ದಾವಣಗೆರೆ | ಯುವ ಕಾಂಗ್ರೆಸ್ ಚುನಾವಣೆ; ಮರು ಎಣಿಕೆಗೆ ಎನ್ ಎಸ್ ಯು ಐ ಅಧ್ಯಕ್ಷ ಆಗ್ರಹ.

Date:

ಚಿತ್ರದುರ್ಗದ ಬಳಿಕ ದಾವಣಗೆರೆಯಲ್ಲೂ ಇತ್ತೀಚಿಗೆ ನಡೆದ ಯುವ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆ ಪಾರದರ್ಶಕವಾಗಿ ನಡೆದಿಲ್ಲ ಎನ್ನುವ ಆರೋಪ ಕೇಳಿ ಬಂದಿದ್ದು, ದಾವಣಗೆರೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮತಗಳ ಮರು ಎಣಿಕೆಗೆ ಒತ್ತಾಯಿಸಿದ್ದಾರೆ.

- Advertisement -

ದಾವಣಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ದಾವಣಗೆರೆ ದಕ್ಷಿಣ ಕ್ಷೇತ್ರದ ಎನ್‌ ಎಸ್ ಯು ಐ ಅಧ್ಯಕ್ಷ ಸೈಯದ್ ಸುಹೇಲ್ “ಯುವ ಕಾಂಗ್ರೆಸ್ ದಾವಣಗೆರೆಯ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ವಂಚನೆ ಆಗಿದ್ದು, ಪಾರದರ್ಶಕವಾಗಿ ನಡೆದಿಲ್ಲ, ಅಕ್ರಮವಾಗಿರುವ ಶಂಕೆ ವ್ಯಕ್ತವಾಗಿದೆ. ಮರು ಎಣಿಕೆ ಮಾಡಿ ಚುನಾವಣಾ ಫಲಿತಾಂಶ ಘೋಷಿಸಿ, ಅರ್ಹ ಅಭ್ಯರ್ಥಿ ಆಯ್ಕೆ ಮಾಡಬೇಕು” ಎಂದು ಚುನಾವಣಾಧಿಕಾರಿಗಳನ್ನು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

“ಕರ್ನಾಟಕ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ದಾವಣಗೆರೆ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ರೆಹಮತ್ ಪೈಲ್ವಾನ್ ಸ್ಪರ್ಧಿಸಿದ್ದು, ಕಾಂಗ್ರೆಸ್ ಗೆ 28-30 ಸಾವಿರ ಸದಸ್ಯತ್ವ ತಂದುಕೊಟ್ಟಿದ್ದಾರೆ. ಆದರೆ ಯೂತ್ ಕಾಂಗ್ರೆಸ್ ಚುನಾವಣೆಯಲ್ಲಿ 10067 ಮತ ಗಳಿಸಿದ್ದಾರೆ.‌ ಉಳಿದ ಮತಗಳು ಏನಾದವು ಎನ್ನುವ ಶಂಕೆ ವ್ಯಕ್ತವಾಗಿದೆ. ಹೊನ್ನಾಳಿ ವಿಧಾನಸಭಾ ವ್ಯಾಪ್ತಿಯ ಏಳು ಸಾವಿರ ಮತ ತಡೆಹಿಡಿಯಲಾಗಿದೆ. ಅದರಲ್ಲಿ ಐದು ಸಾವಿರ ಮತಗಳು ರೆಹಮತ್ ಅವರಿಗೆ ಸೇರಿದ್ದು ಎಂಬ ಮಾಹಿತಿ ಇದೆ” ಎಂದು ಅನುಮಾನ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬೇಡಿಕೆ ಈಡೇರಿಸುವಂತೆ ಗ್ರಾಮ ಆಡಳಿತಾಧಿಕಾರಿಗಳ ಮೌನ ಪ್ರತಿಭಟನೆ

“ನಮಗೆ ಪರಿಪೂರ್ಣ ಫಲಿತಾಂಶ ಬೇಕು, ಇದರಲ್ಲಿ ರೆಹಮತ್ ಪೈಲ್ವಾನ್‌ರವರ ಸದಸ್ಯತ್ವದ ಮತ್ತು ಮತಗಳ ಬಗ್ಗೆ ಖಚಿತವಾದ ಮಾಹಿತಿ ನೀಡಬೇಕು. ಕಾಂಗ್ರೆಸ್ ಪಕ್ಷಕ್ಕಾಗಿ ಅವರು ಜೈಲುವಾಸ ಅನುಭವಿಸಿದ್ದರು. ವಿಧ್ಯಾರ್ಥಿ ಘಟಕದ ಅಧ್ಯಕ್ಷರಾಗಿ, 12 ವರ್ಷಗಳಿಂದ ಕಾಂಗ್ರೆಸ್ ಗಾಗಿ ದುಡಿಯುತ್ತಿದ್ದಾರೆ. ರೆಹಮತ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸೂಕ್ತ ಆಯ್ಕೆ. ಚುನಾವಣೆಯಲ್ಲಿ ಅವರಿಗೆ ಅನ್ಯಾಯವಾಗಿದೆ. ನಾವು ಚುನಾವಣೆ ಅಧಿಕಾರಿಗಳಿಗೆ ಹಲವು ಬಾರಿ ಕರೆ ಮಾಡಿದರೂ, ನಮ್ಮ ಕರೆಗಳಿಗೆ ಸ್ಪಂದಿಸುತ್ತಿಲ್ಲ. ನಮ್ಮ ಪಕ್ಷದ ಚುನಾವಣೆಗಳಲ್ಲಿ ಈ ರೀತಿಯ ಕೆಲಸಗಳು ಏಕೆ ನಡೆಯುತ್ತಿವೆ. ಚುನಾವಣಾ ಸಮಿತಿ ಯಾಕೆ ಈ ರೀತಿ ವರ್ತಿಸಿದೆ ತಿಳಿಯುತ್ತಿಲ್ಲ.‌ ದಯವಿಟ್ಟು ರೆಹಮತ್ ಪೈಲ್ವಾನ್‌ರವರ ಸದಸ್ಯತ್ವ ಮತಗಳನ್ನು ಮರು-ಎಣಿಸಿ ಸರಿಯಾದ ಫಲಿತಾಂಶ ಘೋಷಿಸಬೇಕು” ಎಂದು ಒತ್ತಾಯಿಸಿದರು.

ಸುದ್ದಿಗೋಷ್ಟಿಯಲ್ಲಿ ಡಿ.ಮನೋಜ್. ಜಾವೀದ್, ಮಹಮ್ಮದ್ ಬಿಲಾಲ್, ಸುಹಾಸ್ ಪಾಲ್ಗೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...

ದೆಹಲಿ ಮೆಟ್ರೋಗೆ ಪೊಲೀಸ್ ಇಲಾಖೆ ಪತ್ರ: 57 ಸ್ಟೇಷನ್‌ಗಳ ಪ್ರವೇಶ-ನಿರ್ಗಮನ ದ್ವಾರ ಮುಚ್ಚಲು ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅಕ್ಟೋಬರ್ 10ರಂದು ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ...

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...