಿ ಜಗಳೂರು ತಹಶೀಲ್ದಾರ್ ಸೈಯದ್‌ ಕಲೀಂ ಉಲ್ಲಾ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

- Advertisement -

ಈ ವೇಳೆ ವಕೀಲ ಆ‌ರ್.ಓಬಳೇಶ್ ಮಾತನಾಡಿ, “ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ನೊಂದಣಿಗೆ ನ.6 ರಂದು ದಿನಾಂಕ ನಿಗದಿಗೊಳಿಸಿದ ಪರಿಣಾಮ ತಾಲ್ಲೂಕಿನಲ್ಲಿ ಸಾವಿರಾರು ಪದವೀಧರರು ಮತದಾನ ಅರ್ಹತೆಯಿಂದ ವಂಚಿತರಾಗುತ್ತಿದ್ದಾರೆ. ತಾಲ್ಲೂಕಿನಾದ್ಯಂತ ಕೇವಲ 3025 ಮತದಾರರು ಅರ್ಜಿಸಲ್ಲಿಸಿದ್ದಾರೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

“ಹಳ್ಳಿಗಳಲ್ಲಿ ಬಹುತೇಕ ಪದವೀಧರರು, ಸೇವಾನಿರತ ಶಿಕ್ಷಕರು, ವಕೀಲರು, ದುಡಿಮೆ ಅರಸಿ ನಗರಪ್ರದೇಶಗಳಿಗೆ ತೆರಳಿರುವ ನಿರುದ್ಯೋಗಿ ಪದವೀಧರರು ಮಾಹಿತಿ ಕೊರತೆಯಿಂದ, ಇನ್ನು ಕೆಲವರು ಸಮರ್ಪಕ ದಾಖಲಾತಿಗಳಿಲ್ಲದ ಕಾರಣ ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲಾಗಿಲ್ಲ. ಆದ್ದರಿಂದ ಸರ್ಕಾರ ಮತದಾರರ ನೊಂದಣಿಗೆ ಇನ್ನೂ ಕೆಲದಿನಗಳಿಗೆ ವಿಸ್ತರಣೆಗೊಳಿಸಿ ಅವಕಾಶ ಕಲ್ಪಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಚಿತ್ರದುರ್ಗ | ಕನಕದಾಸರ ಸಮಾಜ ಸುಧಾರಣೆ ಮಾನವೀಯ ಮೌಲ್ಯಗಳು ಇಂದಿಗೂ ಪ್ರಸ್ತುತ: ಸಚಿವ ಡಿ ಸುಧಾಕರ್

ಮನವಿ ಸಲ್ಲಿಸುವ ವೇಳೆ ಸಮಾಜಕಲ್ಯಾಣ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ಬಿ. ಮಹೇಶ್ವರಪ್ಪ, ಜಿ.ಶಂಭುಲಿಂಗಪ್ಪ, ಮಾನವಹಕ್ಕುಗಳ ಹೋರಾಟ ಸಮಿತಿಯ ಪದಾಧಿಕಾರಿಗಳಾದ ಜಿ.ತಿಪ್ಪೇಸ್ವಾಮಿ, ರಕೀಬ್, ಪ್ರದೀಪ್, ಶುಕ್ರದೆಸೆ ಸಂಪಾದಕ, ಪ್ರಗತಿಪರ ಹೋರಾಟಗಾರರಾದ ರಾಜಪ್ಪ ವ್ಯಾಸಗೊಂಡನಹಳ್ಳಿ, ದಸಂಸ ತಾಲೂಕಾಧ್ಯಕ್ಷ ಸತೀಶ್ ಮಲೆಮಾಚಿಕೆರೆ, ಮಾದಿಹಳ್ಳಿ ಮಂಜುನಾಥ್, ಗೊಲ್ಲರಹಟ್ಟಿ ತಿಪ್ಪೇಸ್ವಾಮಿ, ಧನ್ಯಕುಮಾರ್ ಎಚ್.ಎಂ ಹೊಳೆ, ಚಂದ್ರಪ್ಪ, ಗೌರಿಪುರ ಸತ್ಯಮೂರ್ತಿ, ಉಮೇಶ್ ಸೇರಿದಂತೆ ಇತರರು ಹಾಜರಿದ್ದರು.‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...